ಹಳ್ಳಿಗೂ ವ್ಯಾಪಿಸಿದ ಕೊರೊನಾ ಕಬಂಧ ಬಾಹು

Team Udayavani, May 17, 2021, 10:40 PM IST

17-19

„ಎಚ್‌.ಬಿ. ನಿರಂಜನಮೂರ್ತಿ

ಭರಮಸಾಗರ : ಕೊರೊನಾ ವೈರಾಣು ದಿನದಿಂದ ದಿನಕ್ಕೆ ಹಳ್ಳಿಗಳತ್ತ ತನ್ನ ಕಬಂಧ ಬಾಹು ಚಾಚುತ್ತಿದ್ದು, ಹಳ್ಳಿಗರನ್ನು ಹೈರಾಣವಾಗಿಸುತ್ತಿದೆ. ಭರಮಸಾಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರನ್ನು ಕೊರೊನಾ ಬೆಂಬಿಡದೆ ಕಾಡಲು ಆರಂಭಿಸಿದೆ. ಕಳೆದ ಕೆಲ ದಿನಗಳಿಂದ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಲೇ ಇದೆ. ಅಕ್ಸಿಜನ್‌, ವೆಂಟಿಲೇಟರ್‌, ಐಸಿಯು ಸೇರಿದಂತೆ ಕೊರೊನಾ ಸಂಬಂಧಿತ ಚಿಕಿತ್ಸೆಗಾಗಿ ಜನರು ಜಿಲ್ಲಾ ಕೇಂದ್ರಗಳಲ್ಲಿನ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ.

ಕಡುಬಡವರಾಗಿರುವ ಪ್ರಾಥಮಿಕ ಹಂತದ ಕೊರೊನಾ ರೋಗಿಗಳು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಡೇಡಿಕೇಟೆಡ್‌ ಕೋವಿಡ್‌ ಹೆಲ್ತ್‌ ಸೆಂಟರ್‌ ನೆಚ್ಚಿಕೊಂಡಿದ್ದಾರೆ. 25 ಹಾಸಿಗೆಗಳ ಆಸ್ಪತ್ರೆ ಇದಾಗಿದ್ದು, ಆಕ್ಸಿಜನ್‌ ಪ್ರಮಾಣ 90 ಸರಾಸರಿಯಲ್ಲಿ ಇರುವವರು ಮತ್ತು ಪ್ರಾಥಮಿಕ (ಮಾಡರೇಟೆಡ್‌ ಕೇಸಸ್‌) ಹಂತದ ಕೊರೊನಾ ರೋಗಿಗಗಳಿಗೆ ಮಾತ್ರ ಇಲ್ಲಿ ಚಿಕಿತ್ಸೆ ಲಭ್ಯವಾಗುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಇತ್ತಿಚೆಗೆ ಕೊರೊನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಆಸ್ಪತ್ರೆಗೆ ಬರುವ ಜನರಲ್ಲಿಯೇ ಕೊರೊನಾ ಕುರಿತು ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಅನವಶ್ಯಕವಾಗಿ ಆಸ್ಪತ್ರೆಗಳಿಗೆ ಬರುವುದನ್ನು ತಡೆಯಲಾಗುತ್ತಿದೆ.

ವ್ಯಾಕ್ಸಿನ್‌ ತೆಗೆದುಕೊಳ್ಳುವವರು ಆಶಾ ಕಾರ್ಯಕರ್ತೆಯರ ಮೂಲಕ ತಿಳಿದು ಆಸ್ಪತ್ರೆಗೆ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಪಾಸಿಟಿವ್‌ ವ್ಯಕ್ತಿಯ ಟ್ರೇಸಿಂಗ್‌ನಲ್ಲಿ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕಿತರನ್ನು ಗುರುತಿಸಿ ಅವರ ತಪಾಸಣೆ ಮೂಲಕವೇ ಕೊರೊನಾ ಜಾಗೃತಿ ಕಾರ್ಯ ನಡೆಸಲಾಗುತ್ತಿದೆ. ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಅನವಶ್ಯಕವಾಗಿ ಸಂಚಾರ ನಡೆಸುವುದನ್ನು ತಡೆಯಲಾಗುತ್ತಿದೆ.

