ಹರಿಹರ: ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಬಂದ್
Team Udayavani, Apr 8, 2021, 5:40 PM IST
ಹರಿಹರ: ಆರನೇ ವೇತನ ಆಯೋಗದ ಅನುಸಾರ ವೇತನ ಪರಿಷ್ಕರಣೆಗೆ ಆಗ್ರಹಿಸಿ ನೌಕರರ ರಾಜ್ಯ ವ್ಯಾಪಿ ಮುಷ್ಕರದಿಂದಾಗಿ ತಾಲೂಕಿನಾದ್ಯಂತ ಬುಧವಾರ ಕೆಎಸ್ ಆರ್‌ಟಿಸಿ ಬಸ್‌ಗಳ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬೆಳಿಗ್ಗೆ 8 ರಿಂದ ಯಾವುದೇ ಬಸ್, ನಿಲ್ದಾಣಕ್ಕೆ ಬರಲಿಲ್ಲ. ತಾಲೂಕಿನಲ್ಲಿ ಖಾಸಗಿ ಬಸ್ ಸೌಲಭ್ಯ ಕಡಿಮೆ,. ಗ್ರಾಮೀಣ ಭಾಗದಿಂದ ಹರಿಹರ, ದಾವಣಗೆರೆಗೆ ಬಂದು ಹೋಗುವ ವಿದ್ಯಾರ್ಥಿಗಳು, ನೌಕರರು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು. ಹಲವರು ಟೆಂಪೊ, ಆಟೋ, ಮೆಟಡಾರ್‌ಗಳನ್ನು ಆಶ್ರಯಿಸಿದರು.
ಖಾಸಗೀ ಬಸ್‌ಗಳು, ಮತ್ತಿತರೆ ವಾಹನಗಳಲ್ಲಿ ಮಿತಿ ಮೀರಿ ಪ್ರಯಾಣಿಕರನ್ನು ತುಂಬುವುದು, ಹೆಚ್ಚುವರಿ ಪ್ರಯಾಣ ದರ ವಿ ಧಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಪ್ರಯಾಣಿಕರ ಶೋಷಣೆಯಾಗುತ್ತಿರುವುದು ಕಂಡುಬಂತು. ಹರಿಹರ-ದಾವಣಗೆರೆ ಮಧ್ಯೆ ನಿಗ ದಿತ 15 ರೂ. ಬದಲು 20 ರೂ. ಪಡೆಯಲಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದರು.
ಹರಪನಹಳ್ಳಿ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ ರಸ್ತೆಯಲ್ಲೂ ವಾಹನಗಳ ಸಂಚಾರ ಕಡಿಮೆ ಇತ್ತು. ಮುಷ್ಕರದ ಮಾಹಿತಿ ಇಲ್ಲದೆ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಪರದಾಡಿದರು. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ರಾಜ್ಯದ ನಾಲ್ಕು ದಿಕ್ಕುಗಳಿಗೆ ಸಾಗುವ 1500 ಬಸ್‌ಗಳು ಬಂದು ಹೋಗುತ್ತವೆ. ಇಲ್ಲಿನ ಸಂಸ್ಥೆಯ ಡಿಪೋದಿಂದ 100ಕ್ಕೂ ಹೆಚ್ಚು ಮಾರ್ಗಗಳಿಗೆ ಬಸ್ ಸಂಚಾರವಿದೆ. ಸಮೀಪದ ಡಿಪೋದಲ್ಲೂ ಮ್ಯಾನೇಜರ್ ಹಾಗೂ ಇತರೆ ಕೆಲವು ಹಿರಿಯ ಅ ಧಿಕಾರಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ನೌಕರರು ಕೆಲಸಕ್ಕೆ ಹಾಜರಾಗಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.