ಹಳ್ಳಿಗಳಲ್ಲಿ ಸೋಂಕು ತಡೆಗೆ ಕಾರ್ಯಪಡೆ ಮತ್ತೆ ಚುರುಕು

Team Udayavani, Apr 30, 2021, 8:05 PM IST

30-8

„ಎಚ್‌.ಕೆ. ನಟರಾಜ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಜಾರಿಯಾಗುತ್ತಿದ್ದಂತೆ ಮಹಾನಗರ, ನಗರ, ಪಟ್ಟಣಗಳಲ್ಲಿರುವ ಲಕ್ಷಾಂತರ ವಲಸಿಗರು ತಮ್ಮ ಹಳ್ಳಿಗಳಿಗೆ ತೆರಳಿದ್ದು, ಅಲ್ಲಿ ಸೋಂಕು ಹಬ್ಬುವುದನ್ನು ತಡೆಯಲು ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಪಡೆ ಹಾಗೂ ಗ್ರಾಮ ಮಟ್ಟದ ಕಾರ್ಯಪಡೆ ಕಾರ್ಯ ಚುರುಕುಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಹೊಸ ಸುತ್ತೋಲೆ ಹೊರಡಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವೈರಸ್‌ ನಿಯಂತ್ರಿಸಲು ಹಾಗೂ ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಕಳೆದ ವರ್ಷವೇ ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ಗ್ರಾಪಂ ಮಟ್ಟದ ಕಾರ್ಯಪಡೆ ಹಾಗೂ ಗ್ರಾಮ ಮಟ್ಟದ ಕಾರ್ಯಪಡೆಗಳನ್ನು ರಚಿಸಿತ್ತು. ವಲಸಿಗರಿಂದ ಹಳ್ಳಿಗಳಲ್ಲಿಯೂ ಕೊರೊನಾ ಹರಡುತ್ತಿರುವ ಈ ಸಂದರ್ಭದಲ್ಲಿ ಈ ಕಾರ್ಯಪಡೆಗಳನ್ನು ಮತ್ತೆ ಕೊರೊನಾ ಕಾರ್ಯಕ್ಕೆ ಅಣಿಗೊಳಿಸಲು ಮುಂದಾಗಿದೆ. ಕಾರ್ಯಪಡೆಗಳ ಕಾರ್ಯವೈಖರಿಗಳ ಕುರಿತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ರಾಜ್ಯದ ಎಲ್ಲ ಗ್ರಾಪಂಗಳಿಗೆ ಅನ್ವಯಿಸುವಂತೆ ಏ. 28ರಂದು ಹೊಸ ಸುತ್ತೋಲೆ ಹೊರಡಿಸಿದ್ದಾರೆ.

ನಗರ ಪ್ರದೇಶಗಳಿಂದ ಹಳ್ಳಿಗಳಿಗೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ, ಮಹಿಳಾ ಕಾರ್ಮಿಕರಿಗೆ ಮತ್ತು ದುರ್ಬಲ ವರ್ಗದವರಿಗೆ ಊಟ, ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಒದಗಿಸಬೇಕು. ವಿಶೇಷವಾಗಿ ನಿರ್ಗತಿಕರಿಗೆ, ದುರ್ಬಲರಿಗೆ, ದಿವ್ಯಾಂಗರಿಗೆ, ಮಾಜಿ ದೇವದಾಸಿಯರಿಗೆ, ತೃತೀಯ ಲಿಂಗಿಗಳಿಗೆ, ಮಹಿಳೆಯರಿಗೆ ಸ್ವಯಂ ಸೇವಕರಿಗೆ ಅವಶ್ಯ ಸೌಲಭ್ಯ ಒದಗಿಸಬೇಕು. ಗ್ರಾಪಂ ಸಹಾಯವಾಣಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಕೊರೊನಾ ತಡೆಗಟ್ಟುವ ಕಾರ್ಯ ನಿರ್ವಹಿಸುವ ಸ್ವಯಂಸೇವಕರನ್ನು ಗುರುತಿಸಿ,ಅವರ ದೂರವಾಣಿ ಸಂಖ್ಯೆ ಪ್ರಕಟಿಸಿ, ಹಗಲು-ರಾತ್ರಿ ಪಾಳಿ ವ್ಯವಸ್ಥೆಯಲ್ಲಿ ಸೇವೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಅನುದಾನ ಬಳಸಿ: ಗ್ರಾಪಂಗಳು ಮಾಸ್ಕ್, ಸಾಬೂನು, ಸ್ಯಾನಿಟೈಸರ್‌ ಮುಂತಾದ ಸ್ವತ್ಛತಾ ಪರಿಕರಗಳು, ಊಟ, ಇತ್ಯಾದಿಗಾಗಿ 14ನೇ ಹಣಕಾಸು ಆಯೋಗದ ಉಳಿಕೆ ಅನುದಾನ, 15ನೇ ಹಣಕಾಸು ಆಯೋಗದ ಅನುದಾನ ಇಲ್ಲವೇ ಸ್ವಂತ ಸಂಪನ್ಮೂಲ ಉಪಯೋಗಿಸಿಕೊಳ್ಳಬೇಕು. ಗ್ರಾಪಂ ಕಾರ್ಯಪಡೆ ಹಾಗೂ ಗ್ರಾಮ ಮಟ್ಟದ ಕಾರ್ಯಪಡೆಗಳನ್ನು ಲಸಿಕಾಕರಣದ ನೆರವಿಗೂ ಬಳಸಿಕೊಳ್ಳಬೇಕು. ಅರ್ಹ ವ್ಯಕ್ತಿಗಳಿಗೆ ಲಸಿಕೆ ಕೊಡಿಸುವಲ್ಲಿ ಕಾರ್ಯಪಡೆ ಕೆಲಸ ಮಾಡಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

