ಕೊರೊನಾ ಕಟ್ಟಿ ಹಾಕಲು ಶಾಸಕದ್ವಯರ ಶ್ರಮ

Team Udayavani, May 25, 2021, 8:36 PM IST

25-11

„ರಾ. ರವಿಬಾಬು

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುರುವುದನ್ನು ತಡೆಗಟ್ಟುವ, ಸೋಂಕಿತರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮತ್ತು ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಇಬ್ಬರೂ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಣೆ ಮಾಡುತ್ತ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ.

ಲಸಿಕಾ ಶಿಬಿರ ಆಯೋಜನೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಕೊರೊನಾ ಲಸಿಕೆ ಪ್ರಕ್ರಿಯೆ ಪ್ರಾರಂಭವಾದ ನಂತರ ವಾರ್ಡ್‌ವಾರು ಲಸಿಕಾಕರಣ ಶಿಬಿರ ಆಯೋಜಿಸುವ ಜೊತೆಗೆ ಅನೇಕ ಲಸಿಕಾ ಶಿಬಿರಗಳಿಗೆ ತೆರಳಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸುಸೂತ್ರವಾಗಿ ಲಸಿಕೆ ದೊರೆಯುವ ವ್ಯವಸ್ಥೆ ಮಾಡುವ ಮೂಲಕ ಹಿರಿಯ ನಾಗರಿಕರು, ಮುಂಚೂಣಿ ಕಾರ್ಯಕರ್ತರಿಗೆ ನೆರವಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣ ದಲ್ಲಿ ನಡೆದ ಪ್ರತಿ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಜೊತೆಗೆ ಕೆಲವಾರು ಅತ್ಯಮೂಲ್ಯ ಸಲಹೆ, ಸೂಚನೆ ನೀಡಿದ್ದಾರೆ.

ಕೋವಿಡ್‌ ಅಬ್ಬರದ ನಡುವೆ ರೈತರು ಅದರಲ್ಲೂ ವಿಶೇಷವಾಗಿ ಭತ್ತ ಬೆಳೆಗಾರರಿಗೆ ಖರೀದಿ ಕೇಂದ್ರದಲ್ಲಿ ನೋಂದಣಿಗೆ ಕಾಲಾವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆಯುವ ಮೂಲಕ ರೈತರ ನೆರವಿಗೆ ಧಾವಿಸಿದ್ದಾರೆ.

ಪ್ರತಿ ನಿತ್ಯ ಕೋವಿಡ್‌ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆಯುವ ಜೊತೆಗೆ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡುವಂತೆ ತಾಕೀತು ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ದಾವಣಗೆರೆ ಹೊರ ವಲಯದಲ್ಲಿ ಸಿರಿಗೆರೆಯ ತರಳಬಾಳು ಜಗದ್ಗುರುಗಳು ಪ್ರಾರಂಭಿಸಿರುವ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿನ ಆಗು-ಹೋಗುಗಳ ಬಗ್ಗೆ ಸದಾ ಗಮನ ಹರಿಸುವ ಮೂಲಕ ಸೋಂಕಿತರಿಗೆ ಅಗತ್ಯ ನೆರವು ಒದಗಿಸುತ್ತಿದ್ದಾರೆ.

ಲಸಿಕೆಗೆ 9 ಕೋಟಿ ರೂ. ನೀಡುವ ವಾಗ್ಧಾನ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಯೋಮಿತಿಯ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆ, ಆಸ್ಪತ್ರೆ, ಕೇರ್‌ ಸೆಂಟರ್‌ಗಳ ಭೇಟಿ ಸಂದರ್ಭದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿಲ್ಲವಾದರೂ ತಮ್ಮ ಗೃಹ ಕಚೇರಿಯಲ್ಲಿ ನಿಗದಿತ ಅವಧಿಯಲ್ಲಿ ಸಭೆ ನಡೆಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ.

ಎರಡು ಆಸ್ಪತ್ರೆ, ವೈದ್ಯಕೀಯ ಕಾಲೇಜು, ನರ್ಸಿಂಗ್‌ ಕಾಲೇಜುಗಳ ಆಡಳಿತ ಅನುಭವ ಹೊಂದಿರುವ ಅವರು ಆರೋಗ್ಯ ಕ್ಷೇತ್ರ ಒಳಗೊಂಡಂತೆ ಎಲ್ಲ ಅಧಿಕಾರಿಗಳ ವರ್ಗಕ್ಕೆ ಸಕಾಲಿಕ ಸಲಹೆ, ಸೂಚನೆ ನೀಡುತ್ತಿದ್ದಾರೆ. ಸಲಹೆ, ಸೂಚನೆಗಳ ಪಾಲನೆಯತ್ತ ಗಮನ ನೀಡುತ್ತಿದ್ದಾರೆ.

ನಿಗದಿತ ಸಮಯದಲ್ಲಿ ತಮ್ಮ ಒಡೆತನದ ಬಾಪೂಜಿ ಮತ್ತು ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯ ವೈದ್ಯರ ಸಭೆಗಳನ್ನು ನಡೆಸುವ ಮೂಲಕ ಕೊರೊನಾ ಸೋಂಕಿತರಿಗೆ ಉತ್ಕೃಷ್ಟ ಗುಣಮಟ್ಟದ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ 2 ಲಕ್ಷ ಡೋಸ್‌ ಕೊರೊನಾ ಲಸಿಕೆಗೆ ತಗುಲುವ 18 ಕೋಟಿ ರೂ. ವೆಚ್ಚದ ಅರ್ಧ ಭಾಗ 9 ಕೋಟಿ ರೂ. ನೀಡುವ ವಾಗ್ಧಾನ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ ಸೋಂಕಿತರು ದಾಖಲು, ಅಗತ್ಯ ಸೌಲಭ್ಯ ಒದಗಿಸುವ ಜವಾಬ್ದಾರಿಯನ್ನು ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರಿಗೆ ವಹಿಸಿದ್ದರೂ ಸದಾ ನಿಗಾವಹಿಸುವ ಕೆಲಸ ಮಾಡುತ್ತಿದ್ದಾರೆ.

ನಗರದ ಕೆ.ಆರ್‌. ರಸ್ತೆಯಲ್ಲಿರುವ ತಮ್ಮ ಒಡೆತನದ ಆಸ್ಪತ್ರೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಪ್ರಾರಂಭಕ್ಕೆ ಜಿಲ್ಲಾಡಳಿತದ ಜೊತೆ ಚರ್ಚಿಸಿದ್ದಾರೆ. ಸರ್ಕಾರ ಖಾಸಗಿಯಾಗಿ ಲಸಿಕೆ ಖರೀದಿಗೆ ಅನುಮತಿ ನೀಡಿದಲ್ಲಿ ಲಸಿಕೆ ಖರೀದಿಗೂ ಸಜ್ಜಾಗಿದ್ದಾರೆ.

ಈಗಾಗಲೇ 2-3 ಕಂಪನಿಗಳ ಜೊತೆ ಚರ್ಚೆಯೂ ನಡೆದಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದ ಇಬ್ಬರು ಶಾಸಕರು ಕೊರೊನಾ ನಿಯಂತ್ರಿಸುವ ಮತ್ತು ಸೋಂಕಿತರಿಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಕಾರ್ಯತತ್ಪತರಾಗಿದ್ದಾರೆ

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.