ಆಯುಷ್ಮಾನ್‌ ಅಡಿ ಕೋವಿಡ್‌ ಚಿಕಿತ್ಸೆ

Team Udayavani, Sep 20, 2020, 6:11 PM IST

ಆಯುಷ್ಮಾನ್‌ ಅಡಿ ಕೋವಿಡ್‌ ಚಿಕಿತ್ಸೆ

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುವ ಕೋವಿಡ್‌ ರೋಗಿಗಳಿಗೆ ಸರ್ಕಾರದ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ವೈದ್ಯಕೀಯ ವೆಚ್ಚ ಭರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕೋವಿಡ್‌ನಿರ್ವಹಣೆ ಕುರಿತ ಸಭೆಯಲ್ಲಿ  ಚನ್ನಗಿರಿ ಶಾಸಕ ಮಾಡಾಳುವಿರೂಪಾಕ್ಷಪ್ಪ ಅವರು ರೈತರು, ಬಡವರು ಕೋವಿಡ್‌ ಕಾರಣಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದಲ್ಲಿಅವರಿಗೆ ವೈದ್ಯಕೀಯ ವೆಚ್ಚ ಭರಿಸಲು ತೊಂದರೆಯಾಗುತ್ತಿದೆ ಎಂದು ಹೇಳಿದಾಗ ಜಿಲ್ಲಾಧಿಕಾರಿಯವರು ಈ ಪ್ರತಿಕ್ರಿಯೆ ನೀಡಿದರು.

ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ವೈದ್ಯಕೀಯ ವೆಚ್ಚ ಭರಿಸುವ ಬಗ್ಗೆ ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಹಾಕಲಾಗುವುದು. ಕೋವಿಡ್‌ ರೋಗ ಲಕ್ಷಣಗಳು ಕಂಡುಬಂದರೂ ಕೆಲವರು ಭಯದಿಂದ ಅಥವಾ ನಿರ್ಲಕ್ಷದಿಂದ ಪರೀಕ್ಷೆಮಾಡಿಸಿಕೊಳ್ಳುತ್ತಿಲ್ಲ. ರೋಗ ತೀವ್ರ  ಗಂಭೀರತೆಯನ್ನು ಪಡೆದುಕೊಂಡಾಗ ಪರೀಕ್ಷೆಗೆ ಬರುತ್ತಾರೆ. ಹೀಗಾದಾಗ ಅಂತಹ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಲಕ್ಷಣ ಕಂಡ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮಾತನಾಡಿ, ಆಸ್ಪತ್ರೆ, ಹಾಸ್ಟೆಲ್‌, ಅಥವಾ ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ಗಳಲ್ಲಿ ಕೋವಿಡ್‌ ರೋಗಿಗಳಿಗೆ ಉತ್ತಮ ಗುಣಮಟ್ಟದ ಊಟ, ಉಪಹಾರ ಕಲ್ಪಿಸಬೇಕು ಎಂದರು.

ಆರೋಗ್ಯ ಇಲಾಖೆಯ ಡಾ|ಗಂಗಾಧರ ಜಿಲ್ಲೆಯಲ್ಲಿನ ಕೋವಿಡ್‌ ಸ್ಥಿತಿಗತಿ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌, ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ, ಹರಿಹರ ಶಾಸಕ ಎಸ್‌. ರಾಮಪ್ಪ, ಮಾಯಕೊಂಡ ಶಾಸಕ ಪ್ರೊ| ಲಿಂಗಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಘವೇಂದ್ರಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.