ಸೋಂಕಿತರು ಕೋವಿಡ್‌ ಸೆಂಟರ್‌ನಲ್ಲಿರುವುದೇ ಸೂಕ್ತ


Team Udayavani, May 16, 2021, 9:59 PM IST

16-13

ದಾವಣಗೆರೆ: ಮನೆಯಲ್ಲಿ ಒಂದೇ ಶೌಚಾಲಯ, ಸ್ನಾನಗೃಹ ಹೊಂದಿರುವ ಕೊರೊನಾ ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ನಲ್ಲಿ ಇರಬಾರದು. ಇದರಿಂದ ಮನೆಯ ಇತರ ಸದಸ್ಯರಿಗೂ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿರಬೇಕು ಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.

ಶನಿವಾರ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆರಂಭಿಸಿರುವ ಕೋವಿಡ್‌ ಕೇರ್‌ ಸೆಂಟರ್‌ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತರಳಬಾಳು ವಸತಿ ನಿಲಯದ 30 ಕೊಠಡಿಗಳನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಒದಗಿಸಿದ್ದು, ಪ್ರತಿ ಕೊಠಡಿಯಲ್ಲಿ ಮೂರು ಬೆಡ್‌ ವ್ಯವಸ್ಥೆ ಇದೆ. ಹೀಗಾಗಿ ಒಟ್ಟು 90 ಜನರಿಗೆ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸ್ಥಳಾವಕಾಶ ಕಲ್ಪಿಸಬಹುದಾಗಿದೆ. ಅಲ್ಲದೆ ಇಲ್ಲಿನ ವಾತಾವರಣವೂ ಹಿತಕರವಾಗಿದ್ದು, ಬಿಸಿನೀರು, ಉತ್ತಮ ಊಟೋಪಹಾರದ ವ್ಯವಸ್ಥೆ ಮಾಡಲಾಗುವುದು ಎಂದರು.

ಕೊರೊನಾ ರೋಗ ಲಕ್ಷಣಗಳು ಕಂಡುಬರದ, ಎ-ಸಿಂಮrಮ್ಯಾಟಿಕ್‌ ಇದ್ದು, ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರಿಗೆ ಇಲ್ಲಿನ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ನಿಗಾದಲ್ಲಿ ಇರಿಸಲಾಗುವುದು. ಕೋವಿಡ್‌ ಕೇರ್‌ ಸೆಂಟರ್‌ಗೆ ವೈದ್ಯರ ಶಿಫಾರಸಿನ ಮೇರೆಗೆ ದಾಖಲಾಗುವ ಎ-ಸಿಂಮrಮ್ಯಾಟಿಕ್‌ ಸೋಂಕಿತರಿಗೆ ಉತ್ತಮ ರೀತಿಯಲ್ಲಿ ಊಟೋಪಹಾರ, ಬಿಸಿನೀರಿನ ವ್ಯವಸ್ಥೆ ಇದೆ. ಸೋಂಕಿತರ ಆರೈಕೆಗಾಗಿ ವೈದ್ಯರು ಹಾಗೂ ನರ್ಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕೇವಲ ಖಾಸಗಿ ವಸತಿ ನಿಲಯಗಳು ಮಾತ್ರವಲ್ಲದೆ, ಬಿಸಿಎಂ ವಸತಿ ನಿಲಯಗಳು, ಕಲ್ಯಾಣಮಂಟಪಗಳನ್ನು ಕೂಡ ಅವಶ್ಯ ಎನ್ನಿಸಿದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನಾಗಿ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್‌ ಕೇರ್‌ ಸೆಂಟರ್‌ ಗಳನ್ನು ಸ್ಥಾಪಿಸಲಾಗುತ್ತಿದೆ. ನಗರಕ್ಕೆ ಸಮೀಪದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿ ನಿಲಯವನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿಸಲು ತರಳಬಾಳು ಜಗದ್ಗುರುಗಳಾದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳಿಗೆ ಕೋರಿದಾಗ ಸ್ವಾಮೀಜಿಯವರು ತಕ್ಷಣವೇ ಒಪ್ಪಿಗೆ ಸೂಚಿಸಿದರು.

ವಸತಿ ನಿಲಯವನ್ನು ಕೋವಿಡ್‌ ಕೇರ್‌ ಸೆಂಟರ್‌ಗಾಗಿ ಒದಗಿಸಿದ್ದಾರೆ. ಅಲ್ಲದೆ ಅಗತ್ಯವಿರುವ ಎಲ್ಲ ಸಹಕಾರವನ್ನೂ ನೀಡುವುದಾಗಿ ಹೇಳಿದ್ದಾರೆ. ಜನತೆಯ ಪರವಾಗಿ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದರು. ಜನರ ಸಹಕಾರ ಅಗತ್ಯ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಮೊದಲುಗೊಂಡು, ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು, ವೈದ್ಯರು, ಶುಶ್ರೂಷಕರು, ಪೊಲೀಸರು ಸೇರಿದಂತೆ ಬಹಳಷ್ಟು ಜನ ಹಗಲಿರುಳೆನ್ನದೆ ದುಡಿಯುತ್ತಿದ್ದಾರೆ.

ಜನರೂ ಕೂಡ ಸರ್ಕಾರದ ಆಶಯವನ್ನು ಅರ್ಥ ಮಾಡಿಕೊಂಡು, ಕೋವಿಡ್‌ ನಿಯಂತ್ರಣಕ್ಕೆ ರೂಪಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕು, ಇಲ್ಲದಿದ್ದಲ್ಲಿ ಕೋವಿಡ್‌ ನಿಯಂತ್ರಣ ಕಷ್ಟ ಎಂದು ಸಂಸದರು ಹೇಳಿದರು. ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಕೋವಿಡ್‌ ಸೋಂಕಿತರಿಗೆ ಸೂಕ್ತ ವೈದ್ಯಕೀಯ ನೆರವು ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು, ಅಗತ್ಯ ವ್ಯವಸ್ಥೆ ಮಾಡುತ್ತಿದ್ದೇವೆ. ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡದಂತೆ ಸರ್ಕಾರ ಹಲವು ರೀತಿಯಲ್ಲಿ ಯತ್ನಿಸುತ್ತಿದೆ. ಇನ್ನಾದರೂ ಸಾರ್ವಜನಿಕರು ಜಾಗ್ರತರಾಗಬೇಕು. ವಿನಾಕಾರಣ ಮನೆಯಿಂದ ಹೊರಗಡೆ ಬಂದು ಓಡಾಡಬಾರದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮಹಾನಗರಪಾಲಿಕೆ ಮಹಾಪೌರ ಎಸ್‌.ಟಿ. ವೀರೇಶ್‌, ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್‌ ಬಾರ್ಕಿ, ಜಿಲ್ಲಾ ಮಲೇರಿಯಾ ನಿಯಂತ್ರಣಾ ಧಿಕಾರಿ ಡಾ| ನಟರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Davanagere: Special tax operation: 1.65 crore tax collection in a single day

Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ

Siddaramaiah will resigns before Assembly session: R. Ashok

Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.