ಹಿರಿಯೂರಿನಲ್ಲಿ ಪಾದಯಾತ್ರೆಗೆ ಭವ್ಯ ಸ್ವಾಗತ
ಕುರುಬ ಸಮಾಜದ ಮುಖಂಡರು ಸಮಾಜದ ಬಂಧುಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಪಾದಯಾತ್ರೆ ಸ್ವಾಗತಿಸಿದರು.
Team Udayavani, Jan 26, 2021, 3:07 PM IST
ಹಿರಿಯೂರು: ಕುರುಬ ಜನಾಂಗಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಲು ಕಾಗಿನೆಲೆಯಿಂದ ಬೆಂಗಳೂರುವರೆಗೆ ಪಾದಯಾತ್ರೆ ಆರಂಭಿಸಿರುವ ನಿರಂಜನಾನಂದಪುರಿ ಸ್ವಾಮೀಜಿ ಮತ್ತು ಇತರೆ ಸ್ವಾಮೀಜಿಗಳು ನಡೆಸುತ್ತಿರುವ ಪಾದಯಾತ್ರೆ ಐಮಂಗಲದಿಂದ ನಗರಕ್ಕೆ ಸೋಮವಾರ ಸಂಜೆ ಆಗಮಿಸಿತು. ತಾಲೂಕಿನ ಕುರುಬ ಸಮಾಜದ ಮುಖಂಡರು ಸಮಾಜದ ಬಂಧುಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಪಾದಯಾತ್ರೆ ಸ್ವಾಗತಿಸಿದರು.
ಭಾನುವಾರ ಚಿತ್ರದುರ್ಗದಿಂದ ಹೊರಟು ತಾಲೂಕಿನ ಐಮಂಗಲ ಗ್ರಾಮದಲ್ಲಿ ವಾಸ್ತವ್ಯ ಮಾಡಿ ಸೋಮವಾರ ಬೆಳಗ್ಗೆ ಐಮಂಗಲದಿಂದ
ಹಿರಿಯೂರಿಗೆ ಸಂಜೆ 5.30 ಆಗಮಿಸಿತು. ನಗರದ ಹುಳಿಯಾರ್ ರಸ್ತೆಯ ಯಜ್ಞವಲ್ಕ ಶಾಲೆಯಲ್ಲಿ ಪಾದಯಾತ್ರಿಗಳಿಗೆ ವಸತಿ ಊಟ ಕಲ್ಪಿಸಿದ್ದು, ತಾಲೂಕಿನ ಎಲ್ಲ ಕುರುಬ ಸಮುದಾಯದವರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ತಾಲೂಕು ಕುರುಬ ಸಂಘದ ಅಧ್ಯಕ್ಷ ಮಹಂತೇಶ್, ಯಜ್ಞವಲ್ಕ ವಿದ್ಯಾಸಂಸ್ಥೆಯ
ಮುಖ್ಯಸ್ಥರಾದ ಸುರೇಶ್, ಗಿರಿಜಪ್ಪ, ಇಂಜಿನಿಯರ್ ಮಂಜಣ್ಣ, ವಕೀಲರಾದ ಕುಮಾರ್ ಗೌಡ, ಜೈರಾಂ, ಕಂದಿಕೆರೆ ಸುರೇಶ್ ಬಾಬು, ಗುತ್ತಿಗೆದಾರ ಎಚ್. ವೆಂಕಟೇಶ್, ನಗರಸಭೆ ಮಾಜಿ ಅಧ್ಯಕ್ಷೆ ಮಂಜುಳಾ ವೆಂಕಟೇಶ್, ಸಂಘದ ಪದಾಧಿ ಕಾರಿಗಳು ಸ್ವಾಗತಿಸಿದರು. ಪಾದಯಾತ್ರೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ರಾತ್ರಿ 6 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯಸ್ಥಾಪಕರು ತಿಳಿಸಿದ್ದಾರೆ.
ಓದಿ : ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.