ಮಠದ ಏಳ್ಗೆಗೆ ಕೊಡುಗೆ ನೀಡಿ

Team Udayavani, Feb 27, 2017, 12:57 PM IST

dvg1.jpg

ದಾವಣಗೆರೆ: ಹಾಲುಮತ ಸಮಾಜದ ನೌಕರರ ಬಾಂಧವರು ಮಠದ ಏಳಿಗೆಗೂ ತಮ್ಮ ಕಾಣಿಕೆ ನೀಡಬೇಕು ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ತಿಳಿಸಿದ್ದಾರೆ. ಭಾನುವಾರ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನಕ ನೌಕರರ ಬಳಗ ಹಮ್ಮಿಕೊಂಡಿದ್ದ ಹಾಲುಮತೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ, ಮಾತನಾಡಿದರು.

ಸಮಾಜದ ಸರ್ಕಾರಿ ನೌಕರರು ಮಠದ ಏಳಿಗೆ ಕನಿಷ್ಠ ತಿಂಗಳಿಗೆ 100 ರೂ. ಗಳನ್ನಾದರೂ ನೀಡಬೇಕು. ಮೈಗೆ ಎಣ್ಣೆ ಹಚ್ಚಿಕೊಂಡವರಂತೆ ವರ್ತಿಸಬಾರದು ಎಂದು ಖಾರವಾಗಿ ಹೇಳಿದರು. ಮಠದಲ್ಲಿ ಪ್ರಸ್ತುತ 250 ವಿದ್ಯಾರ್ಥಿಗಳು ವಸತಿಯುತ ಶಿಕ್ಷಣ ಪಡೆಯುತ್ತಿದ್ದಾರೆ. ಅರ್ಹ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಐಎಎಸ್‌, ಐಪಿಎಸ್‌ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಸಹ ನೀಡಲಾಗುತ್ತಿದೆ.

ಮಠದ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣದ ಅಗತ್ಯತೆ ಪೂರೈಕೆಗೆ ಶ್ರಮಿಸುತ್ತಿದೆ. ಇಂತಹ ಹಂತದಲ್ಲಿ ಸರ್ಕಾರಿ ನೌಕರರು ತಮ್ಮ ಸಹಕಾರ ನೀಡಬೇಕಿದೆ ಎಂದು ತಿಳಿಸಿದರು. ಮಾಜಿ ಶಾಸಕ ಕೆ. ಮಲ್ಲಪ್ಪ ಮಾತನಾಡಿ, ಮಠದಿಂದ ಪ್ರತಿಭಾವಂತ ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಐಎಎಸ್‌, ಐಪಿಎಸ್‌ ತರಬೇತಿಯನ್ನು ಎಲ್ಲಾ ಸಮಾಜವರಿಗೂ ವಿಸ್ತರಿಸಬೇಕು.

ಕನಕದಾಸರ ವಿಚಾರ ಧಾರೆಗಳು, ನಮ್ಮ ಸಮಾಜದ ಉತ್ತಮ ಆದರ್ಶಗಳು ಎಲ್ಲಾ ಸಮಾಜಕ್ಕೆ ತಿಳಿಸುವಂತೆ ಆಗಬೇಕು. ಆದರೆ, ಇತೀ¤ಚಿನೆ ಬೆಳವಣಿಗೆಗಳು ಇದಕ್ಕೆ ವ್ಯತಿರಿಕ್ತವಾಗಿವೆ ಎಂದರು. ಇತೀ¤ಚಿನ ದಿನಗಳಲ್ಲಿ ಕನಕದಾಸ ಜಯಂತಿಯನ್ನು ಕೇವಲ ನಮ್ಮ ಸಮಾಜದವರು ಮಾತ್ರ ಆಚರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದು ಬದಲಾಗಬೇಕು. 

ಮುಂದಿನ ದಿನಗಳಲ್ಲಿ ಕನಕದಾಸರನ್ನು ಕುಬjರನ್ನಾಗಿಸುವ ಬದಲು ಎಲ್ಲಾ ಸಮಾಜದವರು ಒಟ್ಟುಗೂಡಿ ಆಚರಿಸುವಂತೆ ಆಗಬೇಕು ಎಂದು ಆಶಿಸಿದರು. ಹೊಸದುರ್ಗದ ಕಲ್ಲೋಡಿನ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಸಮುದಾಯದ ಕಾರ್ಯಕ್ರಮಗಳಲ್ಲಿ ಗಂಭೀರ ವಿಷಯಗಳ ಚಿಂತನೆ ನಡೆಯುತ್ತಿಲ್ಲ.

ಓದುವ ಸಂಸ್ಕೃತಿ ಹಾಗೂ ಜ್ಞಾನ ಸಂಪಾದನೆಯಲ್ಲಿ ಎಲ್ಲರೂ ಹಿಂದೆಬಿದ್ದಿದ್ದಾರೆ. ಇದನ್ನು ಬದಲಾಯಿಸಬೇಕು.  ಕನಕ ಗುರುಪೀಠದಿಂದ 11 ಸಂಪುಟಗಳ ಗ್ರಂಥಮಾಲಿಕೆಯನ್ನು ಹೊರತರಲಾಗುತ್ತಿದ್ದು, ಸಮಾಜದ ಪ್ರತಿಯೊಬ್ಬ ವ್ಯಕ್ತಿಯು  ಗ್ರಂಥಮಾಲಿಕೆಯನ್ನು ಖರೀದಿಸಬೇಕು ಎಂದು ಹೇಳಿದರು. 

ನಿವೃತ್ತ ಪ್ರಾಂಶುಪಾಲ ಡಾ| ನಾ. ಲೋಕೇಶ್‌ ಒಡೆಯರ್‌ ಮಾತನಾಡಿ, ಕಾಲ, ಕಾಯಕ ಕಾಸು ಇವುಗಳನ್ನು ಗೌರವಿಸಿದಾಗ ಮಾತ್ರ ಪ್ರಗತಿ ಹೊಂದಲು ಸಾಧ್ಯ. ಪ್ರತಿಭೆ ಎನ್ನುವುದು ಯಾವುದೋ ಒಂದು ಜಾತಿಯ ಸ್ವತ್ತಲ್ಲ. ಶ್ರದ್ಧೆ, ಪ್ರಾಮಾಣಿಕತೆ, ಜ್ಞಾನದ ಹಸಿವು ಇರುವ  ಎಲ್ಲರೂ ಜ್ಞಾನ ಸಂಪಾದನೆಮಾಡಬಹುದು ಎಂದರು. 

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌, ಡಾ| ಉದಯ ಶಂಕರ್‌ ಒಡೆಯರ್‌, ಜಿಲ್ಲಾ ಪಂಚಾಯತ್‌ ಸದಸ್ಯೆ ಜಯಶೀಲಾ, ಮುಖಂಡರಾದ ಎಂ. ಕರಿಯಪ್ಪ, ಟಿ. ನಾಗರಾಜಪ್ಪ, ಬಿ.ಟಿ. ಹನುಮಂತಪ್ಪ, ಎಚ್‌ .ಬಿ. ಪರುಶುರಾಮಪ್ಪ, ಪ್ರೊ. ಬಾಗೂರು ಆನಂದಪ್ಪ, ಯುಗಧರ್ಮ ರಾಮಣ್ಣ, ಕೆ. ದೇವೇಂದ್ರಪ್ಪ ಇತರರು ವೇದಿಕೆಯಲ್ಲಿದ್ದರು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.    

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.