ಕೋವಿಡ್‌ನಿಂದ ಕ್ಷಯರೋಗಿಗಳು ಬಚಾವ್
Team Udayavani, Jun 2, 2021, 10:09 PM IST
ಎಚ್.ಕೆ. ನಟರಾಜ
ದಾವಣಗೆರೆ: ಶ್ವಾಸಕೋಶದ ಮೇಲೆ ದಾಳಿ ಇಡಬಹುದಾದ ಕ್ಷಯರೋಗ ಹಾಗೂ ಕೋವಿಡ್-19 ಎರಡನೇ ಅಲೆ ಹೊಡೆತಕ್ಕೆ ಸಿಲುಕಿದ ಜಿಲ್ಲೆಯ ಆರು ಜನರು ಎರಡೂ ಮಹಾಮಾರಿಗಳ ವಿರುದ್ಧ ಹೋರಾಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊರೊನಾ ಎರಡನೇ ಅಲೆಯ ಸೋಂಕು ಜಿಲ್ಲೆಯ ಒಟ್ಟು ಎಂಟು ಜನ ಕ್ಷಯರೋಗಿಗಳಿಗೆ ಹಬ್ಬಿತ್ತು. ಇವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಳಿದಂತೆ ಇದೇ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾಗದಿದ್ದರೂ 46 ಜನರು ಕ್ಷಯರೋಗಿಗಳು ಕ್ಷಯದ ತೀವ್ರತೆ ಹೆಚ್ಚಾಗಿ ಮೃತಪಟ್ಟಿದ್ದಾರೆ. ಕ್ಷಯರೋಗದ ಪ್ರಾಥಮಿಕ ಲಕ್ಷಣಗಳು ಲಕ್ಷಣಗಳನ್ನೇ ಹೋಲುವ ಲಕ್ಷಣಗಳೊಂದಿಗೆ ಬಂದೆರಗಿದ ಕೋವಿಡ್-19 ಎರಡನೇ ಅಲೆಯ ಸೋಂಕು ಕ್ಷಯರೋಗಿಗಳಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಮೊದಲ ಅಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿದ್ದ ಕ್ಷಯರೋಗಿಗಳು, ಎರಡನೇ ಅಲೆಯ ಈ ಸಂದರ್ಭದಲ್ಲಿಯೂ ಹೆಚ್ಚಿನ ಸುರಕ್ಷತೆಗೆ ಮುಂದಾಗಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ .
ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಒಟ್ಟು 696 ಕ್ಷಯರೋಗಿಗಳು ಪತ್ತೆಯಾಗಿದ್ದಾರೆ. 640 ಕ್ಷಯರೋಗಿಗಳು ಈವರೆಗೆ ಕೋವಿಡ್-19 ವೈರಸ್ ತಮ್ಮತ್ತ ಸುಳಿಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸಿ ತಮ್ಮ “ಶ್ವಾಸ’ ಕಾಪಾಡಿಕೊಂಡಿದ್ದಾರೆ.
ಕೊರೊನಾ ಗೆದ್ದ ಕ್ಷಯರೋಗಿಗಳು: ಜಿಲ್ಲೆಯ ದಾವಣಗೆರೆ ಗ್ರಾಮಾಂತರದ ಒಬ್ಬರು, ದಾವಣಗೆರೆ ನಗರದ ಮೂವರು, ಹರಿಹರ ಹಾಗೂ ಹೊನ್ನಾಳಿ ತಾಲೂಕಿನ ತಲಾ ಇಬ್ಬರು ಸೇರಿದಂತೆ ಒಟ್ಟು ಎಂಟು ಕ್ಷಯರೋಗಿಗಳು ಈವರೆಗೆ ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿದ್ದಾರೆ.
ಇವರಲ್ಲಿ ದಾವಣಗೆರೆ ಗ್ರಾಮಾಂತರದ ಒಬ್ಬರು, ದಾವಣಗೆರೆ ನಗರದ ಇಬ್ಬರು, ಹರಿಹರ ತಾಲೂಕಿನ ಒಬ್ಬರು ಹಾಗೂ ಹೊನ್ನಾಳಿ ತಾಲೂಕಿನ ಇಬ್ಬರು ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಜೀವ ಕಾಪಾಡಿಕೊಂಡಿದ್ದಾರೆ. ದಾವಣಗೆರೆ ಗ್ರಾಮಾಂತರ ಹಾಗೂ ಹರಿಹರದ ತಲಾ ಒಬ್ಬರು ಸೇರಿ ಒಟ್ಟು ಇಬ್ಬರು ಕ್ಷಯ ರೋಗಿಗಳು ಕೊರೊನಾ ಮಹಾಮಾರಿ ಎದುರಿಸಲಾಗದೆ ಮೃತಪಟ್ಟಿದ್ದಾರೆ.
ಚನ್ನಗಿರಿ ತಾಲೂಕಿನ 101, ದಾವಣಗೆರೆ ಗ್ರಾಮೀಣ ಭಾಗದ 81, ದಾವಣಗೆರೆ ನಗರ ಭಾಗದ 249, ಹರಿಹರ ತಾಲೂಕಿನ 62, ಹೊನ್ನಾಳಿ ತಾಲೂಕಿನ 80, ಜಗಳೂರು ತಾಲೂಕಿನ 67 ಕ್ಷಯರೋಗಿಗಳು ಕೊರೊನಾ ತಮ್ಮತ್ತ ಸುಳಿಯದಂತೆ ಅಗತ್ಯ ಸುರಕ್ಷತಾ ಕ್ರಮ ಪಾಲನೆಯೊಂದಿಗೆ ಕೊರೊನಾ ಸೋಂಕಿನಿಂದ ದೂರ ಇದ್ದಾರೆ. ಕೊರೊನಾ ಎರಡನೇ ಅಲೆಯ ಆರ್ಭಟ ಇಳಿಯುವವರೆಗೂ ಈ ಕ್ಷಯರೋಗಿಗಳು ಸುರಕ್ಷತೆ, ಜಾಗರೂಕತೆಯನ್ನು ಮರೆಯದೆ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿದೆ.
ಒಟ್ಟಾರೆ ಜಿಲ್ಲೆಯಲ್ಲಿರುವ ಬಹುತೇಕ ಕ್ಷಯರೋಗಿಗಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೊನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡಿರುವುದು ಸಮಾಧಾನಕರ ಸಂಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.