ಸ್ಮಾರ್ಟ್‌ಸಿಟಿ ವಾಸ್ತವಾಂಶ ಜನರಿಗೆ ತಿಳಿಸಿ
ವಾಸ್ತವ ಸಂಗತಿಗಳ ಮಾಹಿತಿ ತಿಳಿಯದೆ ಕೆಲವರ ವಿರೋಧ
Team Udayavani, Jan 26, 2021, 2:55 PM IST
ದಾವಣಗೆರೆ: ಕುಂದವಾಡ ಕೆರೆ ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಸ್ಮಾರ್ಟ್‌ಸಿಟಿ ಯೋಜನೆಯಡಿ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಹಾಗೂ ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಪರಿಸರವನ್ನು ಜೀವವೈವಿಧ್ಯಗಳ ವಿಕಸನಕ್ಕೆ ನುಕೂಲವಾಗುವಂತೆ ನೈಜ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿರುವ ವಾಸ್ತವಾಂಶಗಳನ್ನು ಸಾರ್ವಜನಿಕರಿಗೆ ತಲುಪುವ ದಿಸೆಯಲ್ಲಿ ಜನಜಾಗೃತಿ ಮೂಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತ ಐಟಿ ಲೆವೆಲ್ ಅಡ್ವೈಸರಿ ಸಭೆಯಲ್ಲಿ
ಮಾತನಾಡಿದ ಅವರು, ವಾಸ್ತವ ಸಂಗತಿಗಳ ಮಾಹಿತಿ ಇಲ್ಲದೆ ತಿಳಿಯದೆ, ಕುಂದವಾಡ ಕೆರೆ ಅಭಿವೃದ್ಧಿ ಯೋಜನೆಯು ಪರಿಸರ ವಿರೋ ಧಿ ಎಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕುಂದವಾಡ ಕೆರೆ ಪ್ರಸ್ತುತ ಕೇವಲ ಕೆರೆ ಮಾತ್ರವಲ್ಲದೆ ನಗರಕ್ಕೆ ಕುಡಿಯುವ ನೀರಿಗೆ ಆಧಾರವಾಗಿರುವ ಪ್ರಮುಖ ನೀರು ಸಂಗ್ರಹಗಾರವಾಗಿದೆ. ಕುಂದವಾಡ ಕೆರೆ ಅಭಿವೃದ್ಧಿಯ ಉದ್ದೇಶ ಕುರಿತ ವಾಸ್ತವ ಅಂಶಗಳನ್ನು ಸರಿಯಾದ ರೀತಿಯಲ್ಲಿ ಪ್ರಚುರಪಡಿಸಿದಲ್ಲಿ, ಯೋಜನೆ ಕುರಿತಂತೆ ಇರುವ ತಪ್ಪು ಅಭಿಪ್ರಾಯಗಳು ದೂರವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಜನಜಾಗೃತಿ ಮೂಡಿಸಿ ಎಂದು
ಸೂಚನೆ ನೀಡಿದರು.
ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ಕುಂದುವಾಡ ಕೆರೆಯ ಕುಡಿಯುವ ನೀರಿನ
ಪ್ರಮುಖ ಸಂಗ್ರಹಗಾರವಾಗಿದ್ದು, ಬೇಸಿಗೆಯಲ್ಲಿ ಕೆರೆ ಏರಿ ಮೇಲಿನ ಕಳೆ, ಗಿಡಗಂಟೆ ಇತ್ಯಾದಿಗಳ ಕೊಳೆಯುವಿಕೆಯಿಂದ ನೀರು ಹಸಿರುಗಟ್ಟಿ ಕುಡಿಯಲು ಯೋಗ್ಯವಾಗದ ರೀತಿ ಪರಿವರ್ತನೆ ಆಗುತ್ತದೆ, ನೀರು ಕಲುಷಿತಗೊಳ್ಳುವುದರಿಂದ ಕೆರೆಯಲ್ಲಿನ ಮೀನುಗಳು, ಜೀವವೈವಿಧ್ಯಗಳು ಸಾಯುತ್ತವೆ. ಕೆರೆಯ ಏರಿಯಲ್ಲಿನ ನೀರು ಬಸಿಯುವಿಕೆ, ಹಾಳಾಗಿರುವ ಏರಿ ಮೇಲಿನ ಕಲ್ಲುಹೊದಿಕೆ ಮುಂತಾದ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಒಂದೂವರೆ ವರ್ಷದ ಹಿಂದೆಯೇ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕೆ ಏರಿಯ ಮೇಲೆ ವಿದ್ಯುತ್ ದೀಪ ಅಳವಡಿಕೆ, ಹೂವಿನ ಗಿಡ ಬೆಳೆಸುವುದು, ಕಲ್ಲು ಬೆಂಚು ಅಳವಡಿಕೆ, ವಾಕಿಂಗ್ ಪಾತ್, ಸೈಕಲ್ ಟ್ರಾಕ್ ನಿರ್ಮಾಣ ಮಾಡಲಾಗುತ್ತಿದೆ. ಕೆರೆಯ ಒಳಗೆ ಸಾರ್ವಜನಿಕರು ಹಾಗೂ ಪ್ರಾಣಿಗಳು ಹೋಗದಂತೆ ಚೈನ್‌ಲಿಂಕ್ ತಂತಿ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ.
