ಜನರ ಸಂಕಷ್ಟ ನಿವಾರಣೆ ಗ್ರಾಮ ವಾಸ್ತವ್ಯ ಉದ್ದೇಶ
: ಕೂಲಂಬಿ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಉದ್ಘಾಟಿಸಿದರು.
Team Udayavani, Feb 21, 2021, 3:34 PM IST
ಹೊನ್ನಾಳಿ: ಜನರ ಸಂಕಷ್ಟಗಳನ್ನು ನೀಗಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ,
ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಡಿ ಶನಿವಾರ ತಾಲೂಕಿನ ಕೂಲಂಬಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ ಯಾವುದೇ ಯೋಜನೆ ರೂಪಿಸಿದರೂ ಅವು ಸಾಮಾನ್ಯ ಜನರಿಗೆ ಅನುಕೂಲಕ್ಕಾಗಿಯೇ ಇರುತ್ತವೆ. ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಡಿ 46 ಫಲಾನುಭವಿಗಳಿಗೆ ಸವಲತ್ತುಗಳ ಆದೇಶ ಪತ್ರಗಳನ್ನು ವಿತರಿಸಲಾಗುವುದು ಎಂದರು.
ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡಿದರೆ ಸರ್ಕಾರದ ಯೋಜನೆಗಳು ಸಫಲತೆ ಕಾಣುವುದಿಲ್ಲ ಎಂದು ಸಿಎಂ ಬಿ.ಎಸ್ .ಯಡಿಯೂರಪ್ಪನವರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಿದ್ದಾರೆ. ಗ್ರಾಮದಲ್ಲಿರುವ ಬಡವರು ತಮಗೆ ಸಿಗುವ ಸವಲತ್ತುಗಳನ್ನು ಪಡೆಯಲು ಈ ಕಾರ್ಯಕ್ರಮ ಉಪಯುಕ್ತ. ಈ ಹಿಂದೆ ನಮ್ಮದೇ ಸರ್ಕಾರ ಜನಸ್ಪಂದನ ಕಾರ್ಯಕ್ರಮ ರೂಪಿಸಿತ್ತು. ರಾಜ್ಯದಲ್ಲಿಯೇ ಅತಿ ಹೆಚ್ಚು ಜನಸ್ಪಂದನ ಕಾರ್ಯಕ್ರಮಗಳನ್ನು ನಮ್ಮ ತಾಲೂಕಿನಲ್ಲಿ ಆಯೋಜಿಸಿ ಸಾಮಾನ್ಯ ಜನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.
ಹೊನ್ನಾಳಿ ಪಟ್ಟಣದಲ್ಲಿ 30 ಹಾಸಿಗೆ ಸರ್ಕಾರಿ ಆಸ್ಪತ್ರೆ ಇತ್ತು. ನಾನು ಮೊದಲ ಬಾರಿ ಶಾಸಕನಾಗಿದ್ದ ಸಂದರ್ಭದಲ್ಲಿ 100 ಹಾಸಿಗೆ ಆಸ್ಪತ್ರೆ ಸ್ಥಾಪನೆ ಮಾಡಿದೆ. ಕೆಎಸ್‌ಆರ್‌ಟಿಸಿ ಬಸ್ ಡಿಪೋ ಸ್ಥಾಪನೆ ಮಾಡಿದ್ದೇನೆ. ಈಗ ಅವಳಿ ತಾಲೂಕುಗಳಿಗೆ ಸಹಾಯಕವಾಗಲೆಂದು ಉಪ ವಿಭಾಗಾಧಿ ಕಾರಿಗಳ ಕಚೇರಿಯನ್ನು ಹೊನ್ನಾಳಿಗೆ ತಂದಿದ್ದೇನೆ. ಅಭಿವೃದ್ಧಿಯೇ ನನ್ನ ಮೂಲಮಂತ್ರ ಎಂದರು.
ಜಿಪಂ ಸದಸ್ಯೆ ದೀಪಾ ಜಗದೀಶ್ ಮಾತನಾಡಿ, ಕಡು ಬಡವರ ಸವಲತ್ತುಗಳನ್ನು ಮನೆಬಾಗಿಲಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳದ್ದು ಎಂದು ಹೇಳಿದರು. ತಹಶೀಲ್ದಾರ್ ಬಸನಗೌಡ ಕೋಟುರು ಪ್ರಾಸ್ತಾವಿಕವಾಗಿ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಆಯ್ದ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಯುತ್ತದೆ ಎಂದರು. ಗ್ರಾಪಂ ಅಧ್ಯಕ್ಷೆ ಶಾರದಮ್ಮ, ಉಪಾಧ್ಯಕ್ಷ ರೇವಣ್ಣ, ತಾಲೂಕು
ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಓದಿ : ದೇಣಿಗೆ ನೀಡುವುದಿಲ್ಲವಾದರೆ ಸಿದ್ದು, HDK ಬಾಯಿ ಮುಚ್ಚಿಕೊಂಡು ತೆಪ್ಪಗಿರಲಿ: ಪ್ರಹ್ಲಾದ್ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.