ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ: ನ್ಯಾ| ಗೀತಾ
Team Udayavani, Oct 18, 2020, 7:28 PM IST
ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಪ್ರಾರಂಭಿಸಲಾದ ಕೋವಿಡ್-19 ಜಾಗೃತಿ ಜನಾಂದೋಲನ ಅಭಿಯಾನಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ., ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಪ್ರಸ್ತುತ ದಿನಮಾನದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಇದರ ನಿಯಂತ್ರಣ ಹಾಗೂ ನಿರ್ಮೂಲನೆಗೆಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಪ್ರಮುಖವಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೈಗಳನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಈ ಸೋಂಕಿನ ಕುರಿತು ಜನರು ಭಯಭೀತರಾಗದೆ ಮುಂಜಾಗ್ರತೆ ವಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿಶೇಷ ಜಾಗೃತಿ ಜನಾಂದೋಲನ ಆಯೋಜಿಸಲಾಗಿದೆ ಎಂದರು.
ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸದಲಾಯಿತು. ವಿವಿಧ ನ್ಯಾಯಾಧೀಶರು, ಅಧಿಕಾರಿಗಳು ಜಾಗೃತಿ ಸಂದೇಶವುಳ್ಳ ಭಿತ್ತಪತ್ರಗಳನ್ನು ಪ್ರದರ್ಶಿಸುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು.ಜಿಲ್ಲಾ ಕಾನೂನು ಸೇವಾ ಪ್ರಾ ಧಿಕಾರದ ಸದಸ್ಯಕಾರ್ಯದರ್ಶಿ ಸಾಬಪ್ಪ, ನ್ಯಾಯಾಧೀಶರಾದಚಂದ್ರಕಲಾ, ಕಿರಣ್‌ಕುಮಾರ್, ನಂದಿನಿ,ವಕೀಲರ ಸಂಘದ ಕಾರ್ಯದರ್ಶಿ ಲಿಂಗರಾಜು, ಜಿಲ್ಲಾ ನ್ಯಾಯಾಲಯದಸಿಇಒ ಶ್ರೀಧರ್ ಸೇರಿದಂತೆ ವಕೀಲರುಗಳು, ಅರೆಕಾಲಿಕ ಸ್ವಯಂಸೇವಕರು, ವಿವಿಧ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.