ಗ್ರಾಮೀಣ ಭಾಗಕ್ಕೆ ಸೋಂಕು ವ್ಯಾಪಿಸದಂತೆ ಕ್ರಮ
Team Udayavani, May 18, 2021, 8:52 PM IST
ದಾವಣಗೆರೆ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೊರೊನಾ ವ್ಯಾಪಕವಾಗಿ ಹರಡದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮ ° ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡೆಸಿದ ವಿಡಿಯೋ ಕಾನ್ಫರೆನ್ಸ್ ಲ್ಲಿ ಅವರು ಜಿಲ್ಲೆಯ ಕೊರೊನಾ ಸ್ಥಿತಿಗತಿ ಕುರಿತು ಮಾಹಿತಿ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಸದ್ಯ ಅನೇಕ ಸವಾಲು ಎದುರಿಸುತ್ತಿದ್ದೇವೆ.
ಎಲ್ಲ ಅಧಿ ಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಪರಿಣಾಮಕಾರಿಯಾಗಿ ಸೋಂಕು ನಿಯಂತ್ರಿಸಬೇಕಿದೆ. ಸೋಂಕಿತರಿಗೆ ಸೂಕ್ತ ಚಿಕಿತ್ಸಾ ವಿಧಾನ, ಸಂಪನ್ಮೂಲಗಳ ಸದ್ಬಳಕೆಗೆ ಪೂರಕ ವ್ಯವಸ್ಥೆ ಹಾಗೂ ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಬೇಕು. ಜೊತೆಗೆ ಆಸ್ಪತ್ರೆಗಳನ್ನು ಬಲಪಡಿಸಬೇಕು. ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಬೇಕು. ಹೋಂ ಐಸೋಲೇಷನ್‌ನಲ್ಲಿ ಇರುವವರ ಮೇಲೆ ತೀವ್ರ ನಿಗಾ ವಹಿಸುವುದರ ಜೊತೆಗೆ ಸರಿಯಾಗಿ ಔಷ ಧಿ, ವೈದ್ಯಕೀಯ ನೆರವು ಒದಗಿಸಿ, ಕಾಲಕಾಲಕ್ಕೆ ಅವರ ಆರೋಗ್ಯ ಸ್ಥಿತಿಗತಿ ಪರಿಶೀಲಿಸುವ ಕಾರ್ಯ ನಡೆಯಬೇಕು.
ಯಾವುದೇ ನಿರ್ಲಕ್ಷತೆಯಿಂದ ಜೀವಹಾನಿ ಆಗಬಾರದು ಎಂದು ಸೂಚಿಸಿದರು. ವೈದ್ಯರು, ಅ ಧಿಕಾರಿಗಳು ಮಾನವೀಯತೆ ಯೊಂದಿಗೆ ಸ್ಪಂದಿಸಬೇಕು. ಗ್ರಾಮೀಣ ಮಟ್ಟದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ಅಧಿ ಕಾರಿಗಳು ತೀವ್ರ ನಿಗ ಾವಹಿಸಿ ಸೋಂಕು ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ಮುಖ್ಯಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಅನ್ನು ಪರಿಣಾಮಕಾರಿ ಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಅ ಧಿಕಾರಿ ಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈಗಾಗಲೆ ಕೇಂದ್ರ ಸರ್ಕಾರ ಸವಿವರವಾದ ಮಾರ್ಗಸೂಚಿಯಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಅಲ್ಲದೆ ಅಧಿ ಕಾರಿಗಳು, ವೈದ್ಯರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ರೆಮ್‌ಡಿಸಿವರ್ ಚುಚ್ಚುಮದ್ದು ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು.
ಪಾಸಿಟಿವಿಟಿ ಪ್ರಮಾಣ ಕಡಿಮೆ: ಜಿಲ್ಲೆಯಲ್ಲಿ ಈವರೆಗೆ ಒಟ್ಟು 5.32 ಲಕ್ಷ ಕೋವಿಡ್ ಟೆಸ್ಟ್ ಮಾಡಲಾಗಿದೆ. ನಿತ್ಯ ಸರಾಸರಿ 2 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ರಾಜ್ಯದ ಸರಾಸರಿಗೆ ಹೋಲಿಸಿದಾಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇದೆ. ಆದರೂ ಜಿಲ್ಲೆಯಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸಲಾಗುತ್ತಿದೆ. 2ನೇ ಅಲೆ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 48 ಜನರು ಮೃತಪಟ್ಟಿದ್ದಾರೆ.
ಐಎಲ್‌ಐ ಪ್ರಕರಣಗಳ ಒಟ್ಟು 78 ಸಾವು ಸಂಭವಿಸಿವೆ. ಜಿಲ್ಲೆಯಲ್ಲಿ ಸದ್ಯ 3656 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ವಿವಿಧ ಸ್ವಾಮೀಜಿಗಳು ಕೂಡ ಸಹಕಾರ ನೀಡುತ್ತಿದ್ದಾರೆ. ತರಳಬಾಳು ಜಗದ್ಗುರುಗಳು ನಗರದ ಹಾಸ್ಟೆಲ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಹಳೆ ದಾವಣಗೆರೆ ಭಾಗದಲ್ಲಿಯೂ ಕೂಡ ತಾಜ್ ಪ್ಯಾಲೇಸ್, ನರ್ಸಿಂಗ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ಸಹಕಾರ ನೀಡುತ್ತಿದ್ದಾರೆ ಎಂದರು.
ಜಿಲ್ಲೆಗೆ ಹೆಚ್ಚುವರಿಯಾಗಿ 2 ಕೆಎಲ್ ಆಕ್ಸಿಜನ್ ಹಂಚಿಕೆಯಾಗಿದೆ. ಮಹಾನಗರಪಾಲಿಕೆಯಿಂದ 60 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಸಂಸದ ಸಿದ್ದೇಶ್ವರ ಅವರು ತಮ್ಮ ಟ್ರಸ್ಟ್ ವತಿಯಿಂದ ಹರಿಹರ ಹಾಗೂ ಜಗಳೂರಿನಲ್ಲಿ ಆಕ್ಸಿಜನ್ ಘಟಕ ಹಾಗೂ ಚನ್ನಗಿರಿ ಶಾಸಕರು ಕೆಎಸ್‌ಎಸ್‌ಡಿಎಲ್ ವತಿಯಿಂದ ಚನ್ನಗಿರಿಯಲ್ಲಿ ಆಕ್ಸಿಜನ್ ಘಟಕ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಜಿಪಂ ಸಿಇಒ ಡಾ| ವಿಜಯಮಹಾಂತೇಶ್ ದಾನಮ್ಮನವರ್, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.