ಈ ಕೆರೆಗೆ ಯಾವುದೇ ಮಳೆ ನೀರಿನ ಒಳಹರಿವು ಇಲ್ಲದಿರುವುದರಿಂದ, ತುಂಗಭದ್ರಾ ನದಿ ಮತ್ತು ಭದ್ರಾ ಕಾಲುವೆ ಮೂಲಕ ಹರಿಸಿ ತುಂಬಿಸಲಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯ ವಿಷಯ ಆಗಿರುವುದರಿಂದ ಕೆರೆಯಲ್ಲಿ ಸ್ವತ್ಛ ಪರಿಸರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದರ ಜತೆಗೆ ಜನರಿಗೆ ಸತ್ಯಾಂಶಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಜಿಲ್ಲಾಧಿ ಕಾರಿ ಮಹಾಂತೇಶ್ ಬೀಳಗಿ, ನಗರ ಪಾಲಿಕೆ ಆಯುಕ್ತರು ಕೂಡಲೇ ಅಂತಹ ಒತ್ತುವರಿಯನ್ನು ತೆರವುಗೊಳಿಸಿ, ಚರಂಡಿ ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಡಬೇಕು. ಯಾವುದೇ ಪ್ರಭಾವಗಳಿಗೆ ಮಣಿಯದೆ, ತುರ್ತಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು. ಈಗಾಗಲೇ 1 ಮತ್ತು 2 ನೇ ಹಂತದಲ್ಲಿ ಒಟ್ಟು 29 ಇ-ಟಾಯ್ಲೆಟ್ ನಿರ್ಮಾಣವಾಗಿದ್ದು, ಇನ್ನೂ 17 ನಿರ್ಮಾಣವಾಗಬೇಕಿದೆ. ಆದರೆ, ಹಲವೆಡೆ
ಇ-ಟಾಯ್ಲೆಟ್‌ಗಳ ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿದ್ದು, ದೂರುಗಳು ಕೇಳಿಬರುತ್ತಿವೆ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇ-ಟಾಯ್ಲೆಟ್‌ಗಳನ್ನು ಸಾರ್ವಜನಿಕರನುಕೂಲಕ್ಕಾಗಿ ಸದುದ್ದೇಶದಿಂದ ನಿರ್ಮಿಸಿದ್ದು, ಕೆಲವು ಕಿಡಿಗೇಡಿಗಳು ಕಾಯಿನ್ ಬಾಕ್ಸ್‌ನಲ್ಲಿ ಕಬ್ಬಿಣದ
ತುಂಡು, ಕಟ್ಟಿಗೆ ತುಂಡುಗಳನ್ನು ಹಾಕಿ ಹಾಳು ಮಾಡುತ್ತಿದ್ದಾರೆ. ನಗರದಲ್ಲಿ ಎಲ್ಲ 46 ಇ-ಟಾಯ್ಲೆಟ್ ಗಳನ್ನು ನಿರ್ಮಾಣ ಮಾಡಿ, ನಿರ್ವಹಣೆಗಾಗಿ
ಮಹಾನಗರಪಾಲಿಕೆಗೆ ಹಸ್ತಾಂತರ ಮಾಡಲಾಗುವುದು ಎಂದು ರವೀಂದ್ರ ಮಲ್ಲಾಪುರ ತಿಳಿಸಿದರು.
ರಸ್ತೆ ಸುರಕ್ಷತೆಗಾಗಿ ಫ್ಲೆಕ್ಸಿಬಲ್ ಮೀಡಿಯನ್, ಮಾರ್ಕರ್, ಸೋಲಾರ್ ಬ್ಲಿಂಕರ್ಗಳನ್ನು ಕಳವು ಮಾಡಿಕೊಂಡು, ತಮ್ಮ ವಾಹನಗಳಿಗೆ ಅಳವಡಿಸಿರುವುದು ಕಂಡುಬಂದಿದ್ದು, ಅಂತಹ ವಾಹನಗಳ ಫೋಟೋ ಸಹಿತ ನಗರದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ ಎಂದರು.
ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕೂಡಲೇ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸುವಂತೆ ತಾಕೀತು ಮಾಡಿದರು.
ಶಾಸಕ ಎಸ್.ಎ. ರವೀಂದ್ರನಾಥ್, ಮಹಾಪೌರ ಅಜಯ್‌ಕುಮಾರ್, ಆಯುಕ್ತ ವಿಶ್ವನಾಥ ಮುದಜ್ಜಿ ಇತರರು ಇದ್ದರು.
ಓದಿ : ನಮ್ಮ ಶಕ್ತಿ ಪ್ರದರ್ಶನಕ್ಕೆ ಅವಕಾಶ ನೀಡಬೇಡಿ: ರೈತ ಮುಖಂಡ ಬಾಬಾಗೌಡ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Dakshina Kannada ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.