ಮತ್ತೆ ಮೂವರಿಗೆ ಕೋವಿಡ್: 13 ಮಂದಿ ಬಿಡುಗಡೆ
Team Udayavani, Jun 14, 2020, 8:29 AM IST
ದಾವಣಗೆರೆ: ದಾವಣಗೆರೆಯಲ್ಲಿ ಶನಿವಾರ ಮತ್ತೆ ಮೂವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ರೋಗಿ ನಂಬರ್ 5819ರ ಸಂಪರ್ಕದಿಂದ 16 ವರ್ಷದ ಬಾಲಕ(ರೋಗಿ ನಂಬರ್ 6575), 24 ವರ್ಷದ ಯುವತಿ (ರೋಗಿ ನಂಬರ್ 6576) ಯಲ್ಲಿ ಸೋಂಕು ಕಾಣಿಸಿಕೊಂಡಿದೆ. ರೋಗಿ ನಂಬರ್ 6040ರ ಸಂಪರ್ಕದಿಂದ 12 ವರ್ಷದ ಬಾಲಕ (ರೋಗಿ ನಂಬರ್6577)ನಲ್ಲಿ ಸೋಂಕು ದೃಢಪಟ್ಟಿದೆ. ಕೊರೊನಾದಿಂದ ಗುಣುಮುಖರಾದ 13 ಜನರು ಶನಿವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೆ 184 ಸೋಂಕಿತರು ಬಿಡುಗಡೆಯಾದಂತಾಗಿದೆ. ಕೋವಿಡ್ ದಿಂದ ಗುಣಮುಖರಾದ 086, 4089, 837, 4836, 4839, 4841, 5302, 5307, 5305, 5314, 5304 ಸೇರಿದಂತೆ ಒಟ್ಟು 13 ಜನ ಸೋಂಕಿತರು ಶನಿವಾರ ಬಿಡುಗಡೆಯಾದವರು. ಶನಿವಾರ 10 ಜನರು ಸೇರಿ ಇದುವರೆಗೆ 966 ಜನರು ಅವಲೋಕನದಲ್ಲಿದ್ದಾರೆ. 3 ಜನರು ಸೇರಿ 677 ಜನರು ಹೋಂ ಕ್ವಾರಂಟೈನ್, 87 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. 10 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 673 ಜನರು ಆಸ್ಪತ್ರೆಯಲ್ಲಿದ್ದಾರೆ. ನಿನ್ನೆ 292 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿತ್ತು. 330 ಗಂಟಲು ದ್ರವ ಮಾದರಿ ವರದಿ ನೆಗೆಟಿವ್ ಬಂದಿದೆ. 11,848 ಗಂಟಲು ದ್ರವ ಮಾದರಿಯಲ್ಲಿ 11,202 ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿದ್ದು, 420 ಮಾದರಿಗಳ ವರದಿ ಬರಬೇಕಾಗಿದೆ. ಒಟ್ಟು 226 ಪ್ರಕರಣಗಳಲ್ಲಿ ಇದುವರೆಗೆ 184 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರು ಜನರು ಮೃತಪಟ್ಟಿದ್ದಾರೆ. 36 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.