ಕೋಟ್ಪಾ ದಾಳಿ-68 ಪ್ರಕರಣ ದಾಖಲು
Team Udayavani, Dec 11, 2018, 3:09 PM IST
ದಾವಣಗೆರೆ: ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡ ಸೋಮವಾರ ವಿವಿಧೆಡೆ ದಾಳಿ ನಡೆಸಿ ಒಟ್ಟು 68 ಪ್ರಕರಣ ದಾಖಲಿಸಿಕೊಂಡು ಸ್ಥಳದಲ್ಲಿಯೇ 7,200 ರೂಪಾಯಿ ದಂಡ ವಸೂಲು ಮಾಡಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್, ಪಾನ್‌ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಲಾಯಿತು.
ಕೋಟ್ಪಾ ಕಾಯ್ದೆ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿದೆ. ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‌ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧದ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.
ರಾಜ್ಯ ತಂಬಾಕು ನಿಯಂತ್ರಣ ತಂಡದ ವಿಭಾಗೀಯ ಸಂಯೋಜಕ ಮಹಾಂತೇಶ್ ಉಳ್ಳಾಗಡ್ಡಿ, ಆರೋಗ್ಯ ನಿರೀಕ್ಷಕ ಆರ್. ಪಿ. ಕುಪಸ್ತ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮಾಪತಿ, ಹಿರಿಯ ಆರೋಗ್ಯ ಸಹಾಯಕರಾದ ವೆಂಕಟಾಚಲ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ, ಬಸವನಗರ ಪಿಎಸ್‌ಐ ವೀರೇಶ್, ಆರೋಗ್ಯ ನಿರೀಕ್ಷಕ ಪ್ರಕಾಶ್, ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.