ಬೆಳ್ಳಂಬೆಳಿಗ್ಗೆಯೇ ಅಂಗಡಿ ಬಂದ್‌!


Team Udayavani, Apr 23, 2021, 6:49 PM IST

23-7

ದಾವಣಗೆರೆ: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸಿದ್ದು ರಾತ್ರಿ 9ಗಂಟೆಯೊಳಗಾಗಿ ವ್ಯಾಪಾರ ಮುಗಿಸಿ ಮನೆಗೆ ಹೋಗುವ ಯೋಜನೆಯೊಂದಿಗೆ ಗುರುವಾರ ಬೆಳಿಗ್ಗೆ ಮಳಿಗೆ ಬಾಗಿಲು ತೆಗೆಯುತ್ತಿದ್ದ ವರ್ತಕರಿಗೆ ಗುರುವಾರ ಬೆಳಿಗ್ಗೆ ಅಚ್ಚರಿ ಕಾದಿತ್ತು. ಅದೇನೆಂದರೆ ರಾತ್ರಿ ಬದಲಿಗೆ ಈಗಲೇ ಮಳಿಗೆ ಬಾಗಿಲು ಮುಚ್ಚಬೇಕು ಎಂಬ ಪೊಲೀಸರ ಆದೇಶ! ಗುರುವಾರ ಬೆಳಿಗ್ಗೆ ಕೆಲವರು ಇನ್ನೂ ಬಾಗಿಲು ತೆರೆಯುತ್ತಿದ್ದರು.

ಮತ್ತೆ ಕೆಲವರು ಈಗಷ್ಟೇ ಮಳಿಗೆ ಬಾಗಿಲು ತೆರೆದು ದೇವರಿಗೆ ಹಚ್ಚಿದ ಅಗರಬತ್ತಿ ಇನ್ನೂ ಆರಿರಲಿಲ್ಲ. ಆಗಲೇ ಪೊಲೀಸರು ಅಂಗಡಿಗಳ ಬಳಿ ಬಂದು ಬಟ್ಟೆ, ಚಿನ್ನಾಭರಣ, ಸ್ಟೆಷನರಿ, ಗೃಹೋಪಯೋಗಿ ಸೇರಿದಂತೆ ಎಲ್ಲ ಅಂಗಡಿಗಳನ್ನು ಮುಚ್ಚಿಸಿದರು. ಪೊಲೀಸರ ಈ ದಿಢೀರ್‌ ಆದೇಶ ವ್ಯಾಪಾರಿಗಳನ್ನು ದಿಗಾತರನ್ನಾಗಿಸಿತು. ಕೆಲ ಅಂಗಡಿಕಾರರು ಸರ್ಕಾರ ರಾತ್ರಿ 9 ಗಂಟೆ ನಂತರ ಲಾಕ್‌ ಡೌನ್‌ ಎಂದು ಹೇಳಿದೆ. ಈಗೇಕೆ ಮಳಿಗೆ ಮುಚ್ಚಿಸುತ್ತಿದೀªರಿ ಎಂದು ಪೊಲೀಸರನ್ನು ಪ್ರಶ್ನಿಸಿದರು.

ಮತ್ತೆ ಕೆಲವರು ವಾಗ್ವಾದಕ್ಕಿಳಿದರು. ಆದರೆ ಪೊಲೀಸರು ಮಾತ್ರ ಇದರ ಬಗ್ಗೆ ಸರಿಯಾದ ಸ್ಪಷ್ಟನೆ ನೀಡದೇ “ಇದು ಜಿಲ್ಲಾಧಿಕಾರಿಗಳ ಆದೇಶ’ ಎನ್ನುತ್ತ ಅಂಗಡಿಗಳ ಬಾಗಿಲು ಹಾಕಿಸಿಯೇ ಮುಂದೆ ನಡೆದರು. ನಗರದ ಬಹುತೇಕ ಎಲ್ಲ ಕಡೆಗಳಲ್ಲಿ ಪೊಲೀಸರು ಅವಶ್ಯ ವಸ್ತುಗಳ ಅಂಗಡಿ, ಕೃಷಿ ಹಾಗೂ ಕಟ್ಟಡ ನಿರ್ಮಾಣ ಸಾಮಗ್ರಿ ಹೊರತುಪಡಿಸಿ ಎಲ್ಲವನ್ನೂ ಪೊಲೀಸರು ತಂಡೋಪತಂಡವಾಗಿ ಸಂಚರಿಸಿ ಮುಚ್ಚಿಸುವಲ್ಲಿ ಯಶಸ್ವಿಯಾದರು.

ಅವಶ್ಯ ವಸ್ತುಗಳ ಮಾರಾಟ ಮಳಿಗೆ, ಕೃಷಿ ಹಾಗೂ ಕಟ್ಟಡ ನಿರ್ಮಾಣ ಸಾಮಗ್ರಿ ಮಾರಾಟ ಅಂಗಡಿ ಹೊರತುಪಡಿಸಿ ಉಳಿದೆಲ್ಲವನ್ನೂ ಮೇ 4 ರವರೆಗೆ ಬಂದ್‌ ಮಾಡಬೇಕು ಎಂದು ಸರ್ಕಾರ ಬುಧವಾರ ರಾತ್ರಿ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಇದರ ಪರಿಣಾಮ ಜಿಲ್ಲಾಧಿಕಾರಿ ಆದೇಶದಂತೆ ಪೊಲೀಸರು ಬಂದ್‌ ಕಾರ್ಯಾಚರಣೆಗೆ ಇಳಿದಿದ್ದರು. ಇದರ ಬಗ್ಗೆ ಅರಿವಿಲ್ಲದ ವರ್ತಕರು, ಗ್ರಾಹಕರಿಗೆ ಅಧಿಕಾರಿಗಳ ದಿಢೀರ್‌ ಆದೇಶ ಅಸಮಾಧಾನ ಮೂಡಿಸಿತು. ಒಟ್ಟಾರೆ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವಿಧಿಸಿದ ಹೊಸ ಮಾರ್ಗಸೂಚಿಗಳ ಬಿಗಿ ಅನುಷ್ಠಾನಕ್ಕೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆ ಮುಂದಾಗಿದ್ದು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ವಾತಾವರಣ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.