ಕಾರ್ಯಪಡೆಯಲ್ಲಿ ಯಾರಿದ್ದಾರೆ?

ಗ್ರಾಪಂ ಮಟ್ಟದ ಕಾರ್ಯಪಡೆಯಲ್ಲಿ ಗ್ರಾಪಂ ಆಡಳಿತಾಧಿಕಾರಿ ಅಧ್ಯಕ್ಷರಾಗಿದ್ದಾರೆ. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು, ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರು, ಕೇಂದ್ರ ಸ್ಥಾನದ ಗ್ರಾಮ ಲೆಕ್ಕಾಧಿಕಾರಿ ಇಲ್ಲವೇ ಕಂದಾಯ ನಿರೀಕ್ಷಕರು, ಹೋಬಳಿ ಕೇಂದ್ರ ಸ್ಥಾನವಾಗಿದ್ದಲ್ಲಿ ಉಪ ತಹಶೀಲ್ದಾರ್‌, ಸ್ಥಳೀಯ ಪೊಲೀಸ್‌ ಠಾಣೆಯ ಪ್ರತಿನಿಧಿ, ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಥವಾ ಅವರ ಪ್ರತಿನಿಧಿ, ಅಂಗನವಾಡಿ ಮೇಲ್ವಿಚಾರಕರು ಅಥವಾ ಅವರ ಪ್ರತಿನಿಧಿ, ಎಎನ್‌ಎಂ ಅಥವಾ ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಪ್ರತಿನಿಧಿ, ಗ್ರಾಮ ಮಟ್ಟದ ಪುನರ್‌ ವಸತಿ ಕಾರ್ಯಕರ್ತರು, ಸ್ಥಳೀಯವಾಗಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸ್ವಯಂಸೇವಕರು ಕಾರ್ಯಪಡೆಯ ಸದಸ್ಯರಾಗಿದ್ದಾರೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯಪಡೆಯ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಗ್ರಾಮಮಟ್ಟದ ಕಾರ್ಯಪಡೆಯಲ್ಲಿ ಗ್ರಾಮದ ಮತಗಟ್ಟೆ ಅಧಿಕಾರಿಗಳು ಸಂಚಾಲಕರಾಗಿದ್ದಾರೆ. ಉಳಿದಂತೆ ವೈದ್ಯಾಧಿಕಾರಿಗಳು ಅಥವಾ ಅವರ ಪ್ರತಿನಿಧಿ, ಗ್ರಾಮ ಲೆಕ್ಕಿಗರು, ಗ್ರಾಮದ ಎಲ್ಲ ಆಶಾ ಕಾರ್ಯಕರ್ತೆಯರು, ವಾಟರ್‌ ಮ್ಯಾನ್‌ (ನೀರುಗಂಟಿ), ಎಲ್ಲ ಕೊರೊನಾ ಯೋಧರು ಈ ಕಾರ್ಯಪಡೆಯ ಸದಸ್ಯರಾಗಿದ್ದಾರೆ.

ಟಾಪ್ ನ್ಯೂಸ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.