31ರವರೆಗೆ ಕಂಟೈನ್ಮೆಂಟ್ ಝೋನ್‌ನಲ್ಲಿ ಲಾಕ್‌ಡೌನ್ ಮುಂದುವರಿಕೆ
Team Udayavani, Aug 2, 2020, 12:57 PM IST
ದಾವಣಗೆರೆ: ಕೇಂದ್ರೀಯ ಗೃಹ ಮಂತ್ರಾಲಯದ ಆದೇಶ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದನ್ವಯ ಆ. 31 ರವರೆಗೆ ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಕಂಟೈನ್ಮೆಂಟ್ ವಲಯಗಳಲ್ಲಿನ ಸೋಂಕಿನ ಪ್ರಸರಣ ಸರಪಳಿಯನ್ನು ಪರಿಣಾಮಕಾರಿಯಾಗಿ ಮುರಿಯುವ ಉದ್ದೇಶದಿಂದ ಆ. 31 ರವರೆಗೆ ಲಾಕ್‌ಡೌನ್ ಮುಂದುವರೆಯುತ್ತದೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಪುನಾರಂಭಿಸಲು ಅನ್‌ಲಾಕ್-3 ಮಾರ್ಗಸೂಚಿ ಜಾರಿಯಲ್ಲಿದೆ. ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳನ್ನು ಅನುಮತಿಸಲಾಗಿದೆ. ಆ. 5 ರಿಂದ ಯೋಗ ಕೇಂದ್ರ ಮತ್ತು ಜಿಮ್ ತೆರೆಯಬಹುದು. ಶಾಲಾ, ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಸಿನಿಮಾ ಮಂದಿರಗಳು, ಈಜುಕೊಳ, ಮನೋರಂಜನಾ ಉದ್ಯಾವನಗಳು, ಬಾರ್, ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗಳು ಮತ್ತು ಅಂತಹುದೇ ಸ್ಥಳಗಳಿಗೆ ಅನುಮತಿ ಇಲ್ಲ. ಆ. 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮುಖಾಂತರ ಮತ್ತು ಇತರೆ ಆರೋಗ್ಯ ಶಿಷ್ಟಾಚಾರಗಳನ್ನು ಪಾಲಿಸುವುದರೊಂದಿಗೆ ಅಚರಿಸಲಾಗುವುದು ಎಂದಿದ್ದಾರೆ.
ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆ (ಮಾಸ್ಕ್) ಧರಿಸುವುದು ಕಡ್ಡಾಯ. ಅಗತ್ಯಾನುಸಾರ ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರ (2 ಗಜ ಅಂತರ) ಕಾಯ್ದುಕೊಳ್ಳಬೇಕು. ದೈಹಿಕ ಅಂತರ ಇರುವುದನ್ನು ಅಂಗಡಿಗಳು ಖಚಿತಪಡಿಸಿಕೊಳ್ಳತಕ್ಕದ್ದು. ಮದುವೆ ಸಂಬಂಧಿತ ಕೂಟಗಳಲ್ಲಿ ಅತಿಥಿಗಳ ಸಂಖ್ಯೆ 50 ಕ್ಕೆ ಮೀರಿರಬಾರದು. ಶವ ಸಂಸ್ಕಾರ, ಅಂತಿಮ ವಿಧಿ ಸಂಬಂಧಿತ ಕಾರ್ಯಗಳಲ್ಲಿ 20ಕ್ಕಿಂತಲೂ ಹೆಚ್ಚಿನ ಜನರು ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡನಾರ್ಹ ಶಿಕ್ಷೆ ಆಗಿರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆ ನಿಷೇಧಿ ಸಿದೆ. ಸಾಧ್ಯವಾದಷ್ಟು ಮಟ್ಟಿಗೆ ಮನೆಯಿಂದಲೇ ಕೆಲಸ ಮಾಡುವ ಪದ್ಧ ತಿ ಅನುಸರಿಸಬೇಕು. ಎಲ್ಲಾ ಸಾಮಾನ್ಯ ಪ್ರದೇಶಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಕೈ ತೊಳೆಯುವುದಕ್ಕೆ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.
ಕೋವಿಡ್- 19 ನಿರ್ವಹಣೆಯ ಲಾಕ್‌ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವರ ವಿರುದ್ಧ ವಿಪತ್ತು ನಿರ್ವಹಣಾ ಅಧಿ ನಿಯಮ 2005 ರ ಸೆಕ್ಷನ್ 51 ರಿಂದ 60 ಉಪಬಂಧಗಳು ಅಲ್ಲದೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.