ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸೌಲಭ್ಯ ಕಟ್
ಲಸಿಕೆ ವಿತರಣೆಯಲ್ಲಿ ಕೇವಲ ಶೇ. 52.7 ಸಾಧನೆ
Team Udayavani, Feb 18, 2021, 3:31 PM IST
ದಾವಣಗೆರೆ: ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಆರೋಗ್ಯ ಹಾಗೂ ಮುಂಚೂಣಿ ಕ್ಷೇತ್ರದ ಫಲಾನುಭವಿಗಳು ಕೂಡಲೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ತಪ್ಪಿದಲ್ಲಿ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ
ನೀಡಿದ್ದಾರೆ.
ಕೋವಿಡ್ ಲಸಿಕೆ ಕಾರ್ಯಕ್ರಮದ ಪ್ರಗತಿ ಕುರಿತಂತೆ ಬುಧವಾರ ಆರೋಗ್ಯ ಇಲಾಖೆಯ ಆಯುಕ್ತರು ನಡೆಸಿದ ವಿಡಿಯೋ ಕಾನ್# ರೆನ್ಸ್ ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅವರು ಮಾತನಾಡಿದರು. ಕೋವಿಡ್ ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿದ ಆರೋಗ್ಯ
ಇಲಾಖೆ ಆಯುಕ್ತರು ಜಿಲ್ಲೆಯ ಪ್ರಗತಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದವರಿಗೆ ನೀಡಲಾದ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ 18,920 ಫಲಾನುಭವಿಗಳಲ್ಲಿ ಈವರೆಗೆ 9,979 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ. ಶೇ. 52.7 ಸಾಧನೆಯಾಗಿದೆ ಎಂದರು. ಎರಡನೆ ಹಂತದಲ್ಲಿ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್,ನಗರಾಭಿವೃದ್ಧಿ ಇಲಾಖೆ ಅ ಧಿಕಾರಿ, ಸಿಬ್ಬಂದಿಗಳಿಗೆ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಕೋವಿಡ್
ಲಸಿಕೆ ನೀಡಲು ಸರ್ಕಾರ ನಿರ್ಧರಿಸಿತ್ತು. ಪೊಲೀಸ್ ಇಲಾಖೆಯ 2,076 ಜನ ಫಲಾನುಭವಿಗಳಲ್ಲಿ ಕೇವಲ 629 ಜನ ಮಾತ್ರ ಪಡೆದಿದ್ದಾರೆ.
ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ 3,413 ಜನರಲ್ಲಿ 408, ನಗರಾಭಿವೃದ್ಧಿ ಇಲಾಖೆಯ 1,644
ಜನರಲ್ಲಿ 350 ಜನ ಮಾತ್ರ ಪಡೆದಿದ್ದಾರೆ. ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆ ತೃಪ್ತಿಕರವಾಗಿಲ್ಲ. ಕಳಪೆ ಸಾಧನೆಯನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕೋವಿಡ್ ಲಸಿಕೆಗಾಗಿ ಗುರುತಿಸಲಾಗಿರುವ ಮೊದಲ ಹಾಗೂ ಎರಡನೆ ಹಂತದ ಫಲಾನುಭವಿಗಳು ಇದುವರೆಗೂ ಲಸಿಕೆ ಪಡೆಯದೇ ಇದ್ದಲ್ಲಿ
ಕೂಡಲೆ ಸಂಬಂಧಪಟ್ಟ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್ ಲಸಿಕೆ ಪಡೆಯದೇ ಇರುವ ಫಲಾನುಭವಿಗಳು ಒಂದು ವೇಳೆ ಕೋವಿಡ್ ಸೋಂಕಿಗೆ ಒಳಗಾದಲ್ಲಿ ಅಂತಹವರು ಸ್ವಂತಕ್ಕೆ ಚಿಕಿತ್ಸಾ ವೆಚ್ಚ ಭರಿಸಬೇಕಾಗುತ್ತದೆ. ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂಬುದಾಗಿ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾಗ ಇದುವರೆಗೂ ಕೋವಿಡ್ ಲಸಿಕೆ ಪಡೆಯದೇ
ಇರುವವರು ಕೂಡಲೇ ತಂಡೋಪತಂಡವಾಗಿ ಆಯಾ ಲಸಿಕಾ ಕೇಂದ್ರಕ್ಕೆ ತೆರಳಿ, ಲಸಿಕೆ ಪಡೆಯಬೇಕು ಎಂದು ಸೂಚಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿ ಕಾರಿ ಡಾ| ಮೀನಾಕ್ಷಿ ಮಾತನಾಡಿ, ಆರೋಗ್ಯ ಕ್ಷೇತ್ರದ ಕಾರ್ಯಕರ್ತರಾದ ಖಾಸಗಿ ಮತ್ತು ನೋಂದಾಯಿತ ಆರೋಗ್ಯ
ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರಾದ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆ ಅ ಧಿಕಾರಿ, ಸಿಬ್ಬಂದಿಗಳು ಯಾವುದೇ ಎಸ್‌ಎಂಎಸ್‌ಗೆ
ಕಾಯದೆ, ಯಾವುದಾದರೂ ಒಂದು ಗುರುತಿನ ಚೀಟಿ ತೆಗೆದುಕೊಂಡು ಹೋಗಿ ಲಸಿಕೆ ಪಡೆಯಬಹುದು. ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ದಾವಣಗೆರೆ ಹಾಗೂ ಹರಿಹರ, ಜಗಳೂರು, ಹೊನ್ನಾಳಿ, ಚನ್ನಗಿರಿ ತಾಲ್ಲೂಕು ಆಸ್ಪತ್ರೆಗಳನ್ನು
ಕೋವಿಡ್-19 ಲಸಿಕಾಕರಣಕ್ಕಾಗಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಆರೋಗ್ಯ ಇಲಾಖೆಯ ವಿವಿಧ ಅ ಧಿಕಾರಿಗಳು ಇದ್ದರು.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!
MUST WATCH
ಹೊಸ ಸೇರ್ಪಡೆ
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.