ಸೋಂಕಿತರ ಮಾಹಿತಿ ಸಂಗ್ರಹಕ್ಕೆ ಸೂಚನೆ


Team Udayavani, Apr 26, 2021, 4:33 PM IST

26-4

ಮಲೇಬೆನ್ನೂರು: ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿತರ ಮಾಹಿತಿಯನ್ನು ಕಡ್ಡಾಯವಾಗಿ ಸಂಗ್ರಹಿಸಬೇಕು ಎಂದು ಹರಿಹರ ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ ಸೂಚಿಸಿದರು. ಪಟ್ಟಣದ ಪುರಸಭೆಯ ಕೌನ್ಸಿಲ್‌ ಸಭಾಂಗಣದಲ್ಲಿ ನಡೆದ ಬಿಎಲ್‌ಒ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಭೆಯಲ್ಲಿ ಅವರು ಮಾತನಾಡಿದರು.

ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಮಾಹಿತಿಯನ್ನು ಕಡ್ಡಾಯವಾಗಿ ಸಂಗ್ರಹಿಸಿ ಪ್ರತಿ ನಿತ್ಯ ಬೆಳಗ್ಗೆ 12 ಗಂಟೆಯೊಳಗೆ ಮಾಹಿತಿ ಅಪ್‌ಲೋಡ್‌ ಮಾಡಿಸಬೇಕು. ಸರ್ಕಾರದ ಮಾರ್ಗಸೂಚಿಯಂತೆ ಜನರಲ್ಲಿ ಜಾಗೃತಿ ಮೂಡಿಸುವ ಮತ್ತು ದಂಡ ವಿ ಧಿಸುವ ಕ್ರಮ ಕೈಗೊಳ್ಳಬೇಕೆಂದರು. ಕಳೆದ ವರ್ಷ ನಾವು ಆರೋಗ್ಯ ಸಮೀಕ್ಷೆ ಕಾರ್ಯ ನಿರ್ವಹಿಸಿದ್ದೆವು. ಅದರ ಗಳಿಕೆ ರಜೆ ಇನ್ನೂ ಮಂಜೂರಾಗಿಲ್ಲ. ಕೂಡಲೇ ಮಂಜೂರು ಮಾಡುವಂತೆ ಬಿಎಲ್‌ಒ ದಂಡಿ ತಿಪೇಸ್ವಾಮಿ, ಪರಮೇಶ್ವರಪ್ಪ ಒತ್ತಾಯಿಸಿದರು.

ನಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪಟ್ಟಣದ ಮನೆಗಳಿಗೆ ಹೋಗಿ ಆರೋಗ್ಯ ಸಮೀಕ್ಷೆ ಮತ್ತು ಪ್ರಥಮ ಹಂತದ ಹಾಗೂ ದ್ವಿತೀಯ ಹಂತದ ಸಂಪರ್ಕಿತರ ಮಾಹಿತಿ ಸಂಗ್ರಹ ಮಾಡುವುದು ಇನ್ನಿತರೆ ಕೆಲಸಗಳನ್ನು ಮಾಡುತ್ತೇವೆ. ಅಕಸ್ಮಾತ್‌ ನಮ್ಮಲ್ಲಿ ಯಾರಿಗೇನಾದರೂ ಆದರೆ ಅಧಿಕಾರಿಗಳು ನಿಮಗೆ ಸರ್ಕಾರದಿಂದ ನೀಡಿರುವ ಆದೇಶ ಪತ್ರ ಲಗತ್ತಿಸಿ ಎನ್ನುತ್ತಾರೆ. ನೀವು ನಮಗೆ ಆದೇಶ ಪತ್ರವನ್ನೇ ನೀಡಿಲ್ಲ. ಇದಕ್ಕೆ ಯಾರು ಹೊಣೆ, ಆದ್ದರಿಂದ ನಮಗೆ ಕೋವಿಡ್‌ ಕಾರ್ಯ ನಿರ್ವಹಿಸಲು ಸಂಬಂಧಿಸಿದ ಒ.ಎಂ (ಕೋವಿಡ್‌ ಕಾರ್ಯ ನಿರ್ವಹಿಸಲು ನೀಡುವ ಆದೇಶ ಪತ್ರ) ಕೊಡಿ ಎಂದು ತಹಶೀಲ್ದಾರರಲ್ಲಿ ಮನವಿ ಮಾಡಿದರು.

ಒ.ಎಂ ಪತ್ರ ನೀಡುವುದಾಗಿ ತಿಳಿಸಿದ ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ಅಂದಿನ ಕೆಲಸವನ್ನು ಅಂದೇ ಮಾಡಿ ಪೂರೈಸಬೇಕು ಎಂದು ತಾಕೀತು ಮಾಡಿದರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಿಎಲ್‌ಒಗಳು ಒಟ್ಟಾಗಿ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಮಾಹಿತಿಯನ್ನು ಕಡ್ಡಾಯವಾಗಿ ಸಂಗ್ರಹಿಸಿ ಎಂದರು.

ಉಪತಹಶೀಲ್ದಾರ್‌ ಆರ್‌. ರವಿ, ಸಮುದಾಯ ಆರೋಗ್ಯಾಧಿ ಕಾರಿ ಡಾ| ಲಕ್ಷ್ಮೀದೇವಿ, ಪುರಸಭೆ ಮುಖ್ಯಾಧಿ ಕಾರಿ ದಿನಕರ್‌, ವಿ.ಎ. ಕೊಟ್ರೇಶ್‌, ಸಮೀರ್‌, ಪರಿಸರ ಅಭಿಯಂತರ ಉಮೇಶ್‌, ಹಿರಿಯ ಆರೋಗ್ಯ ನಿರೀಕ್ಷಕ ಗುರುಪ್ರಸಾದ್‌, ಕಂದಾಯ ಅ ಧಿಕಾರಿ ಪ್ರಭು, ನವೀನ್‌, ರಾಜಸ್ವ ನಿರೀಕ್ಷ ಆನಂದ್‌, ಪರಶುರಾಂ, ವಿನಯ್‌, ಬಿಎಲ್‌ ಒಗಳಾದ ಕರಿಬಸಪ್ಪ, ಖಲೀಲ್‌, ನಿರಂಜನ್‌, ಪ್ರೇಮಲೀಲಾಬಾಯಿ, ಶಿವಣ್ಣ, ಅಂಗನವಾಡಿ ಕಾರ್ಯಕರ್ತರಾದ ಮಂಜುಳ, ಉಮಾ, ಚಂದ್ರಮ್ಮ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.