ಕೊರೊನಾ ಕರ್ಫ್ಯೂಗೆ ಜಿಲ್ಲಾಡಳಿತ ಕ್ರಮ
Team Udayavani, Apr 28, 2021, 9:09 PM IST
ದಾವಣಗೆರೆ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಏ.27 ರಿಂದ ಮೇ 12 ರ ವರೆಗೆ ಕಠಿಣ ನಿರ್ಬಂಧದ ಪರಿಸ್ಥಿತಿಯ ದುರ್ಬಳಕೆಗೆ ಜನರಿಗೆ ಅಗತ್ಯವಿರುವ ದಿನಬಳಕೆ ವಸ್ತು, ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರದಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಸಿದ್ದಾರೆ.
ಮಂಗಳವಾರ ಕೋವಿಡ್‌ಗೆ ಸಂಬಂ ಧಿಸಿದಂತೆ ಸರ್ಕಾರದ ನೂತನ ಮಾರ್ಗಸೂಚಿ ಹಾಗೂ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನ 2ನೇ ಅಲೆ ನಿಯಂತ್ರಿಸಿ, ಸೋಂಕು ವ್ಯಾಪಕವಾಗಿ ಹರಡುವ ಚೈನ್ ಲಿಂಕ್ ಮುರಿಯಲು, ಸರ್ಕಾರ ಮೇ 12 ರವರೆಗೆ ಕಠಿಣ ನಿರ್ಬಂಧ ವಿ ಧಿಸಿದೆ. ಜಿಲ್ಲೆಯಾದ್ಯಂತ ಕಲಂ 144 ರನ್ವಯ ನಿಷೇಧಾಜ್ಞೆ, ನಿತ್ಯ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ದಿನಬಳಕೆಯ ಅಗತ್ಯ ವಸ್ತು, ಆಹಾರ ಸಾಮಗ್ರಿ, ತರಕಾರಿ ಹೂವು, ಹಣ್ಣು ಇತ್ಯಾದಿ ಖರೀದಿಸಲು ಬೆಳಗ್ಗೆ 6 ರಿಂದ 10 ರವರೆಗೆ ಅವಕಾಶ ಕಲ್ಪಿಸಿದೆ. ಆದರೆ, ಪರಿಸ್ಥಿತಿಯ ದುರ್ಬಳಕೆ ಮಾಡಿಕೊಳ್ಳಲು ದಿನಬಳಕೆ ವಸ್ತುಗಳು, ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರದಲ್ಲಿ ಮಾರಾಟ ಮಾಡುವವರನ್ನು ಪತ್ತೆಹಚ್ಚುವ ಸಲುವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅ ಧಿಕಾರಿಗಳನ್ನು ಒಳಗೊಂಡ ತಂಡವನ್ನು ಈಗಾಗಲೇ ರಚಿಸಲಾಗಿದೆ. ಕಾಳದಂಧೆಕೋರರನ್ನು ಪತ್ತೆಹಚ್ಚಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಡಳಿತ ಸಜ್ಜು: ಜಿಲ್ಲೆಯಲ್ಲಿ ಕೋವಿಡ್‌ಗೆ ಸಂಬಂಧಿ ಸಿದಂತೆ ಸದ್ಯ ಜನರು ಭಯ ಬೀಳುವ ಪರಿಸ್ಥಿತಿ ಇಲ್ಲ. ಕೋವಿಡ್ ನಿರ್ವಹಣೆಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸಜ್ಜಾಗಿವೆ. ಕೋವಿಡ್ ಕೇರ್ ಸೆಂಟರ್ ಕೂಡ ಪ್ರಾರಂಭಿಸಲಾಗಿದೆ. ಜಿಲ್ಲೆಯಲ್ಲಿ 1,766 ಸಕ್ರಿಯ ಪ್ರಕರಣಗಳಿವೆ. ಬೆಡ್ ವ್ಯವಸ್ಥೆ, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಯಾವುದೇ ಸಮಸ್ಯೆ ಇಲ್ಲ. ಹೆಚ್ಚಿನ ಪ್ರಮಾಣದಲ್ಲಿ ಕೇಸ್ ಬಂದರೂ, ನಿರ್ವಹಿಸುವ ರೀತಿಯಲ್ಲಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಸಾರ್ವಜನಿಕರು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಚಾಚುತಪ್ಪದೆ ಪಾಲಿಸುವ ಮೂಲಕ ಕೋವಿಡ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮಗಳಲ್ಲಿ ಡಂಗೂರ: ಕೋವಿಡ್ ಸೋಂಕು ಹೆಚ್ಚು ಇರುವ ರಾಜ್ಯ, ಜಿಲ್ಲೆ, ಊರಿಗೆ, ಓಣಿಗೆ, ಅಕ್ಕಪಕ್ಕದ ಮನೆಗಳಿಗೆ ಪಕ್ಕಕ್ಕೆ ಯಾರಾದರೂ ಬಂದಿದ್ದಲ್ಲಿ, ಅಂತಹವರಲ್ಲಿ ರೋಗ ಲಕ್ಷಣಗಳಿರುವುದು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಅಂತಹವರಿಗೆ ಕೋವಿಡ್ ಟೆಸ್ಟ್ ಮಾಡಿ, ಅಗತ್ಯ ಚಿಕಿತ್ಸೆ ಕೊಡಲಾಗುವುದು. ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸಬೇಕು ಎಂಬುದಾಗಿ ಈಗಾಗಲೆ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಡಂಗೂರ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರೀನ್ ಪಾಸ್: ಮೇ 12 ರವರೆಗೆ ಕಠಿಣ ನಿರ್ಬಂಧ ಜಾರಿಯಾಗಿರುವುದರಿಂದ ರೈತರಿಗೆ ಕೃಷಿ ಚಟುವಟಿಕೆ, ಕೃಷಿ ಪರಿಕರಗಳ ಲಭ್ಯತೆ ವಿಷಯದಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ವಸ್ತುಗಳ ಸೇವೆಯಡಿ ಬಿತ್ತನೆಬೀಜ, ಗೊಬ್ಬರ, ಪೀಡೆನಾಶಕ, ಯಂತ್ರೋಪಕರಣಗಳು ಸೇರಿರುವುದರಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಪರಿಕರ ವಿತರಣೆಗಾಗಿ ಗ್ರೀನ್ ಪಾಸ್ (ಅನುಮತಿ ಪತ್ರ ) ಗಳನ್ನು ಅಗತ್ಯವಿದ್ದಲ್ಲಿ ಅ ಧಿಕೃತ ಮಾರಾಟಗಾರರು, ವಿತರಕರಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಉಲ್ಲಂಘನೆ ಮಾಡುವ ವಿತರಕರ ಪರವಾನಗಿ ಅಮಾನತುಗೊಳಿಸುವುದು ಅಥವಾ ರದ್ದುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ| ಶ್ರೀನಿವಾಸ ಚಿಂತಾಲ್ ತಿಳಿಸಿದರು.
ಕಟ್ಟಡ ಕಾರ್ಮಿಕರಿಗೆ ಅವಕಾಶ: ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಅವರು ಮಾತನಾಡಿ, ಮೇ 12ರವರೆಗಿನ ನಿರ್ಬಧಿಂ ತ ಅವ ಧಿಯಲ್ಲಿ ಕಟ್ಟಡ ಕಾರ್ಮಿಕರು, ಸರ್ಕಾರಿ ರಸ್ತೆ, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರು ತಮ್ಮ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಿಕೊಡಲಾಗುವುದು. ಕಾರ್ಮಿಕರು ಕಟ್ಟಡ ಕಾಮಗಾರಿಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದಿರುವ ಅನುಮತಿ ಪತ್ರದ ದಾಖಲೆ ಪ್ರತಿ ಹೊಂದಿರಬೇಕು ಎಂದರು. ಕೋವಿಡ್‌ಗೆ ಸಂಬಂ ಧಿಸಿದಂತೆ ಜಿಲ್ಲಾಡಳಿತದಿಂದ ಈ ಬಾರಿ ಯಾವುದೇ ಪಾಸ್ ನೀಡುವ ವ್ಯವಸ್ಥೆ ಇರುವುದಿಲ್ಲ. ಆಸ್ಪತ್ರೆ, ಕಾರ್ಖಾನೆ ಮತ್ತಿತರ ಸೇವೆಗೆ ಅಡ್ಡಿ ಇರುವುದಿಲ್ಲ. ಎಪಿಎಂಸಿ ವ್ಯಾಪ್ತಿಯಲ್ಲಿ ಟ್ರೇಡಿಂಗ್ ಲೋಡಿಂಗ್, ಅನ್‌ಲೋಡಿಂಗ್‌ಗೆ ಅವಕಾಶ ಕಲ್ಪಿಸಲಾಗುವುದು. ಅನಾವಶ್ಯಕವಾಗಿ ಓಡಾಟ ಮಾಡುವವರು, ವಾಹನಗಳಲ್ಲಿ ಸಂಚರಿಸುವವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗ ನಿರ್ವಹಣಾ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಕಾನೂನು ಕ್ರಮಕ್ಕೆ ಅವಕಾಶ ನೀಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.