ಬಂಜಾರಾ ತಾಂಡಾ ಶೀಘ್ರ ಕಂದಾಯ ಗ್ರಾಮ
ಸೂರಗೊಂಡನಕೊಪ್ಪ ಪ್ರವಾಸಿ ತಾಣವಾಗಿ ಅಭಿವೃದ್ಧಿ
Team Udayavani, Feb 15, 2021, 4:26 PM IST
ದಾವಣಗೆರೆ: ಮುಂದಿನ ಒಂದು ವರ್ಷದೊಳಗೆ ರಾಜ್ಯದ ಎಲ್ಲ ಬಂಜಾರಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕಂದಾಯ
ಅಧಿಕಾರಿಗಳಿಗೆ ಆದೇಶಿಸಿದ್ದೇನೆಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ ಮಹಾರಾಜರ 282ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಮುಂದಿನ ಸೇವಾಲಾಲ್ ಜಯಂತಿ ವೇಳೆಗೆ ತಾಂಡಾಗಳ ಸರ್ವೇ ಮುಗಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಪೂರ್ಣ
ಗೊಳಿಸಲು ಸೂಚಿಸಿದ್ದೇನೆ. ಸೂರ ಗೊಂಡನಕೊಪ್ಪಕ್ಕೆ ಮಂಜೂರಾಗಿರುವ ರೈಲ್ವೆ ಸ್ಟೇಷನ್ಗೆ ಸಂತ ಸೇವಾಲಾಲರ ಜನ್ಮಸ್ಥಳ
ಭಾಯಾಗಡ ಸ್ಥಳ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆಯಲಾಗುವುದು. ಸುಕ್ಷೇತ್ರ ಸೂರ ಗೊಂಡನ ಕೊಪ್ಪವನ್ನು ಕೇವಲ ಧಾರ್ಮಿಕ ಕ್ಷೇತ್ರವಾಗಿ ಅಷ್ಟೇ ಅಲ್ಲದೇ, ಪ್ರವಾಸಿ ತಾಣ ವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದರು.
ಬಂಜಾರಾ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಅಭಿವೃದ್ಧಿಗೆ ಅಧ್ಯಾತ್ಮ ಗುರು ಸಂತಸೇವಾಲಾಲರು ಕಾರಣ. ಅವರ
ಜನ್ಮಸ್ಥಳ ಸೂರಗೊಂಡನಕೊಪ್ಪ ನಮ್ಮ ರಾಜ್ಯದಲ್ಲಿರುವುದು ಹೆಮ್ಮೆಯ ಸಂಗತಿ. ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ
ಸೂರಗೊಂಡನಕೊಪ್ಪ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈಗ ಕ್ಷೇತ್ರದ ಅಭಿವೃದ್ಧಿಗೆ 10 ಕೋಟಿ ರೂ. ಹಾಗೂ ಈ
ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ.ನೀಡಲಾಗುವುದು. ಬಂಜಾರಾ ಸಮುದಾಯ ಗುಳೆ ಹೋಗುವುದನ್ನು ತಡೆಯಲು ನರೇಗಾ ಯೋಜನೆಯಡಿ ತಾಂಡಾ ರೋಜಗಾರ ಮಿತ್ರ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಅಳಿವಿನಂಚಿನಲ್ಲಿರುವ ಬಂಜಾರ ಭಾಷೆ ಉಳಿಸಲು ಅಗತ್ಯ ಸಲಹೆ ನೀಡಲು ಈಗಾಗಲೇ ಹಂಪ ನಾಗರಾಜ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬಂಜಾರಾ ಭಾಷಾ ಅಕಾಡೆಮಿ ಸ್ಥಾಪನೆಗೆ ಈಗಾಗಲೇ
ಆದೇಶ ಹೊರಡಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.