ಅದ್ಧೂರಿ ಮದುವೆ ಸಮಾರಂಭಕ್ಕೆ ಕೊರೊನಾ ಬ್ರೇಕ್!
Team Udayavani, Apr 26, 2021, 6:55 PM IST
ಚಿಕ್ಕಮಗಳೂರು: ಕೋವಿಡ್ ಎರಡನೇ ಅಲೆ ಆರ್ಭಟಿಸುತ್ತಿದ್ದು ಮದುವೆ ಸಮಾರಂಭಗಳಿಗೆ ಕಠಿಣ ನಿರ್ಬಂಧ ವಿ ಧಿಸಿದ್ದು ಸಾವಿರಾರು ಜನರು ಸೇರಬೇಕಾದ ಸ್ಥಳದಲ್ಲಿ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಲ್ಯಾಣ ಮಂಟಪ ಬುಕ್ ಮಾಡಿದವರು ಕ್ಯಾನ್ಸಲ್ ಮಾಡುತ್ತಿದ್ದು, ನೀಡಿದ ಮುಂಗಡ ಹಣ ಪಡೆಯಲು ಹೆಣಗಾಡುವಂತಾಗಿದೆ. ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆ ಮಾಡಬೇಕೆಂದುಕೊಂಡವರು ಸರಳವಾಗಿ ಮನೆಯಲ್ಲಿ ದೇವಸ್ಥಾನಗಳಲ್ಲಿ ಮದುವೆ ಮಾಡಲು ನಿರ್ಧರಿಸಿದ್ದಾರೆ.
ಆದರೆ ಕಲ್ಯಾಣ ಮಂಟಪಕ್ಕೆ ಮುಂಗಡ ಹಣ ಕಟ್ಟಿದವರು ವಾಪಸ್ ಪಡೆಯಲು ಕಷ್ಟಪಡಬೇಕಾದ ಪರಿಸ್ಥಿತಿ ಎದುರಾಗಿದ್ದು ಕೆಲವು ಕಲ್ಯಾಣ ಮಂಟಪ ಮಾಲೀಕರು ಮುಂಗಡ ಹಣವನ್ನು ವಾಪಸ್ ನೀಡಿದರೆ, ಕೆಲವರು ಜಿಎಸ್‌ಟಿ ಹಣ ಕಡಿತಗೊಳಿಸಿ ನೀಡುತ್ತಿ ದ್ದಾರೆ. ಮತ್ತೆ ಕೆಲವು ಕಲ್ಯಾಣ ಮಂಟಪ ಮಾಲೀಕರು ಮುಂಗಡ ಹಣವನ್ನು ನೀಡಲು ಹಿಂದೇಟು ಹಾಕುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಜಿಲ್ಲೆಯ ಕೆಲವು ಕಲ್ಯಾಣ ಮಂಪಟಗಳಲ್ಲಿ ಕಟ್ಟಿರುವ ಮುಂಗಡ ಹಣವನ್ನು ವಾಪಸ್ ನೀಡುವುದಿಲ್ಲ. ಕೊರೊನಾ ನಿಯಮದಂತೆ ಸರಳವಾಗಿ ಮದುವೆ ಸಮಾರಂಭ ಮಾಡಿ ಎಂದು ಹೇಳಿ ಕಳಿಸುತ್ತಿದ್ದಾರೆಂದು ಮುಂಗಡ ಹಣ ನೀಡಿದವರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಕಲ್ಯಾಣ ಮಂಟಪಗಳಿದ್ದು ಕೆಲವು ಕಲ್ಯಾಣ ಮಂಟಪ 1ಲಕ್ಷ ರೂ., ಕೆಲವು ಕಲ್ಯಾಣ ಮಂಟಪಗಳು ಶೇ.50ರಷ್ಟು ಮತ್ತು ಶೇ.25ರಷ್ಟು ಮುಂಗಡ ಹಣ ಪಡೆದುಕೊಂಡಿವೆ ಎಂದು ತಮ್ಮ ಅಸಹಾಯಕತೆಯನ್ನು ಹೊರ ಹಾಕಿದ್ದಾರೆ. ಕೊರೊನಾ ಸಂದರ್ಭದಲ್ಲಿ ಮದುವೆ ಮಾಡುವುದು ದೊಡ್ಡ ಸವಾಲಾಗಿದೆ. 3-4 ತಿಂಗಳ ಹಿಂದೆ ಕಲ್ಯಾಣ ಮಂಟಪ ಬುಕ್ ಮಾಡಿ ಮುಂಗಡ ಹಣವನ್ನು ನೀಡಲಾಗಿದೆ. ಸರ್ಕಾರದ ನಿಯಮದಂತೆ ಮನೆ ಅಥವಾ ದೇವಸ್ಥಾನದಲ್ಲಿ ಮದುವೆ ಮಾಡಿಕೊಳ್ಳುತ್ತೇವೆ. ಕೊಟ್ಟಿರುವ ಮುಂಗಡ ಹಣವನ್ನು ವಾಪಸ್ ನೀಡಬೇಕೆಂದು ಹಣ ನೀಡಿದವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.