ಮಧ್ಯವರ್ತಿ ಹಾವಳಿ ತಡೆಯೇ ಗುರಿ
ಸರ್ಕಾರಿ ಸೌಲಭ್ಯ ಮನೆಬಾಗಿಲಿಗೆ ತಲುಪಿಸಲು ಕಾರ್ಯಕ್ರಮ: ಜಿಲ್ಲಾಧಿಕಾರಿ
Team Udayavani, Feb 21, 2021, 3:25 PM IST
ಜಗಳೂರು: ಸರಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ಕರೆ ತಂದು ಸಮಸ್ಯೆಗಳನ್ನು ಬಗೆಹರಿಸಿ ಅರ್ಹರಿಗೆ ಸೌಲಭ್ಯ ಒದಗಿಸಬೇಕು
ಎಂಬ ಉದ್ದೇಶದಿಂದ ಸರಕಾರ “ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ’ ಕಾರ್ಯಕ್ರಮ ರೂಪಿಸಿದೆ ಎಂದು ಜಿಲ್ಲಾಧಿ ಕಾರಿ ಮಹಾಂತೇಶ
ಬೀಳಗಿ ಹೇಳಿದರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ “ಜಿಲ್ಲಾ ಧಿಕಾರಿಗಳ
ನಡೆ ಗ್ರಾಮಗಳ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರ ಕನಸಿನ ಕೂಸಾಗಿದೆ ಎಂದರು.
ಸರಕಾರದ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಅರ್ಹರಿಗೆ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಸರಕಾರ ಈ ಕಾರ್ಯಕ್ರಮ ರೂಪಿಸಿದ್ದು ಅನುಷ್ಠಾನಗೊಳಿಸಲು ಸೂಚನೆ ನೀಡಿದೆ. 1982ರಲ್ಲಿ ನನ್ನ ತಾಯಿ ಪಿಂಚಣಿಗಾಗಿ ಅಲೆದು ಕೊನೆಗೆ ಸಾಕಾಗಿ ನೂರು ರೂ. ಲಂಚ ನೀಡಿ ಪಡೆದಿದ್ದರು. ನನ್ನ ತಾಯಿಗೆ ಆದ ತೊಂದರೆ ಬೇರೆಯವರಿಗೆ ಆಗಬಾರದು ಎಂಬುದು ನನ್ನ ಉದ್ದೇಶ ಎಂದರು.
31 ಸಂಧ್ಯಾ ಸುರಕ್ಷ ಹಾಗೂ ವೃದ್ಧಾಪ್ಯ ವೇತನಕ್ಕೆ ಸಂಬಂಧಿಸಿದ 38 ಅರ್ಜಿಗಳು, ಪೌತಿ ಖಾತೆಗೆ 8 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗುವುದು. ಗ್ರಾಮದಲ್ಲಿ ಬಿಪಿಲ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ. ಆದರೆ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಗೆಬೇಡಿಕೆ ಇಟ್ಟಿದ್ದಾರೆ. ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ತಾಲೂಕಿನಲ್ಲಿ ಖಾಸಗಿ ಬಸ್ ಲಾಬಿ ಜಾಸ್ತಿ ಇದ್ದು, ಶಾಸಕರು ಮತ್ತು ನಮಗೆ ಒತ್ತಡ ಹೇರುತ್ತಿದ್ದಾರೆ. ಅದಕ್ಕೆಲ್ಲ ನಾವು ಜಗ್ಗುವುದಿಲ್ಲ. ಬ್ರಹ್ಮಪುತ್ರ ನದಿ ಒಂದು ಹನಿ ನೀರಿನಿಂದ ದೇಶದ ದೊಡ್ಡ ನದಿಯಾದಂತೆ ಈ ಕಾರ್ಯಕ್ರಮ ಸಹ ಯಶಸ್ವಿಯಾಗಲಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾದರಸದಂತೆ ಕೆಲಸ ಮಾಡುತ್ತಿದ್ದೇವೆ ಎಂದರು. ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಸಾರ್ವಜನಿಕರ
ಸಮಸ್ಯೆಗೆ ಸ್ಪಂದಿಸುವಂತಹ ಇಂಥ ಜಿಲ್ಲಾಧಿಕಾರಿ ಪಡೆದಿರುವುದು ದಾವಣಗೆರೆ ಜಿಲ್ಲೆ ಜನರ ಪುಣ್ಯ. ಗಡಿ ಗ್ರಾಮವಾದ ಪುಟ್ಟ ಗ್ರಾಮಕ್ಕೆ ಜಿಲ್ಲಾಡಳಿತವನ್ನೆ ಕರೆ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ 57 ಕೆರೆಗಳಿಗೆ ಶೀಘ್ರದಲ್ಲೇ ನೀರು ಹರಿದು
ಬರಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ 8 ಕೋಟಿ ರೂ ಮೊತ್ತದ ಸೌಲಭ್ಯ ಒದಗಿಸಿದ್ದೇವೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷ ಕೊಟ್ರೇಶ್, ಜಿಪಂ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಾಪಂ ಸಿಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅ ಧಿಕಾರಿಗಳು ಹಾಜರಿದ್ದರು.
ಓದಿ : ದೇಣಿಗೆ ನೀಡುವುದಿಲ್ಲವಾದರೆ ಸಿದ್ದು, HDK ಬಾಯಿ ಮುಚ್ಚಿಕೊಂಡು ತೆಪ್ಪಗಿರಲಿ: ಪ್ರಹ್ಲಾದ್ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.