ಬಿತ್ತನೆ ಬೀಜ-ಗೊಬ್ಬರ ಸಮರ್ಪಕವಾಗಿ ಪೂರೈಸಿ
Team Udayavani, May 9, 2021, 9:58 PM IST
ದಾವಣಗೆರೆ: ಮಳೆ ಆರಂಭವಾಗುತ್ತಿದ್ದಂತೆ ಬಿತ್ತನೆ ಆರಂಭವಾಗಲಿದ್ದು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಮತ್ತು ಇತರೆ ಪರಿಕರಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂನ್ ಮತ್ತು ಜುಲೈ ತಿಂಗಳಿಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ಜಂಟಿ ಕೃಷಿ ನಿರ್ದೇಶಕರು ನೋಡಿಕೊಳ್ಳಬೇಕು. ಏನಾದರೂ ಕೊರತೆ ಇದ್ದರೆ ನನಗೆ ತಿಳಿಸಬೇಕು. ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 2,44,297 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ಪ್ರಮುಖ ಬೆಳೆಗಳಾದ ಭತ್ತ 66037 ಹೆಕ್ಟೇರ್, ಜೋಳ 2400 ಹೆಕ್ಟೇರ್, ಮುಸುಕಿನ ಜೋಳ 1,26,708 ಹೆಕ್ಟೇರ್, ರಾಗಿ 7295 ಹೆಕ್ಟೇರ್, ತೊಗರಿ 7215 ಹೆಕ್ಟೇರ್, ಶೇಂಗಾ 13,775 ಹೆಕ್ಟೇರ್, ಸೂರ್ಯಕಾಂತಿ 2190 ಹೆಕ್ಟೇರ್, ಹತ್ತಿ 10,327 ಹೆಕ್ಟೇರ್ ಮತ್ತು ಕಬ್ಬು 1529 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಇದೆ ಎಂದು ಮಾಹಿತಿ ನೀಡಿದರು.
ಕೃಷಿ ಇಲಾಖೆಯ 20 ರೈತ ಸಂಪರ್ಕ ಕೇಂದ್ರಗಳು ಹಾಗೂ 10 ಹೆಚ್ಚುವರಿ ವಿತರಣಾ ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ರಸಗೊಬ್ಬರ ತಯಾರಿಕಾ ಸಂಸ್ಥೆಗಳ ಪ್ರತಿನಿ ಧಿಗಳೊಂದಿಗೆ ಹಾಗೂ ದಾಸ್ತಾನು ಸಂಸ್ಥೆಯವರೊಡನೆ ಸಭೆ ನಡೆಸಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಲಾರಿ ಮಾಲೀಕರ ಸಂಘದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಸಗೊಬ್ಬರಗಳ ಸುಗಮ ಸರಬರಾಜಿಗೆ ಕ್ರಮ ವಹಿಸಲಾಗಿದೆ. ಕೃಷಿ ಪರಿಕರ ಮಾರಾಟಗಾರರು ಮತ್ತು ಕೃಷಿ ಯಂತ್ರಧಾರೆ ಕೇಂದ್ರದವರಿಗೆ 534 ಗ್ರೀನ್ ಪಾಸ್ ವಿತರಿಸಲಾಗಿದೆ ಎಂದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನ್ನಾರ್ ಮಾತನಾಡಿ, ಬಾಳೆ, ಮಾವು, ನಿಂಬೆ, ಕಲ್ಲಂಗಡಿ, ಪಪ್ಪಾಯ, ದಾಳಿಂಬೆ, ಪೇರಲೆ ಮತ್ತು ಸಪೋಟಾ ಸೇರಿದಂತೆ ಒಟ್ಟಾರೆ 2081 ಹೆಕ್ಟೇರ್ ಪ್ರದೇಶದಲ್ಲಿ 29,131 ಮೆಟ್ರಿಕ್ ಟನ್ ಬೆಳೆಯಲಾಗಿದೆ. ಇದರಲ್ಲಿ ಹೆಚ್ಚಾಗಿ ಬಾಳೆ 807 ಮತ್ತು ಮಾವು 1148 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಟೊಮ್ಯಾಟೊ, ಈರುಳ್ಳಿ, ಹಸಿಮೆಣಸು, ಬದನೆ, ಬೆಂಡೆಕಾಯಿ, ಕೋಸು, ಪರಂಗಿ, ಬೂದುಗುಂಬಳ, ಕ್ಯಾಪ್ಸಿಕಂ ಮತ್ತು ಇತರೆ ತರಕಾರಿಗಳನ್ನು 2922 ಹೆಕ್ಟೇರ್ ಪ್ರದೇಶದಲ್ಲಿ 79,132 ಮೆಟ್ರಿಕ್ ಟನ್ ಬೆಳೆಯಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಸಿಇಒ ಡಾ| ವಿಜಯಮಹಾಂತೇಶ ದಾನಮ್ಮನವರ್, ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ, ಎಪಿಎಂಸಿ ಸಹಾಯಕ ನಿರ್ದೇಶಕ ಪ್ರಭು, ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ನಾಗರಾಜ್, ಪದಾಧಿಕಾರಿಗಳಾದ ಪಾಪಣ್ಣ, ಮಹಾಂತೇಶ, ಕೃಷ್ಣಮೂರ್ತಿ, ಸುರೇಶ್, ಸೋಮಶೇಖರ್, ಇತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.