ಕೋವಿಡ್‌ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಒತ್ತಾಯ


Team Udayavani, May 28, 2021, 8:45 PM IST

28-13

ಹರಿಹರ: ಕೋವಿಡ್‌-19 ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರಿಗೆ ಆದ್ಯತೆ ಮೇರೆಗೆ ಕೋವಿಡ್‌ ಲಸಿಕೆ ಹಾಕಬೇಕು ಹಾಗೂ ಸೂಕ್ತ ಸಲಕರಣೆಗಳನ್ನು ವಿತರಣೆ ಮಾಡಬೇಕೆಂದು ಆಗ್ರಹಿಸಿ ಬುಧವಾರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ನಂತರ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಹೆಗಡೆ, ಸರಕಾರ, ಜಿಲ್ಲಾಡಳಿತ, ತಾಲೂಕು ಆಡಳಿತದ ಸೂಚನೆಯಂತೆ ಶಾಲಾ ಶಿಕ್ಷಕರು ವಿವಿಧ ಹಂತದಲ್ಲಿ ಕೋವಿಡ್‌-19 ನಿಯಂತ್ರಣದ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಸರಕಾರಿ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌, ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ, ಚೆಕ್‌ಪೋಸ್ಟ, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿರುವ ಮತಗಟ್ಟೆ ಅಧಿ ಕಾರಿಯಾಗಿರುವ ಶಿಕ್ಷಕರು ಡಾಟಾ ಎಂಟ್ರಿ, ವಾರ್‌ ರೂಂ, ತನಿಖಾಧಿ ಕಾರಿ, ಯೋಗ ತರಬೇತಿ, ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಶಿಕ್ಷಕರು ಭಾಗಿಯಾಗುತ್ತಿದ್ದಾರೆ. ಹೀಗೆ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಹಲವಾರು ಶಿಕ್ಷಕರು ಕೋವಿಡ್‌ ಸೋಂಕಿತರಾಗಿದ್ದಾರೆ. ಹೀಗಾಗಿ ಎಲ್ಲಾ ಶಿಕ್ಷಕರನ್ನು ಫ್ರಂಟ್‌ಲನ್‌ ವಾರಿಯರ್ ಎಂದು ಘೋಷಿಸಿದ್ದಾರೆ.

ಆದರೆ ಅವರಿಗೆ ಕೋವಿಡ್‌ ಲಸಿಕೆ ಹಾಕಿಸುವಲ್ಲಿ ಆದ್ಯತೆ ನೀಡುತ್ತಿಲ್ಲ. ಜಿಲ್ಲಾ ಹಾಗೂ ತಾಲೂಕು ಆಡಳಿತ ಮೊದಲ ಆದ್ಯತೆ ಮೇರೆಗೆ ಶಿಕ್ಷಕರಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಕೋವಿಡ್‌-19 ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಶಿಕ್ಷಕರಿಗೆ ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್‌, ಫೇಸ್‌ ಶೀಲ್ಡ್‌ ಇತರೆ ಅಗತ್ಯ ಸಾಧನ, ಸಲಕರಣೆಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌, ಈ ಕುರಿತು ಜಿಲ್ಲಾ ಧಿಕಾರಿಯವರೊಂದಿಗೆ ಚರ್ಚಿಸುತ್ತೇನೆ ಎಂದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಚನ್ನಬಸಪ್ಪ, ತಾಲೂಕು ಖಜಾಂಚಿ ರುದ್ರಪ್ಪ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಶಿವಮೂರ್ತಿ, ಮಂಜಪ್ಪ ಬಿದರಿ, ಸಿಆರ್‌ಪಿ ಕೆ.ಎನ್‌. ಬಸವರಾಜಯ್ಯ ಇತರರು ಇದ್ದರು.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Davanagere: Special tax operation: 1.65 crore tax collection in a single day

Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ

Siddaramaiah will resigns before Assembly session: R. Ashok

Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.