23-24ಕ್ಕೆ ಸರ್ಕಾರಿ ನೌಕರರ ಒಕ್ಕೂಟದ ಸಮಾವೇಶ

ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯ ನಿಸರ್ಗಧಾಮದಲ್ಲಿ ಆಯೋಜನೆ: ಮಠಪತಿ

Team Udayavani, Jan 22, 2021, 3:55 PM IST

davanagere

ದಾವಣಗೆರೆ: ಆಖೀಕ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯ ಮಟ್ಟದ ಸಮಾವೇಶ ಜ. 23 ಮತ್ತು 24 ರಂದು ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ನಿಸರ್ಗಧಾಮದಲ್ಲಿ ನಡೆಯಲಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಮಹದೇವಯ್ಯ ಮಠಪತಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ರಾಜ್ಯ ಸಮಾವೇಶದಲ್ಲಿ ನೌಕರರಿಗೆ ಆಗುತ್ತಿರುವ ಸಮಸ್ಯೆ, ದೊರೆಯಬೇಕಾದ ಸೌಲಭ್ಯಗಳ ಬಗ್ಗೆ ಚರ್ಚಿಸಿ, ಠರಾವು ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯೂ ನಡೆಯಲಿದೆ ಎಂದರು.

ಇದನ್ನೂ ಓದಿ : ‘ಯುಪಿಎಸ್‌ ಸಿ ಹೆಚ್ಚುವರಿ ಪರೀಕ್ಷೆಗೆ ಅವಕಾಶವಿಲ್ಲ’ ಸುಪ್ರೀಂ ಕೋರ್ಟಿಗೆ ಕೇಂದ್ರ ಹೇಳಿಕೆ

ಶನಿವಾರ ಮಧ್ಯಾಹ್ನ 1:30ಕ್ಕೆ ಮೇಯರ್ ಬಿ.ಜಿ. ಅಜಯ್ಕುಮಾರ್ ರಾಜ್ಯ ಸಮಾವೇಶ ಉದ್ಘಾಟಿಸುವರು.ಡಿಸಿ ಮಹಾಂತೇಶ ಜಿ. ಬೀಳಗಿ, ದಾವಣಗೆರೆ ಸೋಮೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ.ಎಂ. ಸುರೇಶ್ ಇತರರು ಭಾಗವಹಿಸುವರು. ಒಕ್ಕೂಟದ ಗೌರವಾಧ್ಯಕ್ಷ ರೇಣುಕಾರಾಧ್ಯ ಅಧ್ಯಕ್ಷತೆ ವಹಿಸುವರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೌಕರ ವರ್ಗದ ಪಾತ್ರ, ಸಮಸ್ಯೆಗಳು ಮತ್ತು ಸವಾಲುಗಳು ವಿಷಯದ ಕುರಿತು ಡಾ| ಕಿರಣ್ ಎಂ. ಗಾಜನೂರು ಉಪನ್ಯಾಸ ನೀಡುವರು. 24 ರಂದು ಬೆಳಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಎನ್.ಇ.ನಟರಾಜ್, ಎಚ್.ಎಚ್. ಜೈಕುಮಾರ್ ಭಾಗವಹಿಸುವರುಎಂದರು.

ರಾಜ್ಯದಲ್ಲಿ 2.5 ಲಕ್ಷದಷ್ಟು ಹುದ್ದೆ ಖಾಲಿ ಇವೆ. ಸರ್ಕಾರ ಹೊಸ ನೇಮಕಾತಿಗೆ ಮುಂದಾಗುತ್ತಿಲ್ಲ. ದೇಶದಲ್ಲಿ ಅತಿ ಕಡಿಮೆ ವೇತನ ಪಡೆಯುತ್ತಿದ್ದಾರೆ. ಆದರೂ ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ದೇಶದಲ್ಲಿ ಮೂರನೇ ಸ್ಥಾನದಲ್ಲಿರುವುದಕ್ಕೆ ನೌಕರರು ದಕ್ಷತೆಯಿಂದ ಕೆಲಸ ಮಾಡುತ್ತಿರುವುದೇ ಕಾರಣ. ಹೊಸ ನೇಮಕಾತಿ ಬದಲಿಗೆ ಒಂದು ಹುದ್ದೆಗೆ 3-4 ಜನರನ್ನು ಹೊರ ಗುತ್ತಿಗೆ ಆಧಾರದಲ್ಲಿ ನಿಯೋಜಿಸುವ ಮೂಲಕ ಸರ್ಕಾರವೇ ನೌಕರರ ಮತ್ತು ಕಾರ್ಮಿಕರ ಶೋಷಣೆ ಮಾಡುತ್ತಿದೆ. ಏಜೆನ್ಸಿಗಳು ಮತ್ತು ಹಿರಿಯ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿರುವರೇ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವಾಗ ನೌಕರರ ಸಮಸ್ಯೆ, ಬೇಡಿಕೆ ಈಡೇರಿಸಲಿಕ್ಕೆ ಆಗುವುದಿಲ್ಲ. ನಮ್ಮ ಪ್ರಕಾರ ಸಂಘ ಸರ್ಕಾರದ ಕೃಪಾಪೋಷಿತ ಮಂಡಳಿ ಇದ್ದಂತೆ. ಮಾತುಕತೆಯ ಮೂಲಕ ಬೇಡಿಕೆ ಈಡೇರಿಸುತ್ತೇವೆ ಎಂದು ಅವರು ಹೇಳುತ್ತಾರೆ. ನಾವು ಹೋರಾಟದ ಮೂಲಕ ನಮ್ಮ ಹಕ್ಕು ಪಡೆಯುತ್ತೇವೆ ಎಂದು ಹೇಳುತ್ತೇವೆ.  ಈಗಲಾದರೂ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಮರಳಿ ಕಾಡು ಸೇರಿದ ಹೆಬ್ಟಾವು

ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಕಾರ್ಯಾಧ್ಯಕ್ಷ ಎನ್.ಇ. ನಟರಾಜ್, ಗೋವಿಂದರಾಜ್, ಗೋವಿಂದಪ್ಪ ಸಾವಜ್ಜಿ, ಕೆ. ರೇವಣಸಿದ್ದಪ್ಪ, ಡಿ. ರಮೇಶ್, ಕೆ.ಎನ್. ರಂಗೇಶ್ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.