ಕೋವಿಡ್ ನಿಯಂತ್ರಣಕ್ಕೆಕ್ರಮ ಕೈಗೊಳ್ಳಿ
Team Udayavani, Jun 2, 2021, 9:18 PM IST
ದಾವಣಗೆರೆ: ತಾಲೂಕಿನ ಕಾರಿಗನೂರು ಕ್ರಾಸ್(ಆಂಜನೇಯ ನಗರ)ನಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಸುವರ್ಣ ಕರ್ನಾಟಕ ವೇದಿಕೆಯಿಂದ ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕುಕ್ಕುವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರಿಗನೂರು ಕ್ರಾಸ್(ಆಂಜನೇಯ ನಗರ)ನಲ್ಲಿ ಕಳೆದ ವಾರದಿಂದ 6 ಕೊರೊನಾ ಪಾಸಿಟಿವ್ ಕೇಸ್ ವರದಿಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಆದರೂ ಗ್ರಾಮ ಪಂಚಾಯತಿ ಸ್ಯಾನಿಟೈಸೇಷನ್ ಸೇರಿದಂತೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳ ಗಮನಕ್ಕೆ ತಂದರೂ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಆರ್. ಸಂತೋಷ್‌ಕುಮಾರ್ ಆರೋಪಿಸಿದರು.
ಸರ್ಕಾರದ ಹೊಸ ನಿಯಮಾವಳಿಯಂತೆ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು. ಆದರೂ, ಸೋಂಕಿತರನ್ನು ಕೇರ್ ಸೆಂಟರ್‌ಗೆ ದಾಖಲಿಸುವ ಕೆಲಸವಾಗಿಲ್ಲ. ಸೋಂಕಿತರ ಕುಟುಂಬದವರು ಯಾರೂ ಹೊರಗೆ ಬರದಂತೆ ಹೇಳುತ್ತಿರುವುದರಿಂದ ದೈನಂದಿನ ಅವಶ್ಯಕತೆಗಳಿಗಾಗಿ ಸೋಂಕಿತರ ಕುಟುಂಬದವರು ಪರದಾಡುವಂತಾಗಿದೆ. ಸ್ಥಳೀಯರು ಭಯದಲ್ಲೇ ಬದುಕುವಂತಾಗಿದೆ. ಕೋವಿಡ್ -19 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.