ಸಾಹಿತ್ಯ ಕ್ಷೇತ್ರಕ್ಕೆ ಜಗಳೂರು ಕೊಡುಗೆ ಅಪಾರ
ಹತ್ತನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎನ್.ಟಿ . ಎರ್ರಿಸ್ವಾಮಿ ಅವರಿಗೆ ಅಧಿಕೃತ ಆಮಂತ್ರಣ ನೀಡಲಾಯಿತು.
Team Udayavani, Feb 8, 2021, 2:54 PM IST
ಜಗಳೂರು: ತಾಲೂಕು ಬರದ ನಾಡು ಎಂಬ ಹಣೆಪಟ್ಟಿ ಹೊಂದಿದ್ದರೂ ಸಹ ಸಾಹಿತ್ಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಮಂಜುನಾಥ ಕುರ್ಕಿ ಹೇಳಿದರು.
ಹತ್ತನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಪಟ್ಟಣದ ಹಿರಿಯ ಸಾಹಿತಿ ಎನ್.ಟಿ. ಯರ್ರಿಸ್ವಾಮಿ ಅವರಿಗೆ ಅ ಧಿಕೃತ ಆಮಂತ್ರಣ ನೀಡಿ ಅವರು ಮಾತನಾಡಿದರು.
ಬ್ಯಾಂಕ್‌ನಲ್ಲಿ ನೌಕರಿ ಹೊಂದಿದ್ದರೂ ಯರ್ರಿಸ್ವಾಮಿ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಸಾಮಾಜಿಕ ಮತ್ತು ಸಮಕಾಲಿನ ಸಮಸ್ಯೆಗಳನ್ನು ತುಂಬಾ ಹತ್ತಿರದಿಂದ ಕಂಡವರು. ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಅವರನ್ನು ಸರ್ವಾನುಮತದಿಂದ ಆಯ್ಕೆ
ಮಾಡಲಾಗಿದೆ ಎಂದರು.
ನಿಕಟಪೂರ್ವ ಅಧ್ಯಕ್ಷ ಉಜ್ಜಿನಪ್ಪ ಮಾತನಾಡಿ, ಯರ್ರಿಸ್ವಾಮಿಯವರು ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲತೆಯಿಂದ ಸಾಹಿತ್ಯ ಮತ್ತು ಸೃಜನಶೀಲ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಜಗಳೂರು ತಾಲೂಕು ಆರ್ಥಿಕ, ಶೈಕ್ಷಣಿಕ, ಸಾಹಿತ್ಯಿಕ ಕ್ಷೇತ್ರಗಳಲ್ಲಿ ಮತ್ತಷ್ಟು ಉನ್ನತ ಸಾಧನೆ ಮಾಡಬೇಕಿದೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನದ ನಿಯೋಜಿತ ಅಧ್ಯಕ್ಷ ಎನ್.ಟಿ. ಯರ್ರಿಸ್ವಾಮಿ ಮಾತನಾಡಿ, ಬಾಲ್ಯದಲ್ಲಿ ಪ್ರಾಯೋಗಿಕವಾಗಿ ಕಂಡಂತಹ ಹಲವು ಅನುಭವಗಳೇ ಸಾಹಿತ್ಯ ರಚನೆಗೆ ತಳಹದಿಯಾದವು. ಬ್ಯಾಂಕ್ ಅಧಿಕಾರಿಯಾಗಿದ್ದರೂ ಸಾಹಿತ್ಯದ ಆಭಿರುಚಿ ಬೆಳೆಸಿಕೊಂಡೆ. ನನಗೆ ದೊರೆತ ಅವಕಾಶವನ್ನು ಸಮರ್ಥ ಹಾಗೂ ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿಕೊಡುತ್ತೇನೆ ಎಂದರು.
ಹಿರಿಯ ಸಾಹಿತಿ ಬಸವಪ್ಪ ಮಾತನಾಡಿದರು.
ಬಯಲಾಟ ಅಕಾಡೆಮಿ ಸದಸ್ಯ ಎನ್.ಎಸ್. ರಾಜ್, ಷಣ್ಮುಖಪ್ಪ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ದಿಂಡೆಪ್ಪ, ಮೋಹನ್, ಬಿ.ಸಿ .ಮಲ್ಲಿಕಾರ್ಜುನ್, ಸಿ.ಎಂ. ಹೊಳೆ ಬಸವೇಶ, ಬಾಬು ರೆಡ್ಡಿ, ಕಸಾಪ ತಾಲೂಕು ಅಧ್ಯಕ್ಷ ಹಜರತ್ ಅಲಿ, ಎಂ.ಡಿ. ಆಂಜನೇಯ, ಡಿ.ಟಿ. ಆದಂ, ಸುಜಾತಾ ಮತ್ತಿತರರು ಇದ್ದರು.
ಓದಿ: ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಬಿಜೆಪಿ ಸಮಿತಿಗಿಲ್ಲ: ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.