ಸರಕಾರದ ಯೋಜನೆ ರೈತರಿಗೆ ತಲುಪಿಸಿ: ಪೂರ್ಣಿಮಾ
ತೋಟಗಾರಿಕೆ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿದರು.
Team Udayavani, Jan 26, 2021, 3:25 PM IST
ಹಿರಿಯೂರು: ನಗರದ ಟಿಬಿ ವೃತ್ತದಲ್ಲಿ 36 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ತೋಟಗಾರಿಕೆ ಇಲಾಖೆ ಕಚೇರಿಯನ್ನು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾದಂತಹ ಸಂಕಷ್ಟದ ಸ್ಥಿತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ರೈತರ ಯೋಜನೆಗಳಿಗೆ ತೊಂದರೆಯಾಗದಂತೆ ತೋಟಗಾರಿಕೆ ಇಲಾಖೆಗೆ ಕಾಲಕಾಲಕ್ಕೆ ಹಣ ಬಿಡುಗಡೆ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡಿದ್ದಾರೆ. ಅಧಿ ಕಾರಿಗಳು ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ, ರೈತರಿಗೆ ತಲುಪಿಸುವತ್ತ ಕೆಲಸ ಮಾಡಬೇಕು. ತೋಟಗಾರಿಕೆ ಇಲಾಖೆಯ ಅ ಧಿಕಾರಿಗಳ ಬಗ್ಗೆ ರೈತರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ರೈತರ ಬಳಿ ಹೋಗಬೇಕು. ಬೆಳೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು. ಅವರ ಅರ್ಜಿಗಳನ್ನು ತಾತ್ಸಾರ ಮಾಡದೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಜವಾಬ್ದಾರಿಯುತವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಜಿಪಂ ಸದಸ್ಯರಾದ ಆರ್ ನಾಗೇಂದ್ರನಾಯ್ಕ ಮಾತನಾಡಿ, ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳು ನೀರಿಲ್ಲದೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರದಿಂದ ಬೆಳೆ ಪರಿಹಾರ ಹಣ ರೈತರಿಗೆ ತಲುಪಿರುವುದಿಲ್ಲ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ರೈತರಿಗೆ ಬೆಳೆ ಪರಿಹಾರದ ಹಣ ಕೊಡಿಸಿಕೊಡುವಂತೆ ಸೂಚಿಸಿದರು. ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ, ನಗರಸಭೆಯ ಉಪಾಧ್ಯಕ್ಷ ಬಿ.ಎನ್. ಪ್ರಕಾಶ್, ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.