ಹೊನ್ನಾಳಿ: ಬ್ಯಾಂಕ್‌ಗಳ ಮುಂದೆ ಕ್ಯೂ
Team Udayavani, May 5, 2021, 9:39 PM IST
ಹೊನ್ನಾಳಿ: ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ರಾಜ್ಯಾದ್ಯಂತ ಜಾರಿಗೊಳಿಸಿರುವ ಜನತಾ ಕರ್ಫ್ಯೂ ಮಂಗಳವಾರ ಏಳು ದಿನ ಪೂರೈಸಿತು. ಇದುವರೆಗೂ ವ್ಯಾಪಾರ ವಹಿವಾಟಿಗೆ ಬೆಳಿಗ್ಗೆ 6 ರಿಂದ 10ರವರೆಗೆ ಇದ್ದ ಸಮಯವನ್ನು ವಿಸ್ತರಿಸಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿಗದಿ ಮಾಡಲಾಗಿದೆ. ತರಕಾರಿ ವ್ಯಾಪಾರಿಗಳು ಮಾತ್ರ ಮಾರುಕಟ್ಟೆಯಲ್ಲಿ ಮಾರಾಟ ಮಾಡದೆ ರೈತರಿಂದ ತರಕಾರಿ ಖರೀದಿಸಿ ತಳ್ಳು ಗಾಡಿಯಲ್ಲಿ ಮಾರಾಟ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಹಶೀಲ್ದಾರ್ ಬಸನಗೌಡ ಕೋಟೂರ ತಿಳಿಸಿದ್ದಾರೆ.
ಬ್ಯಾಂಕ್‌ಗಳ ಮುಂದೆ ದೊಡ್ಡ ಕ್ಯೂ: ಪಟ್ಟಣದ ಎಲ್ಲಾ ಬ್ಯಾಂಕ್‌ಗಳ ಮುಂಭಾಗದಲ್ಲಿ ಜನರ ದೊಡ್ಡ ಸರತಿ ಸಾಲು ಮಂಗಳವಾರ ಕಂಡು ಬಂತು. ನ್ಯಾಮತಿ ರಸ್ತೆಯಲ್ಲಿರುವ ಎಸ್‌ಬಿಐ 1 ಮತ್ತು 2, ಕರ್ನಾಟಕ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಪ್ರಗತಿ ಗ್ರಾಮೀಣ ಬ್ಯಾಕ್‌ಗಳ ಮುಂದೆ ಗ್ರಾಹಕರು ತಮ್ಮ ವಹಿವಾಟು ನಡೆಸಲು ಹೋಗಲು ಸರತಿ ಸಾಲಿನಲ್ಲಿ ನಿಂತಿದ್ದರು. ಜನತಾ ಕಫೂನಿಂದಾಗಿ ಬ್ಯಾಂಕ್ ಗಳ ಕಾರ್ಯ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಬಂದ ಜನರಿಂದ ದೊಡ್ಡ ಸರತಿ ಸಾಲು ನಿರ್ಮಾಣವಾಗಿತ್ತು. ಬೆಳಿಗ್ಗೆ 7:30 ರಿಂದಲೇ ಪ್ರಾರಂಭವಾಗುವ ಬಿಸಿಲಿನ ಧಗೆ ಹೆಚ್ಚಾಗುತ್ತಿದೆ. ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳಲು ಬಂದಂತಹ ಜನರು ಬಿಸಿಲಿನ ತಾಪಕ್ಕೆ ಬಸವಳಿಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.