ಬೆಂಗಳೂರು ಸೇರಿದಂತೆ ಇತರೆ ಊರುಗಳಿಂದ ಆಗಮಿಸಿದವರ ಬಗ್ಗೆ ಆಶಾ ಕಾರ್ಯಕರ್ತೆಯರು ನಿಗಾ ವಹಿಸುತ್ತಿದ್ದಾರೆ. ಈವರೆಗೆ ಆರ್‌ಟಿಪಿಸಿಆರ್‌ನಲ್ಲಿ ನೋಂದಾಯಿಸಲ್ಪಟ್ಟ ಮಾಹಿತಿ ಪ್ರಕಾರ, ಭರಮಸಾಗರ ಹೋಬಳಿಯಲ್ಲಿ ನಾಲ್ಕು ಸಾವುಗಳು ಕೋವಿಡ್‌ನಿಂದ ಸಂಭವಿಸಿವೆ. ಕಾಲಗೆರೆ ಗ್ರಾಮವೊಂದರಲ್ಲೇ ಒಂದೇ ದಿನ 24 ಪ್ರಕರಣಗಳಿವೆ ಎಂದು ಹೇಳಲಾಗುತ್ತಿದೆ.

ಕೋಗುಂಡೆ-7, ಕೊಳಹಾಳು, ಭರಮಸಾಗರ, ಕೆ.ಜಿ. ಹಟ್ಟಿ, ಎಮ್ಮೆಹಟ್ಟಿ, ಹೆಗ್ಗೆರೆ, ಹಂಪನೂರು ಮತ್ತಿತರರ ಗ್ರಾಮಗಳಲ್ಲಿ 29 ಕೊರೊನಾ ಪ್ರಕರಣಗಳಿವೆ. ಜನರಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವ ಕುರಿತು ಜಾಗೃತಿ ಇಲ್ಲದ ಕಾರಣ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹೊರಗಿನಿಂದ ಬಂದವರಿಂದಲೇ ಸೋಂಕು: ದಾವಣಗೆರೆ ಸೇರಿದಂತೆ ಇತರೆ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನಿಂದ ಬಂದವರಿಂದಲೂ ಕೊರೊನಾ ಹಬ್ಬಿರುವ ಶಂಕೆಯಿದೆ. ಹೆಚ್ಚು ಕೇಸ್‌ಗಳಿರುವ ಹಳ್ಳಿಗಳಲ್ಲಿ ಸೀಲ್‌ಡೌನ್‌ ಮಾಡಿಕೊಳ್ಳಲು ಸಲಹೆ ನೀಡಲಾಗುತ್ತಿದೆ. ಜನರ ಓಡಾಟ ಇಲ್ಲದಂತೆ ಒಂದು ವಾರದ ಮಟ್ಟಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚಿತ್ರದುರ್ಗ ತಾಲೂಕು ವೈದ್ಯಾಧಿ ಕಾರಿ ಡಾ| ಗಿರೀಶ್‌ ತಿಳಿಸಿದ್ದಾರೆ.

