ಶಿವಮೊಗ್ಗ ಮಾದರಿಯಲ್ಲಿ ಸಂಪೂರ್ಣ ಲಾಕ್‌ ಡೌನ್‌


Team Udayavani, May 14, 2021, 8:51 PM IST

14-12

ದಾವಣಗೆರೆ: ಶಿವಮೊಗ್ಗ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ ಡೌನ್‌ ಜಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ -19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಹಿರಿಯ ಅಧಿ ಕಾರಿಗಳೊಂದಿಗೆ ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಸಂಸದರು, ಶಾಸಕರು ಶಿವಮೊಗ್ಗ ಮಾದರಿಯಲ್ಲಿ ನಾಲ್ಕು ದಿನ ಸಂಪೂರ್ಣ, ಮೂರು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ, ಈಗಿನಂತೆ ಲಾಕ್‌ಡೌನ್‌ ಮಾಡಬೇಕು ಎಂದು ತಿಳಿಸಿದ್ದಾರೆ. ಸಂಪೂರ್ಣ ಲಾಕ್‌ಡೌನ್‌ ಯಾವ ಮಾದರಿಯಲ್ಲಿ ಇರಬೇಕು ಎಂಬುದರ ಬಗ್ಗೆ ಚರ್ಚಿಸಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ, ಶಿವಮೊಗ್ಗ ಮಾದರಿಯಲ್ಲಿ ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಬೇಕು. ನರಪಿಳ್ಳೆಯೂ ಓಡಾಡದಂತೆ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಇಲ್ಲದೇ ಹೋದಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಆಗುವುದಿಲ್ಲ ಎಂದರು.

ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಇತರರು ಸಹಮತ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್‌ ಮಾತನಾಡಿ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ ನೀಡಲಾಗಿದೆ. ಅನಾವಶ್ಯಕವಾಗಿ ಓಡಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದೇ ಇದ್ದರೆ ಕೊರೊನಾ ನಿಯಂತ್ರಣ ಆಸಾಧ್ಯ. ಸಾರ್ವಜನಿಕರು ಸಹ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡದೇ ಇದ್ದರೆ ಯಾರೂ ಏನು ಮಾಡಲಿಕ್ಕೆ ಆಗುವುದಿಲ್ಲ. ಹಾಗಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಹೋಂ ಐಸೋಲೇಷನ್‌ನಲ್ಲಿ ಇರುವವರಿಂದ ಸೋಂಕು ಹರಡುತ್ತಿದೆ ಎಂಬುದು ಕೇಳಿ ಬರುತ್ತಿದೆ. ಹಾಗಾಗಿ ಹೋಂ ಐಸೋಲೇಷನ್‌ನಲ್ಲಿ ಇರುವರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಕರೆ ತರಬೇಕು. 10-12 ಪ್ರಕರಣ ಪತ್ತೆಯಾದ ಪ್ರದೇಶವನ್ನು ಸೀಲ್‌ಡೌನ್‌ ಮಾಡಬೇಕು. ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಸೋಂಕಿನ ಪ್ರಮಾಣ ಕಡಿಮೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಸಚಿವರ ಸೂಚನೆಗೆ ಧ್ವನಿಗೂಡಿಸಿದ ಸಂಸದ ಸಿದ್ದೇಶ್ವರ, ಹೋಂ ಐಸೋಲೇಷನ್‌ನಲ್ಲಿ ಇದ್ದವರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ತಂದು ಚಿಕಿತ್ಸೆ ಕೊಡಿಸುವ ಮೂಲಕ ಸೋಂಕಿನ ಸರಪಳಿ ತುಂಡರಿಸಬೇಕು ಎಂದರು. ಹೋಂ ಐಸೋಲೇಷನ್‌ನಲ್ಲಿ ಇದ್ದವರು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಎಚ್ಚರಿಸಿದರು. ಹೋಂ ಐಸೋಲೇಷನ್‌ನಲ್ಲಿ ಇದ್ದವರು ತಮಗೆ ಏನೂ ಆಗಿಲ್ಲ. ಬಿಟ್ಟು ಬಿಡಿ ಎಂದು ಒತ್ತಾಯಿಸಿದ್ದೂ ಇದೆ. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಓರ್ವ ಪಿಎಸ್‌ಐ, ಇಬ್ಬರು ಪೇದೆಗಳ ನಿಯೋಜನೆ ಮಾಡುವಂತೆ ಎಂದು ಸಚಿವರು ಸೂಚಿಸಿದರು.

