ಸ್ವಾರ್ಥ ತ್ಯಜಿಸಿ ಕೊಡುಗೈ ದಾನಿಗಳಾಗಿ
Team Udayavani, Apr 9, 2021, 6:25 PM IST
ದಾವಣಗೆರೆ: ಬದುಕಿನಲ್ಲಿ ಪಡೆಯುವುದಕ್ಕಿಂತ ಕೊಡುವುದರಲ್ಲಿ ಹೆಚ್ಚಿನ ಸಂತೋಷವಿದ್ದು, ವೈಜ್ಞಾನಿಕವಾಗಿಯೂ ಇದು ಸಾಬೀತಾಗಿದೆ ಎಂದು ಬೆಂಗಳೂರಿನ ಸೃಜನಶೀಲ ಅಧ್ಯಾಪನ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಮತ್ತು ಶಿಕ್ಷಣ ತಜ್ಞ ಡಾ| ಗುರುರಾಜ ಕರಜಗಿ ಹೇಳಿದರು. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಎಂಟನೇ ಘಟಿಕೋತ್ಸವದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.
ಕೊಡಲು ನಮ್ಮ ಬಳಿ ಏನೂ ಇಲ್ಲದೆ ಇದ್ದರೂ ಚಿಂತೆಯಿಲ್ಲ. ಆದರೆ ನೀಡುವ ಮನಸ್ಸು ಇದ್ದರೆ ಸಾಕು. ಕೊಡಲು ಇಂಥದ್ದೇ ಬೇಕೆಂದು ಹೃದಯ ಬೇಡುವುದಿಲ್ಲ. ಕೆಲವರಿಗೆ ಸಮಯ ನೀಡಿದರೂ ಸಾಕು. ಮತ್ತೆ ಕೆಲವರಿಗೆ ಒಳ್ಳೆಯ ಮಾತು, ಪ್ರೀತಿ ತೋರಿಸಿದರೂ ಸಾಕಾಗುತ್ತದೆ ಎಂದರು. ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ, ಮದರ್ ತೆರೇಸಾ, ಮಾರ್ಟಿನ್ ಲೂಥರ್ ಕಿಂಗ್ ಅವರೆಲ್ಲ ಎಷ್ಟು ವರ್ಷವಾದರೂ ನಮ್ಮ ಮನದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅಷ್ಟೇ ಅಲ್ಲ, ರಾಮ, ಕೃಷ್ಣ, ಶಂಕರಾಚಾರ್ಯ ಮೊದಲಾದವರು ಶತ ಶತಮಾನ ಕಳೆದರೂ ಎಲ್ಲರ ಬಾಯಿಯಲ್ಲಿ, ಹದಯದಲ್ಲಿ ನೆಲೆಸಿದ್ದಾರೆ. ಇದಕ್ಕೆ ಅವರು ಸಮಾಜಕ್ಕೆ ನೀಡಿದ ಕೊಡುಗೆಯೇ ಕಾರಣ. ಮನುಷ್ಯ ಸತ್ತಾಗ ಏನು ಗಳಿಸಿದ ಎಂದು ವಿಚಾರಿಸುವುದಿಲ್ಲ. ಸಮಾಜಕ್ಕೆ ಏನು ಕೊಟ್ಟ ಎಂಬುದನ್ನು ಮಾತ್ರ ಅವಲೋಕಿಸುತ್ತಾರೆ ಎಂದರು. ನಾನು ನನ್ನದು ಎಂಬ ಸ್ವಾರ್ಥ ಬಿಟ್ಟು ನಮ್ಮದು, ನಮ್ಮವರು ಎಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು. ಆಗ ಪ್ರೀತಿ, ಆತ್ಮೀಯತೆಯಿಂದ ಸಂಬಂಧ ಹತ್ತಿರವಾಗುತ್ತದೆ. ನಾವು ನೀಡುವ ವಿಚಾರ ಹೃದಯ ಮತ್ತು ಮೆದುಳಿಗೆ ಸಂಬಂಧಿಸಿದ್ದಾಗಿದೆ. ಹೃದಯ ಮಿಡಿತಕ್ಕೆ ಮೆದುಳು ಸ್ಪಂದಿಸುತ್ತದೆ. ಒಳ್ಳೆಯ ವಿಚಾರ ಕೊಟ್ಟಾಗ ಹೃದಯ ಹಾಗೂ ಮೆದುಳು ಎರಡೂ ನೆಮ್ಮದಿಯಾಗಿರುತ್ತವೆ. ನೆಮ್ಮದಿ ಇದ್ದಾಗ ಆರೋಗ್ಯ ಸುಧಾರಿಸುತ್ತದೆ. ಆರೋಗ್ಯಪೂರ್ಣ ದೇಹಕ್ಕೆ ಆರೋಗ್ಯವಂತ ಮನಸ್ಸು ಮುಖ್ಯ ಎಂಬುದು ಭಾವನಾತ್ಮಕ ಕಲ್ಪನೆಯ ವಿಚಾರವಲ್ಲ. ವೈಜ್ಞಾನಿಕವಾಗಿಯೂ ದೃಢಪಟ್ಟಿದೆ ಎಂದು ತಿಳಿಸಿದರು.
ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ದಾವಣಗೆರೆ ವಿಶ್ವವಿದ್ಯಾಲಯ ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದಕ್ಕೆ ಮಾತ್ರ ಸೀಮಿತವಾಗಿರದೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಹತ್ತು ಕುಗ್ರಾಮಗಳ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುತ್ತಿದೆ ಎಂದರು. ಮೌಲ್ಯಮಾಪನ ಕುಲಸಚಿವೆ ಪ್ರೊ| ಅನಿತಾ ಎಚ್. ಎಸ್., ಕುಲಸಚಿವೆ ಪ್ರೊ| ಗಾಯತ್ರಿ ದೇವರಾಜ, ಹಣಕಾಸು ಅಧಿಕಾರಿ ಪ್ರಿಯಾಂಕ ಡಿ., ಪ್ರೊ|ಜೆ.ಕೆ .ರಾಜು, ಕೆ.ಬಿ. ರಂಗಪ್ಪ, ಸಿಂಡಿಕೇಟ್ ಸದಸ್ಯರು ಮತ್ತು ವಿದ್ಯಾ ವಿಷಯಕ ಪರಿಷತ್ ಸದಸ್ಯರು, ವಿವಿಧ ನಿಕಾಯದ ಡೀನ್‌ಗಳು, ವಿಭಾಗದ ಅಧ್ಯಕ್ಷರು, ಅಧ್ಯಾಪಕ ಮತ್ತು ಅಧ್ಯಾಪಕೇತರ ನೌಕರರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.