ಕೇಂದ್ರ ಸರ್ಕಾರದ ಧೋರಣೆಗೆ ಕಾಂಗ್ರೆಸ್ ಕಿಡಿ
ಬೆಲೆ ಏರಿಕೆ ನಿಯಂತ್ರಣ ಮಾಡದಿದ್ರೆ ಉಗ್ರ ಹೋರಾಟ ಅನಿವಾರ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ
Team Udayavani, Apr 5, 2022, 2:15 PM IST
ದಾವಣಗೆರೆ: ಅಚ್ಚೇ ದಿನ್ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ಔಷಧಗಳ ಬೆಲೆ ಹೆಚ್ಚಳದ ಮೂಲಕ ಜನ ಜೀವನ ದುಸ್ತರ ಮಾಡುತ್ತಿದೆ ಎಂದು ಆರೋಪಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಶ್ರೀ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಔಷಧಗಳ ದರ ಏರಿಕೆಯಿಂದ ಜನರು ಜೀವನ ನಡೆಸುವುದೇ ಕಷ್ಟವಾಗುತ್ತಿದೆ. ಅಚ್ಚೇ ದಿನ್ ತರಲಾಗುವುದು ಎಂದು ಜನರಿಗೆ ಹೇಳಿ ಅಧಿಕಾರಕ್ಕೆ ಬಂದಿರುವ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರಿಗೆ ಅತ್ಯಂತ ಕೆಟ್ಟ ದಿನಗಳನ್ನು ತಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಂತ್ರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದಿಂದ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿ, ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರು ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ದೂರಿದರು. ದಾವಣಗೆರೆ ಉತ್ತರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಗಾನಹಳ್ಳಿ ಪರಶುರಾಮ್ ಮಾತನಾಡಿ, ರೈತರು ಬೆಳೆದ ಬೆಳೆಗೆ ಸಮರ್ಪಕ ಬೆಲೆ ನೀಡದ ಕೇಂದ್ರ ಸರ್ಕಾರ ರೈತರು ಖರೀದಿಸುವ ಗೊಬ್ಬರ, ಬಿತ್ತನೆ ಬೀಜಗಳ ದರವನ್ನು ಹೆಚ್ಚಿಸುವ ಮೂಲಕ ಅನ್ನದಾತ ಸಂಕಷ್ಟದ ಪರಿಸ್ಥಿತಿಗೆ ಬರುವಂತೆ ಮಾಡಲಾಗಿದೆ ಎಂದು ಆರೋಪಿಸಿದರು.
ದಾವಣಗೆರೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮಾತನಾಡಿ, ದೇಶದಲ್ಲಿ ಹಿಂದೂ ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮ ಜಾತಿಯವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ. ಬಿಜೆಪಿಯವರು ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಹಿಜಾಬ್, ಹಲಾಲ್ ಎಂದು ವಿವಾದ ಎಬ್ಬಿಸುವ ಮೂಲಕ ಸಮಾಜದಲ್ಲಿ ಶಾಂತಿ ಕೆಡಿಸುತ್ತಿದ್ದಾರೆ ಎಂದು ದೂರಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ನಾಗರತ್ನಮ್ಮ ಮಾತನಾಡಿ, ಧರ್ಮ ಮತ್ತು ರಾಜಕಾರಣವನ್ನು ಒಟ್ಟು ಮಾಡಿ ಕೋಮುವಾದಿ ಆಡಳಿತ ನಡೆಸುವ ಬಿಜೆಪಿಯಿಂದಾಗಿ ಮುಂದೊಂದು ದಿನ ಜನ ಬೆಲೆ ತೆರಬೇಕಾಗುತ್ತದೆ ಎಂದರು.
ದಾವಣಗೆರೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್ ,ನಗರಪಾಲಿಕೆ ಸದಸ್ಯರಾದ ಎ.ನಾಗರಾಜ್, ಕೆ. ಚಮನ್ ಸಾಬ್, ಎಸ್. ಮಲ್ಲಿಕಾರ್ಜುನ್, ಎಚ್. ಜಯಣ್ಣ, ಶಿರಮಗೊಂಡನಹಳ್ಳಿ ರುದ್ರೇಶ್, ನಿಖೀಲ್ ಕೊಂಡಜ್ಜಿ, ಎಲ್.ಎಂ.ಎಚ್. ಸಾಗರ್, ರಾಘವೇಂದ್ರ ಗೌಡ, ಹರೀಶ್ ಕೆ.ಎಲ್. ಬಸಾಪುರ, ಬಾತಿ ಶಿವಕುಮಾರ್, ನಂಜಾ ನಾಯ್ಕ, ಯಾಸೀನ್ ಪೀರ್, ಶುಭಮಂಗಳ, ರಾಜೇಶ್ವರಿ, ಲಕ್ಷ್ಮೀಬಾಯಿ, ಸಾಕಮ್ಮ, ಕವಿತಾ ಚಂದ್ರಶೇಖರ್, ರಾಧಾಬಾಯಿ, ಸುರೇಶ್ ಜಾಧವ್, ಡೋಲಿ ಚಂದ್ರು, ಕೋಳಿ ಇಬ್ರಾಹಿಂ, ಗುರುರಾಜ್, ರಾಕೇಶ್, ವಿನಯ್, ರವಿ ಇತರರು ಇದ್ದರು.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಳೆದ 10 ದಿನಗಳಲ್ಲಿ ಪ್ರತಿ ಲೀಟರ್‌ಗೆ 6.40 ರೂಪಾಯಿಯಷ್ಟು ಹೆಚ್ಚಳವಾಗಿದೆ. ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ಇಂಧನ ಬೆಲೆ ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸವಾಗುತ್ತಿದೆ. ಮಾ. 22ರ ನಂತರ ಸತತ 9 ಬಾರಿ ಇಂಧನ ಬೆಲೆ ಹೆಚ್ಚಳವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಮುಖೀಯಾಗುತ್ತಿವೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ.
– ಡಿ. ಬಸವರಾಜ್, ಕೆಪಿಸಿಸಿ ವಕ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.