ಅಡಕೆ ಹಾಳೆ ತಟ್ಟೆ; ಶಿಬಿರಾರ್ಥಿಗಳಿಗೆ ತರಬೇತಿ
: ಅಡಿಕೆ ಹಾಳೆ ತಟ್ಟೆ ತಯಾರಿಕಾ ತರಬೇತಿ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
Team Udayavani, Feb 15, 2021, 3:46 PM IST
ಹೊನ್ನಾಳಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪಟ್ಟಣದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಂಘಗಳ
ಸದಸ್ಯರ ಬಲವರ್ಧನೆಗಾಗಿ ನಬಾರ್ಡ್ ಎಲ್‌ಇಡಿಪಿ ಕಾರ್ಯಕ್ರಮದಡಿ ಅಡಿಕೆ ಹಾಳೆ ತಟ್ಟೆ ತಯಾರಿಕಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಬಸವರಾಜ ಅಂಗಡಿ ಮಾತನಾಡಿ, ತರಬೇತಿ ಪಡೆಯುತ್ತಿರುವ ಸಂಘದ ಸದಸ್ಯರು ಸ್ವಾವಲಂಬಿ ಜೀವನ ನಡೆಸಲು ತರಬೇತಿಯು ಅನುಕೂಲಕರವಾಗಿದೆ. ಯಾವುದೇ ಸ್ವ-ಉದ್ಯೋಗ ಆರಂಭ ಮಾಡಲು ತರಬೇತಿ ಮುಖ್ಯವಾಗಿರುತ್ತದೆ. ಶಿಬಿರಾರ್ಥಿಗಳು ತರಬೇತಿಯಲ್ಲಿ ಉತ್ತಮ ಜ್ಞಾನ ಪಡೆದುಕೊಂಡು ತಮ್ಮ ಜೀವನ ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಶಿಬಿರಾರ್ಥಿ ಮಂಜುಳಾ ಮಾತನಾಡಿ, ನಮಗೆ ಉತ್ತಮವಾದ ಮಾಹಿತಿ ಮತ್ತು ಮಾರ್ಗದರ್ಶನ ದೊರೆತಿದ್ದು, ಇದರಿಂದ ತುಂಬಾ
ಅನುಕೂಲಕರವಾಗಿದೆ. ಮುಂದಿನ ದಿನಗಳಲ್ಲಿ ಸ್ವ ಉದ್ಯೋಗ ಕೈಗೊಂಡು ಅಭಿವೃದ್ಧಿಯೆಡೆ ಸಾಗುತ್ತೇವೆ ಎಂದರು.
ಸಾಸ್ವೆಹಳ್ಳಿ ವಲಯದ ಸಾಸ್ವೆಹಳ್ಳಿ ಕಾರ್ಯಕ್ಷೇತ್ರದ ಕಿರಣ್‌ಕುಮಾರ್ ಮಾತನಾಡಿ, ಬ್ಯಾಂಕಿನಿಂದ ಹಾಗೂ ಇಲಾಖೆಗಳಿಂದ ಸಿಗುವಂತಹ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ರೀತಿಯಲ್ಲಿ ಅಡಿಕೆ ಹಾಳೆತಟ್ಟೆ ಘಟಕವನ್ನು ಮಾಡುವುದಾಗಿ ತಿಳಿಸಿದರು.
ಹೊನ್ನಾಳಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಠಲ ಮಾಳಗಿ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಬಸವರಾಜ್, ಧಾರವಾಡ ಜ್ಞಾನ ವಿಕಾಸ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸಂತೋಷ್ ರಾವ್, ಉಪನ್ಯಾಸಕಿ ವೈಷ್ಣವಿ ರೆಡ್ಡಿ, ಜಿಲ್ಲಾ ಎನ್‌ಆರ್‌ಎಲ್
ಎಂ ಸಮನ್ವಯಾಧಿ ಕಾರಿ ಧರ್ಮೆಂದ್ರ ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕಿ ರಚನಾ ಸ್ವಾಗತಿಸಿದರು. ಜಿಲ್ಲಾ ಎನ್ ಆರ್‌ಎಲ್‌ಎಂ ಸಮನ್ವಯಾ ಧಿಕಾರಿ ಧರ್ಮೆಂದ್ರ ವಂದಿಸಿದರು. ಮಂಜುಳಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.