ಕಾಯಕದಲೇ ದೇವರ ಕಾಣುತ್ತಿರುವೆ: ರೇಣುಕಾಚಾರ್ಯ
Team Udayavani, Jun 4, 2021, 10:26 PM IST
ಹೊನ್ನಾಳಿ: ಕೊರೊನಾ ಮಹಾಮಾರಿಯಿಂದ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಜನತೆಯನ್ನು ಕಾಪಾಡುವುದೇ ನನ್ನ ಗುರಿ. ಕಾಯಕದಲ್ಲಿ ನಾನು ದೇವರನ್ನು ಕಾಣುತ್ತಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ಗುರುವಾರ ಪಟ್ಟಣದ ಅಂಬೇಡ್ಕರ್ ಭವನದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕಾ ಕಾರ್ಯಕ್ರಮದ ಮಾಹಿತಿ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನನ್ನ ಕರ್ತವ್ಯದ ಬಗ್ಗೆ ವಿಪಕ್ಷದವರು ಹಾಗೂ ಕೆಲವರು ಅನವಶ್ಯಕವಾಗಿ ಟೀಕಿಸುವುದು, ವ್ಯಂಗ್ಯವಾಡುವುದು ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಸೊಪ್ಪು ಹಾಕುವುದಿಲ್ಲ ಅವಳಿ ತಾಲೂಕಿನ ಜನತೆ ಹಾಗೂ ರಾಜ್ಯಾದ್ಯಂತ ನನ್ನ ಕೆಲಸ ಕಾರ್ಯಗಳ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.
ನಾನು ಸದಾ ಜನರ ಮಧ್ಯ ಇದ್ದು ಕೆಲಸ ಮಾಡುವಂತಹ ವ್ಯಕ್ತಿ. ಹಾಗಾಗಿ ಟೀಕೆ, ಟಿಪ್ಪಣಿಗಳ ಬಗ್ಗೆ ಉತ್ತರ ನೀಡುವುದಿಲ್ಲ. ಉತ್ತಮವಾಗಿ ಕೆಲಸ ಮಾಡುವವರು ಇದ್ದಾಗ ಅಪಪ್ರಚಾರ ಮಾಡುವವರು ಇರುವುದು ಸಹಜ. ಆದ್ದರಿಂದ ಅಪಪ್ರಚಾರಕ್ಕೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತಾಲೂಕಿನ ಅರಬಟ್ಟೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪನೆಯಾಗಿರುವ 800 ಬೆಡ್‌ಗಳ ಕೋವಿಡ್ ಕೇಂದ್ರ ರಾಜ್ಯದಲ್ಲಿಯೇ ಅತ್ಯಂತ ದೊಡ್ಡದಾದ ಕೋವಿಡ್ ಕೇಂದ್ರವಾಗಿದೆ. ಹೊನ್ನಾಳಿ ತಾಲೂಕಿನ ಪೂರ್ವ ಭಾಗದ ಸಿಂಗಟಗೆರೆ ಗ್ರಾಮದ ಬಳಿ ಮತ್ತೂಂದು ಕೋವಿಡ್ ಕೇಂದ್ರ ತೆರೆಯಲಾಗುವುದು ಎಂದು ರೇಣುಕಾಚಾರ್ಯ ತಿಳಿಸಿದರು. ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದಾಗ ಅನೇಕರು ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದರು.
ಹಾಗಾಗಿ ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕಿದರು. ತತ್ಪರಿಣಾಮ ಅಂದು ಬೇಡಿಕೆ ಕಡಿಮೆಯಾಯಿತು. ಎರಡನೇ ಅಲೆ ಜೋರಾದ ಪರಿಣಾಮ ಹಾಗೂ ಸಾವು ನೋವುಗಳು ಹೆಚ್ಚಾಗಿದ್ದರಿಂದ ಜನರು ದಿಢೀರನೇ ಲಸಿಕಾ ಕೇಂದ್ರಕ್ಕೆ ಬರುತ್ತಿರುವುದರಿಂದ ಲಸಿಕೆಗೆ ಬೇಡಿಕೆ ಹೆಚ್ಚಾಯಿತು ಎಂದು ಹೇಳಿದರು.
ಪುರಭಾಧ್ಯಕ್ಷ ಶ್ರೀಧರ್, ತಹಶೀಲ್ದಾರ್ ಬಸನಗೌಡ ಕೋಟೂರು, ಕೆಎಸ್‌ಡಿಎಲ್ ನಿರ್ದೇಶಕ ಶಿವು ಹುಡೇದ್, ಪುರಸಭೆ ಸದಸ್ಯರಾದ ಬಾಬು ಒಬಳದಾರ್, ರಂಗಪ್ಪ, ಧರ್ಮಪ್ಪ, ಮಹೇಶ್ ಹುಡೇದ್, ಪಿಎಸ್‌ಐ ಬಸವರಾಜ್ ಆರ್. ಬಿರಾದಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.