ಕೊರೊನಾ ಪರೀಕ್ಷೆಗೆ ಗ್ರಾಮಸ್ಥರಲ್ಲಿ ರೇಣು ಮನವಿ


Team Udayavani, May 10, 2021, 10:04 PM IST

10-12

ಹೊನ್ನಾಳಿ: “ನನಗೆ ಹೊಡೆದರೂ, ಬೈದರೂ ಪರವಾಗಿಲ್ಲ. ಮೊದಲು ಗ್ರಾಮಸ್ಥರೆಲ್ಲರೂ ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ’ ಹೀಗೆ ಮನವಿ ಮಾಡಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ. ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮಕ್ಕೆ ಸತತ ನಾಲ್ಕನೇ ದಿನವೂ ಭೇಟಿ ನೀಡಿ ಗ್ರಾಮಸ್ಥರಲ್ಲಿ ಅವರು ಮನವಿ ಮಾಡಿದರು.

“ನಿಮ್ಮ ತೆರಿಗೆ ಹಣದಲ್ಲಿ ನನ್ನ ವೇತನ, ಇತರ ಭತ್ಯೆಗಳು, ಅಧಿ  ಕಾರಿಗಳ ವೇತನ ಮತ್ತು ಬಹುಮುಖ್ಯವಾಗಿ ರಾಜ್ಯದ ಅಭಿವೃದ್ಧಿಯೂ ಸಹ ನಡೆಯುತ್ತೆ. ಹಾಗಾಗಿ ನಿಮ್ಮ ಆರೋಗ್ಯವನ್ನು ಕಾಪಾಡುವುದು ಜನಪ್ರತಿನಿಧಿ ಯಾದ ನನ್ನ ಜವಾಬ್ದಾರಿ. ದಯಮಾಡಿ ಮೊದಲು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಗ್ರಾಮಸ್ಥರಲ್ಲಿ ವಿನಮ್ರವಾಗಿ ಪ್ರಾರ್ಥಿಸಿದರು.

ಗ್ರಾಮದಲ್ಲಿ 1591 ಜನಸಂಖ್ಯೆ ಇದ್ದು ಅವರಲ್ಲಿ 384 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು ಅದರಲ್ಲಿ 51 ಜನರಿಗೆ ಪಾಸಿಟಿವ್‌ ಪತ್ತೆಯಾಗಿದ್ದು ಇಬ್ಬರೂ ಸಾವನ್ನಪ್ಪಿದ್ದಾರೆ. ಗ್ರಾಮ ಕೊರೊನಾದಿಂದ ವ್ಯಾಪಕತೆ ಪಡೆದಿದೆ. ಗ್ರಾಮಸ್ಥರು ಭಯಪಡುವ ಅಗತ್ಯವಿಲ್ಲ. ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಗ್ರಾಮಸ್ಥರಿಗೆ ಆತ್ಮಸ್ಥೆçರ್ಯ ತುಂಬಿದರು.

ಅಧಿಕಾರಿಗಳಿಗೆ ಕಿವಿಮಾತು: ಗ್ರಾಮಸ್ಥರನ್ನು ಮನವೊಲಿಸಿ ಎಲ್ಲರಿಗೂ ಕೊರೊನಾ ಟೆಸ್ಟ್‌ ಮಾಡಿಸಿ ಹಾಗೂ ಯಾರಿಗೆ ಪಾಸಿಟಿವ್‌ ಬರುತ್ತೋ ಅಂತವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆ ಕಳುಹಿಸುವ ವ್ಯವಸ್ಥೆ ಮಾಡಿ ಎಂದು ತಹಶೀಲ್ದಾರ್‌ ತನುಜ ಸವದತ್ತಿ, ಉಪ ತಹಶೀಲ್ದಾರ್‌ ನ್ಯಾಮತಿ ನಾಗರಾಜ್‌ ಅವರಿಗೆ ಸೂಚಿಸಿದರು.

ಕಂಟೈನ್ಮೆಂಟ್‌ ಝೋನ್‌; ಗ್ರಾಮದಲ್ಲಿ 51 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಲ್ಲದೆ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ 1200 ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಬೇಕಾಗಿರುವುದರಿಂದ ಗ್ರಾಮವನ್ನು ಕಂಟೈನ್ಮಂಟ್‌ ಝೋನ್‌ ಎಂದು ಘೋಷಿಸಿ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಇಲ್ಲೇ ಬೀಡು ಬಿಟ್ಟಿದೆ. ಗ್ರಾಮದಲ್ಲಿ ಯಾರಿಗೆ ಆಹಾರ ಸಾಮಗ್ರಿ ಮತ್ತೆ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಅಗತ್ಯ ಇದೆಯೋ ಅಂತಹವರಿಗೆ ಫುಡ್‌ಕಿಟ್‌ ಹಾಗೂ ಅಗತ್ಯ ತರಕಾರಿ ನೀಡುವ ಭರವಸೆ ನೀಡಿದರು.

ತಹಶೀಲ್ದಾರ್‌ ತನುಜ ಸವದತ್ತಿ, ಉಪ ತಹಶೀಲ್ದಾರ್‌ ನ್ಯಾಮತಿ ನಾಗರಾಜ್‌, ಪಿಡಿಒ ಪ್ರದೀಪ್‌ಕುಮಾರ್‌, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.