ಬಿತ್ತನೆ ಬೀಜ-ರಸಗೊಬ್ಬರ ಪೂರೈಕೆಗೆ ಸರ್ಕಾರ ಬದ್ಧ
Team Udayavani, Jun 9, 2021, 9:29 PM IST
ದಾವಣಗೆರೆ: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ರೈತರಿಗೆ ಯಾವುದೇ ರೀತಿ ಕೊರತೆಯಾಗದಂತೆ ಬೀಜ ಹಾಗೂ ಗೊಬ್ಬರ ಪೂರೈಕೆಗೆ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ 1.63 ಲಕ್ಷ ಕ್ವಿಂಟಲ್‌ನಷ್ಟು ವಿವಿಧ ಬೆಳೆಗಳ ಬಿತ್ತನೆ ಬೀಜದ ದಾಸ್ತಾನಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬೀಜ ಹಾಗೂ ಗೊಬ್ಬರ ಲಭ್ಯ ಇದೆ.
ಈಗಾಗಲೇ ರಾಜ್ಯದಲ್ಲಿ 87,629 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, 1.63 ಲಕ್ಷ ಕ್ವಿಂಟಲ್ ಬೀಜ ದಾಸ್ತಾನಿದೆ ಎಂದರು. ಸರ್ಕಾರದಿಂದ 14 ಬಗೆಯ ಬೆಳೆಗಳ ಬೀಜಗಳಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಮೊದಲು 50 ಕೋಟಿ ರೂ., ಕಳೆದ ಭಾನುವಾರ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಕಳಪೆ ಬಿತ್ತನೆ ಬೀಜ ಮಾರಾಟ, ಹೆಚ್ಚಿನ ದರದಲ್ಲಿ ಬೀಜ ಹಾಗೂ ಗೊಬ್ಬರ ಮಾರಾಟ ಮಾಡುವ ಅಥಕೃತಕ ಅಭಾವ ಸೃಷ್ಟಿಸುವರನ್ನು ಕೃಷಿ ಇಲಾಖೆಯ ಜಾಗೃತ ದಳ ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಅಂತಹ ಯಾವುದೇ ಪ್ರಕರಣ ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಹಾಗೂ ಪರವಾನಗಿ ರದ್ದುಪಡಿಸಲಾಗುವುದು.
ದಾವಣಗೆರೆ ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಜೈವಿಕ ಕೀಟನಾಶಕ ಮಾರಾಟದ 59 ಪ್ರಕರಣ ಪತ್ತೆ ಹಚ್ಚಿ ಮೊಕದ್ದಮೆ ಹೂಡಲಾಗಿದೆ. ಕೃಷಿ ಪರಿಕರ ಮಾರಾಟ ಮಾಡುವ 10 ಅಂಗಡಿಗಳ ಪರವಾನಗಿ ರದ್ದು ಪಡಿಸಲಾಗಿದೆ ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ಡಾ| ಶ್ರೀನಿವಾಸ್ ಚಿಂತಾಲ್ ಮಾತನಾಡಿ, ಈ ವರ್ಷ 120 ಮಿಮೀ ವಾಡಿಕೆ ಮಳೆಗೆ 203 ಮಿಮೀ ಹೆಚ್ಚು ಮಳೆಯಾಗಿದೆ. ಮುಂಗಾರು ಹಂಗಾಮಿನಲ್ಲಿ 2.43 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಈವರೆಗೆ 8,002 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಒಟ್ಟು 46,922 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನಿದೆ.
ಈವರೆಗೆ ಒಟ್ಟು 29,345 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಲಾಗಿದೆ. ಒಟ್ಟು 40,798 ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ, ಹಾಗೂ ಗೊಬ್ಬರದ ಕೊರತೆ, ಅನಾನುಕೂಲವಾಗದಂತೆ ಕೃಷಿ ಸಾಮಗ್ರಿ ಪೂರೈಕೆಗೆ ಸರ್ಕಾರ ಬದ್ಧವಿದೆ ಎಂದರು. ಜಿಲ್ಲೆಯಲ್ಲಿ ಮೆಕ್ಕೆಜೋಳದೊಂದಿಗೆ ತೊಗರಿಯನ್ನು ಅಂತರ ಬೆಳೆಯಾಗಿ ಬೆಳೆಯುವಂತೆ ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಉತ್ತೇಜನ ನೀಡಬೇಕು. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಎಣ್ಣೆಕಾಳು ಹಾಗೂ ದ್ವಿದಳ ಧಾನ್ಯವನ್ನು ಅಂತರ ಬೆಳೆಯಾಗಿ ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ ಎಂದರು.
ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಮಾತನಾಡಿ, ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಅತ್ಯುತ್ತಮ ಬೆಳೆ ವಿಮಾ ಯೋಜನೆಯಾಗಿದೆ. ಅಧಿ ಕಾರಿಗಳು ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು. ಸಭೆಗೂ ಮುನ್ನ ಸಚಿವ ಬಿ.ಸಿ. ಪಾಟೀಲ್ ಕೃಷಿ ಜಾಗೃತಿ ಅಭಿಯಾನದ ವಿಶೇಷ ಪ್ರಚಾರ ವಾಹನಗಳಿಗೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.