ಲಾಕ್‌ಡೌನ್‌ನಲ್ಲೂ ನಿತ್ಯ ಶುದ್ಧ ಜೀವಜಲ ವಿತರಣೆ
Team Udayavani, May 26, 2021, 9:34 PM IST
ವಿಶೇಷ ವರದಿ
ದಾವಣಗೆರೆ: ಕೊರೊನಾ ಕರ್ಫ್ಯೂ, ಲಾಕ್‌ಡೌನ್ ಕಾಲದಲ್ಲಿಯೂ ನಿತ್ಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮೂಲಕ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೌಕರರು, ಸಿಬ್ಬಂದಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಳೆದ ವರ್ಷ ವಿಧಿಸಿದ್ದ ಲಾಕ್‌ಡೌನ್ ವೇಳೆಯೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 40ಪ್ರೇರಕರು, ಮೂವರು ಮೇಲ್ವಿಚಾರಕರು ಸೇರಿ ಒಟ್ಟು 43 ನೌಕರರು ಹಾಗೂ ಘಟಕದ ಸಿಬ್ಬಂದಿ ಕೊರೊನಾ ಬಾಧಿತರು ಇರುವ ಮನೆ, ಸೀಲ್‌ಡೌನ್ ಪ್ರದೇಶ, ಕಂಟೈನ್ ಮೆಂಟ್ ಪ್ರದೇಶ ಸೇರಿದಂತೆ ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ತಲುಪಿಸುವ ಮೂಲಕ ಜನಮೆಚ್ಚುಗೆ ಗಳಿಸಿದ್ದರು.
ಈ ಬಾರಿಯ ಲಾಕ್ ಡೌನ್‌ನಲ್ಲಿಯೂ ಸಂಸ್ಥೆಯವರು ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯದಂಥ ಸುರಕ್ಷತಾ ಕ್ರಮಗಳೊಂದಿಗೆ ದಿನವೂ ಜನರಿಗೆ ಕುಡಿಯಲು ಶುದ್ಧ ನೀರು ಒದಗಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಶುದ್ಧ ನೀರಿನ ಮಹತ್ವ ತಿಳಿಸುತ್ತಿರುವ ಸಂಸ್ಥೆಯವರು, ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಶುದ್ಧ ನೀರು ಕುಡಿಯಲು ಜನರನ್ನು ಪ್ರೇರೇಪಿಸುತ್ತಿದ್ದಾರೆ.
ಜತೆಗೆ ಯೋಜನೆಯಿಂದ ಜಿಲ್ಲೆಯಲ್ಲಿ ನಿರ್ವಹಿಸುತ್ತಿರುವ 40ಶುದ್ಧ ನೀರಿನ ಘಟಕಗಳ ಮೂಲಕ ಅಂದಾಜು 50 ಸಾವಿರಕ್ಕೂ ಅಧಿಕ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ. ತನ್ಮೂಲಕ ಜನರ ಆರೋಗ್ಯ ಕಾಪಾಡುವಲ್ಲಿ ಕೈಜೋಡಿಸಿದ್ದಾರೆ.
ನಿರಂತರ ನೀರು: ಕೊರೊನಾ ವೈರಸ್ ದಾಳಿಯಿಂದಾಗಿ ಜನರಲ್ಲಿ ಶುದ್ಧ ನೀರಿನ ಅರಿವು ಹೆಚ್ಚಾಗಿದ್ದು, ಶುದ್ಧ ನೀರು ಬಳಸುವವರ ಸಂಖ್ಯೆ ದುಪ್ಪಟ್ಟಾಗಿದೆ. ಹೀಗಾಗಿ ಶುದ್ಧ ನೀರಿನ ಘಟಕಗಳಲ್ಲಿ ಸಾಮಾಜಿಕ ಅಂತರದ ಗುರುತು ಹಾಕಿ ಮಾಸ್ಕ್ ಕಡ್ಡಾಯಗೊಳಿಸಿ ಜನರಿಗೆ ನಿರಂತರವಾಗಿ ಒಂದು ದಿನವೂ ತೊಡಕಾಗದಂತೆ ನೀರೊದಗಿಸುವ ಹೊಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವುದು ವಿಶೇಷ.
ಒಟ್ಟಾರೆ ಆರೋಗ್ಯ ಸುರಕ್ಷತಾ ಕ್ರಮಗಳಲ್ಲಿ ಶುದ್ಧ ಕುಡಿಯುವ ನೀರಿನ ಬಳಕೆ ಸಹ ಪ್ರಮುಖವಾದುದು ಎಂಬ ಜಾಗೃತಿ ಜನರಲೀಗ ಮೂಡಿದೆ. ಇದಕ್ಕೆ ಪ್ರೇರಕಶಕ್ತಿಯಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.