ಉತ್ತಮ ನಾಯಕನಿಂದ ಸುಭದ್ರ ಆಡಳಿತ

ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ

Team Udayavani, Jan 26, 2021, 3:41 PM IST

26-13

ದಾವಣಗೆರೆ: ನಾವು ಬದಲಾಗದೇ ಎದುರಿಗಿರುವವರು ಬದಲಾಗಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅಂತೆಯೇ ನಾವು ಉತ್ತಮ ನಾಯಕನನ್ನು ಆರಿಸದೇ ಉತ್ತಮ ಆಡಳಿತ ನಿರೀಕ್ಷಿಸಲು ಆಗದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಮಹಾನಗರಪಾಲಿಕೆ ವತಿಯಿಂದ ಸೋಮವಾರ ಮಹಾನಗರಪಾಲಿಕೆ ವರಣದಲ್ಲಿ ಏರ್ಪಡಿಸಲಾಗಿದ್ದ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾನ ಮಾಡದೆ ಅಧಿಕಾರಯುತವಾಗಿ ಸೌಲಭ್ಯಗಳನ್ನು ಕೇಳಲು ಅಥವಾ ವ್ಯವಸ್ಥೆಯನ್ನು ಪ್ರಶ್ನಿಸಲು ಆಗದು. ಮತದಾನದಲ್ಲಿ ಪಾಲ್ಗೊಂಡಿದ್ದರೆ ನಾವು ಆರಿಸಿದ ನಾಯಕರಿಂದ ಅಗತ್ಯ ಸವಲತ್ತುಗಳನ್ನು ಕೇಳಬಹುದು. ಆದ್ದರಿಂದ ಎಲ್ಲ ಅರ್ಹ ಮತದಾರರು, ವಿಶೇಷವಾಗಿ ಯುವ ಮತದಾರರು ಮತದಾನವೆಂಬ ಹಬ್ಬದಲ್ಲಿ ನಿರ್ಭೀತವಾಗಿ, ಯಾವುದೇ ಆಮಿಷಕ್ಕೆ ಬಲಿಯಾಗದೇ ತಮ್ಮ ಹಕ್ಕು ಚಲಾಯಿಸಬೇಕು ಎಂದರು.

ತಿದ್ದುಪಡಿ, ರದ್ದತಿಗೂ ಪ್ರಾಮುಖ್ಯತೆ ನೀಡಿ: ಕೇವಲ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದಷ್ಟೇ ಮುಖ್ಯವಾಗುವುದಿಲ್ಲ. ಬದಲಾಗಿ ವರ್ಗಾಣೆ, ಮರಣ ಇತರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿದ್ದುಪಡಿ, ರದ್ದು  ಪಡಿಸುವುದು ಕೂಡ ಅಷ್ಟೇ ಮುಖ್ಯವಾಗುತ್ತದೆ.
ಒಂದು ಆರೋಗ್ಯಕರ ಚುನಾವಣೆಗೆ ಬುನಾದ ಆರೋಗ್ಯಯುತವಾದ ಮತದಾರರ ಪಟ್ಟಿ. ಆದ ಕಾರಣ ಮತದಾರರು ಮತದಾನ ಪಟ್ಟಿಗೆ ಸೇರ್ಪಡೆಗೆ ನೀಡುವಷ್ಟೇ ಪ್ರಾಮುಖ್ಯತೆ ಇತರೆ ತಿದ್ದುಪಡಿಗಳಿಗೂ ಮಾನ್ಯತೆ ನೀಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಾ ಬಸವಂತಪ್ಪ ಮಾತನಾಡಿ, ಇತ್ತೀಚೆಗೆ ಸುಶಿಕ್ಷಿತರ ಮತದಾನ ಪ್ರಮಾಣ ಕಡಿಮೆ ಆಗುತ್ತಿದ್ದು, ಮತದಾನದ ದಿನವನ್ನು ರಜಾ ದಿನವೆಂದು ಪರಿಗಣಿಸುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಅಲ್ಲ ಎಂದರು. ಪ್ರಭಾರ ಜಿಲ್ಲಾ ಪೊಲೀಸ್‌ ಅಧೀಕ್ಷಕ ರಾಜೀವ್‌ ಎಂ. ಮಾತನಾಡಿ, ಪ್ರಜ್ಞಾವಂತ ಮತದಾರನು ನಿಷ್ಠಾವಂತ ಪ್ರತಿನಿಧಿಯನ್ನು ಆಯ್ಕೆ ಮಾಡಿ ಸುಭದ್ರ ರಾಜ್ಯ, ರಾಷ್ಟ್ರ ನಿರ್ಮಾಣದಲ್ಲಿ ಪಾತ್ರ
ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಹೊಸ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧಾ ವಿಜೇತರಾದವರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಯಿತು.

ಉಪವಿಭಾಗಾಧಿಕಾರಿ ಮಮತ ಹೊಸಗೌಡರ್‌, ಸಾರ್ವನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರಪ್ಪ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜಪ್ಪ ವೇದಿಕೆಯಲ್ಲಿದ್ದರು. ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸ್ವಾಗತಿಸಿದರು.

ಓದಿ : ಜೇವರ್ಗಿಯಲ್ಲಿ ಜೆಡಿಎಸ್‌ ಬೃಹತ್‌ ಪ್ರತಿಭಟನೆ

ಟಾಪ್ ನ್ಯೂಸ್

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.