ರೈತರನ್ನು ಬೀದಿಗೆ ತಂದಿದ್ದೇ ಬಿಜೆಪಿ ಸಾಧನೆ
Team Udayavani, Dec 29, 2020, 5:33 PM IST
ದಾವಣಗೆರೆ: ಕಾಂಗ್ರೆಸ್‌ನ 135ನೇ ವರ್ಷದ ಸಂಸ್ಥಾಪನಾ ವರ್ಷಾಚರಣೆ ಪ್ರಯುಕ್ತ ಸೋಮವಾರನಗರದಲ್ಲಿ ಬೈಕ್ ರ್ಯಾಲಿ ಹಾಗೂ ಸಮರ್ಪಣಾ ಸಮಾವೇಶ ನಡೆಯಿತು.
ಬೆಳಿಗ್ಗೆ ಮಹಾನಗರ ಪಾಲಿಕೆ ಆವರಣದ ಮಹಾತ್ಮ ಗಾಂಧಿ, ಡಾ| ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಪ್ರತಿಮೆ ಮತ್ತು ಹುತಾತ್ಮ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಪುಷ್ಪ ನಮನಸಲ್ಲಿಸಲಾಯಿತು. ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪನವರ ನೇತೃತ್ವದಲ್ಲಿ ಮಹಾನಗರಪಾಲಿಕೆ ಆವರಣದಿಂದ ಹೊರಟ ಬೈಕ್ ರ್ಯಾಲಿನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯ ಎಸ್.ಎಸ್. ಭವನದಲ್ಲಿ ನಡೆದ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ರೈತರು ಸ್ವಾವಲಂಬಿ ಜೀವನನಡೆಸಲು ಅನೇಕ ಜನಪರ ಕಾರ್ಯಕ್ರಮಗಳನ್ನು ತಂದಿದ್ದಕಾಂಗ್ರೆಸ್ ಪಕ್ಷವನ್ನು ಮೂದಲಿಸಿ ಅಧಿಕಾರಕ್ಕೆ ಬಂದ ಬಿಜೆಪಿ, ರೈತರನ್ನು ಬೀದಿಗೆ ತಂದಿದೆ. ಇದೇ ಆ ಪಕ್ಷದದೊಡ್ಡ ಕೊಡುಗೆ ಎಂದು ಟೀಕಿಸಿದರು. ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ,
ಬಿಜೆಪಿ ಸರ್ಕಾರದ ಆಡಳಿತದಿಂದ ಜನ ಬೇಸತ್ತಿದ್ದು, ಅರಾಜಕತೆ ಮೂಡಿದೆ. ದೇಶವನ್ನು ಜಾತಿ-ಧರ್ಮದ ವಿಷಯದಲ್ಲಿ ಒಡೆಯಲಾಗುತ್ತಿದೆ. ಬಿಜೆಪಿಗರು ದೇಶದ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಅಂಬಾನಿ, ಆದಾನಿಯಂತಹ ಉದ್ಯಮಿಗಳಿಗೆ
ಮಾರಾಟ ಮಾಡುತ್ತಿದ್ದಾರೆ. ಅದರ ಬದಲು ಇಡೀ ದೇಶವನ್ನೇ ಅವರಿಗೆ ಮಾರಾಟ ಮಾಡಲಿ ಎಂದುವ್ಯಂಗ್ಯವಾಡಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್,ಜಿಪಂ ಸದಸ್ಯ ಜಿ.ಸಿ. ನಿಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಪಾಲಿಕೆ ಸದಸ್ಯ ಚಮನ್ ಸಾಬ್, ಮಾಜಿ ಸದಸ್ಯ ಕೆ.ಜಿ. ಶಿವಕುಮಾರ್, ಅಲಿ ರಹಮತ್, ಮೈನುದ್ದೀನ್, ಸೇವಾದಳದ ಡೋಲಿ ಚಂದ್ರು, ಅಬ್ದುಲ್ ಜಬ್ಟಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.