ಪಾಸಿಟಿವ್‌ ಕೇಸ್‌ಗಳು ಕಂಡುಬಂದಲ್ಲಿ ಮಾತ್ರ ಅಂಥ ಕುಟುಂಬದವರಿಗೆ ಅಥವಾ ಒಂದಕ್ಕಿಂತ ಹೆಚ್ಚು ಕೇಸ್‌ಗಳಿದ್ದಲ್ಲಿ ಅಂತಹ ಹಳ್ಳಿಯಲ್ಲಿ ರ್‍ಯಾಂಡಮ್‌ ಆಗಿ ತಪಾಸಣೆ ನಡೆಸಲಾಗುತ್ತಿರುವುದನ್ನು ಬಿಟ್ಟರೆ ಮೊದಲ ಕೊರೊನಾ ಅಲೆ ವೇಳೆ ಕಂಡುಬಂದಂತಹ ಆಸ್ಪತ್ರೆಗಳ ವತಿಯಿಂದಲೇ ಸಾಮೂಹಿಕ ತಪಾಸಣೆ ನಡೆಸುವ ಕಾರ್ಯವನ್ನು ಎರಡನೇ ಅಲೆ ಶುರುವಾದಗಿನಿಂದ ಕೈಬಿಡಲಾಗಿದೆ. ಹೋಂ ಐಸೋಲೇಷನ್‌ಗೆ ಒಳಪಟ್ಟವರ ಸಮರ್ಪಕ ಮಾಹಿತಿ ಆಸ್ಪತ್ರೆಗಳ ಬಳಿ ಇಲ್ಲ.

ಸೋಂಕಿತರ ಪತ್ತೆ ಕಾರ್ಯವೂ ಆಗ್ತಿಲ್ಲ: ಎಮ್ಮೆಹಟ್ಟಿ, ಬೇವಿನಹಳ್ಳಿ, ಭರಮಸಾಗರ, ಬಹದ್ದೂರ್‌ಘಟ್ಟ, ಕಾಲಗೆರೆ, ಹಂಪನೂರು, ಬಸವನಶಿವನಕೆರೆ, ಸೇರಿದಂತೆ ಪ್ರಮುಖ ಹಳ್ಳಿಗಳಲ್ಲಿ ಕೊರೊನಾ ಸಂಬಂಧ ಸಾವುಗಳಾಗಿವೆ. ರೋಗ ಲಕ್ಷಣಗಳಿರುವ ಜನರು ಇಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗಳಲ್ಲೇ ಚಿಕಿತ್ಸೆ ಮುಂದುವರೆಸುತ್ತಿದ್ದಾರೆ. ಇವರೆಲ್ಲಾ ಸರ್ಕಾರಿ ಲೆಕ್ಕದಿಂದ ಕೈ ಬಿಟ್ಟು ಹೋಗುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದ್ದರೂ ಅವರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿಲ್ಲ. ಹೀಗಾಗಿ ಕಾಯಿಲೆ ಬಿಗಡಾಯಿಸಿದಾಗ ಜಿಲ್ಲಾಸ್ಪತ್ರೆಯತ್ತ ಮುಖ ಮಾಡುತ್ತಿದ್ದಾರೆ. ಕೊರೊನಾ ಜಾಗೃತಿ ಮೂಡಿಸುವಲ್ಲಿ ಕ್ರಿಯಾಶೀಲರಾಗಬೇಕಾದ ಗ್ರಾಪಂಗಳು ಧ್ವನಿವರ್ಧಕಗಳ ಮೂಲಕ ಕೊರೊನಾ ಜಾಗೃತಿ ಮೂಡಿಸಿ ಸ್ಯಾನಿಟೈಸ್‌ ಮಾಡಿಸಿ ಕೈತೊಳೆದುಕೊಳ್ಳುತ್ತಿವೆ. ಜನಪ್ರತಿನಿಧಿಗಳು ಕೊರೊನಾ ರೋಗಿಗಳ ನೆರವಿಗೆ ಧಾವಿಸುತ್ತಿಲ್ಲ ಎಂಬ ಆರೋಪಗಳಿವೆ.

ಭರಮಸಾಗರ ಹೋಬಳಿ ವ್ಯಾಪ್ತಿಯಗ್ರಾಮಗಳ ಜನರಿಗೆ ಜಿಲ್ಲಾಸ್ಪತ್ರೆ, ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೆ ನರಳಾಟ ನಡೆಸುತ್ತಿದ್ದಾರೆ. ಸಂಬಂಧಿಸಿದವರು ಕೂಡಲೇ ಕೊರೊನಾ ಸೋಂಕಿತರ ನೆರವಿಗೆ ಧಾವಿಸಬೇಕಾದ ಅವಶ್ಯಕತೆ ಇದೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.