ಸಮಸ್ಯೆ ನಿವಾರಣೆ: ಒಂದು ವಾರದಲ್ಲಿ ಆಕ್ಸಿಜನ್‌ ಒಳಗೊಂಡಂತೆ ಎಲ್ಲ ಸಮಸ್ಯೆ ಬಗೆಹರಿಯಲಿದೆ. ಮುಂದಿನ ವಾರ ಲಸಿಕೆ ಬಂದರೆ ಸಮಸ್ಯೆ ಬಗೆಹರಿಯಲಿದೆ. ಹಿಂದೆ ಲಸಿಕೆ ಹಾಕಿಸಿಕೊಳ್ಳುವಂತೆ ಗೋಗೆರೆದರೂ ಜನರು ಬರುತ್ತಿರಲಿಲ್ಲ. ಈಗ ನೂಕು ನುಗ್ಗಲು ಕಂಡು ಬರುತ್ತಿದೆ. ಎಲ್ಲವನ್ನೂ ಸರಿಪಡಿಸುವ ಕೆಲಸ ಆಗಲಿದೆ. ಲಸಿಕೆಯನ್ನ ಸಂಪೂರ್ಣವಾಗಿ ನೀಡಲಾಗುವುದು. ಅಧಿಕಾರಿಗಳು ಯುದೊœàಪಾದಿಯಲ್ಲಿ ಕೆಲಸ ಮಾಡುವ ಮೂಲಕ ಜಿಲ್ಲೆಯ ಜನರ ಪ್ರಾಣ ರಕ್ಷಣೆ ಮಾಡಬೇಕು. ನನ್ನ ಬಗ್ಗೆಯೂ ಟೀಕೆ ಮಾಡುತ್ತಿದ್ದಾರೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲಿಕ್ಕೆ ಹೋಗುವುದಿಲ್ಲ. ನನಗೆ ನನ್ನ ಜಿಲ್ಲೆಯ ಜನರ ಪ್ರಾಣ ರಕ್ಷಣೆ ಮಾಡುವುದು ಮುಖ್ಯ. ಅಧಿಕಾರಿಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಸಚಿವ ಬಿ.ಎ. ಬಸವರಾಜ್‌ ತಿಳಿಸಿದರು.

ಆಕ್ಸಿಜನ್‌ ಘಟಕ: ಚನ್ನಗಿರಿಯಲ್ಲಿ 10 ಕೆಎಲ್‌ ಸಾಮರ್ಥ್ಯದ ಆಕ್ಸಿಜನ್‌ ಘಟಕ ಪ್ರಾರಂಭಕ್ಕೆ ಸೋಪ್‌ ಮತ್ತಯ ಡಿರ್ಟಜೆಂಟ್‌ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಮುಂದೆ ಬಂದಿದ್ದಾರೆ. ಅಲ್ಲಿಯೇ ಆಮ್ಲಜನಕ ಉತ್ಪಾದನೆ ಮಾಡುವುದರಿಂದ ಸಮಸ್ಯೆ ಬಗೆಹರಿಯಲಿದೆ ಎಂದು ಸಚಿವರು ತಿಳಿಸಿದರು. ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಜಿಲ್ಲೆಗೆ 23 ಕೆ.ಎಲ್‌. ಆಮ್ಲಜನಕ ಬೇಕಾಗಿದೆ. 16 ಕೆ.ಎಲ್‌. ಮಾತ್ರ ಬರುತ್ತಿದೆ. ಟ್ಯಾಂಕರ್‌ ಕೊಡಿಸಿಕೊಟ್ಟರೆ ಆಮ್ಲಜನಕ ತುಂಬಿಸಿ ಕೊಡಿಸುತ್ತೇನೆ. ಗಣಿ ಇಲಾಖೆ ಸಚಿವ ಮುರುಗೇಶ್‌ ನಿರಾಣಿ ಅವರು ಸಹ ಟ್ಯಾಂಕರ್‌ ಒದಗಿಸುವುದಾಗಿ ತಿಳಿಸಿದ್ದಾರೆ.

ಆಮ್ಲಜನಕ ಎಕ್ಸ್‌ಪ್ರೆಸ್‌ ಮೂಲಕ ಇನ್ನೂ ಹೆಚ್ಚಿನ ಆಕ್ಸಿಜನ್‌ ಪಡೆಯುವಂತಾಗಬೇಕು. ಜಿಲ್ಲೆಗೆ ವ್ಯಾಕ್ಸಿನ್‌, ಆಮ್ಲಜನಕ, ಇಂಜೆಕ್ಷನ್‌ ಏನು ಬೇಕೋ ಅದನ್ನು ಪಡೆಯಲಿಕ್ಕೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡೋಣ ಎಂದು ತಿಳಿಸಿದರು.

ಜಿಲ್ಲೆಗೆ ಏನೇನೋ ಬೇಕು ಎಂಬುದರ ಬಗ್ಗೆ ಪತ್ರ ಕೊಡಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಆಮ್ಲಜನಕ ಏಜೆನ್ಸಿಗಳ ಬಳಿ ಅಧಿಕಾರಿಗಳ ಹೊರತುಪಡಿಸಿ ಇತರರು ಸುಳಿಯದಂತೆ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿಗೆ ಸೂಚಿಸಿದರು. ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಪ್ರೊ. ಎನ್‌. ಲಿಂಗಣ್ಣ, ಮೇಯರ್‌ ಎಸ್‌.ಟಿ. ವೀರೇಶ್‌, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.