Davanagere ಕದ್ದ ಬೈಕ್ ಮಾರಾಟಕ್ಕೆ ಸಹಕಾರ: ನಾಲ್ವರು ದ್ವಿತೀಯ ದರ್ಜೆ ಗುಮಾಸ್ತರ ಬಂಧನ
Team Udayavani, Aug 1, 2023, 8:47 PM IST
ದಾವಣಗೆರೆ: ಕಳ್ಳತನ ಮಾಡಿದ್ದ ಬೈಕ್‌ಗಳನ್ನು ಮೂಲ ಮಾಲಿಕರ ಗಮನಕ್ಕೆ ತರದೆ ಬೇರೆಯವರಿಗೆ ನೋಂದಣಿಗೆ ಸಹಕರಿಸಿದ್ದ ದಾವಣಗೆರೆಯ ಪ್ರಾದೇಶಿಕ ಸಾರಿಗೆ ಇಲಾಖೆಯ ನಾಲ್ವರು ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಓರ್ವ ಮಧ್ಯವರ್ತಿಯನ್ನು ಮಂಗಳವಾರ ಬಸವನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಈಚೆಗೆ ಪತ್ತೆಯಾಗಿದ್ದ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬೇರೆಯವರಿಗೆ ನೋಂದಣಿಯಾಗಿರುವುದು ಪತ್ತೆಯಾಗಿದೆ. ದಾವಣಗೆರೆಯ ಸಿಇಎನ್ ಪೊಲೀಸ್‌ಗೆ ಮಾಹಿತಿ ನೀಡಲಾಗಿತ್ತು.
ಬೈಕ್‌ಗಳ ಮೂಲ ಮಾಲಿಕರಿಗೆ ಗೊತ್ತಾಗದಂತೆ ಅವರ ಸಹಿಗಳನ್ನು ಪೋರ್ಜರಿ ಮಾಡಿ, ಬೇರೆಯವರಿಗೆ ನೋಂದಣಿ ಮಾಡಿಕೊಟ್ಟಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ನಾಲ್ವರು ದ್ವಿತೀಯ ದರ್ಜೆ ಸಹಾಯಕರನ್ನು ಬಸವನಗರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕೃತ್ಯಕ್ಕೆ ಸಂಬಂಽಸಿದಂತೆ ರಸೂಲ್ ಎಂಬ ಮಧ್ಯವರ್ತಿಯನ್ನ ಸಹ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.