ನೈಜ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗಲಿ


Team Udayavani, Jun 16, 2021, 9:55 PM IST

16-12

ದಾವಣಗೆರೆ: ಕೋವಿಡ್‌ ಎರಡನೇ ಅಲೆಯ ಲಾಕ್‌ ಡೌನ್‌ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರ ಎರಡು ಸಾವಿರ ರೂ. ಆರ್ಥಿಕ ನೆರವು ಘೋಷಿಸಿದೆ. ಸಂಕಷ್ಟದಲ್ಲಿರುವ ನೈಜ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ಪೂರ್ವಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಅಗಸರು, ûೌರಿಕರು, ದರ್ಜಿಗಳು, ಹಮಾಲಿ ಕಾರ್ಮಿಕರು, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್‌ಗಳು, ಕಮ್ಮಾರರು ಹಾಗೂ ಗೃಹ ಕಾರ್ಮಿಕರು ಸೇರಿದಂತೆ 11ವಲಯದ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆಯ ಮೂಲಕ ಒಂದು ಬಾರಿ ಪರಿಹಾರವಾಗಿ ಎರಡು ಸಾವಿರ ರೂ. ಗಳ ಆರ್ಥಿಕ ನೆರವು ನೀಡಲಾಗುತ್ತದೆ ಎಂದರು.

ಕಳೆದ ವರ್ಷ ಅಂದರೆ 2020ನೇ ಸಾಲಿನ ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಆರ್ಥಿಕ ನೆರವು ಪಡೆದ ಫಲಾನುಭವಿಗಳು ಮತ್ತೂಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಈ ಸಾಲಿನಲ್ಲಿ ನೆರವು ಪಡೆಯದ ಕುಟುಂಬದ ಓರ್ವ ಕಾರ್ಮಿಕ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ನೀಡಲು ಹಾಗೂ ಸಲ್ಲಿಸಲು ನಗರದಲ್ಲಿ ಪ್ರತ್ಯೇಕವಾಗಿ ವಿಶೇಷ ಕೌಂಟರ್‌ ಸ್ಥಾಪಿಸಬೇಕು ಹಾಗೂ ಅಗತ್ಯ ಸಿಬ್ಬಂದಿಗಳನ್ನು ಇದಕ್ಕಾಗಿಯೇ ನೇಮಕ ಮಾಡಿ ಜನರಿಗೆ ತೊಂದರೆಯಾಗದಂತೆ ಉದ್ಯೋಗ ಪ್ರಮಾಣ ಪತ್ರ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮೂರು ವಿಶೇಷ ಕೌಂಟರ್‌: ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಮಾತನಾಡಿ, ನಗರದಲ್ಲಿ ಈಗಾಗಲೇ ಒಟ್ಟು ಮೂರು ಕಡೆ ವಿಶೇಷವಾಗಿ ಕೌಂಟರ್‌ ಸ್ಥಾಪಿಸಲಾಗಿದೆ. ರಾಜೀವ್‌ ಗಾಂಧಿ ನಗರ, ಮಹಾನಗರಪಾಲಿಕೆ ಕಾರ್ಯಲಯ ಹಾಗೂ ಶಾಮನೂರು ರಸ್ತೆಯಲ್ಲಿರುವ ಆಶ್ರಯ ರಸ್ತೆ ಪಕ್ಕದಲ್ಲಿ ಒಂದು ಕಚೇರಿಯನ್ನು ತೆರೆದಿದ್ದು ಈ ಮೂರು ಕಡೆ ಉದ್ಯೋಗ ಪ್ರಮಾಣ ಪತ್ರ ನೀಡಲಾಗುತ್ತಿದೆ ಹಾಗೂ ಪ್ರತಿ ಕಚೇರಿಗೂ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಈ ಮೂರು ವಿಶೇಷ ಕಾರ್ಯಾಲಯದ ಮುಂದೆ ಜನರಿಗೆ ತಿಳಿಯುವಂತೆ ಫ್ಲೆಕ್ಸ್‌ ಪ್ರದರ್ಶನ ಫಲಕ ಹಾಕಬೇಕು. ಮಹಾನಗರಪಾಲಿಕೆ ಕಾರ್ಯಾಲಯದಲ್ಲಿ ಸಿಬ್ಬಂದಿಗಳನ್ನು ನೇಮಿಸಬೇಕು. ಸಂಬಂಧಿಸಿದ ಎಲ್ಲ ಅಧಿಕಾರಿಗಳು ಒಂದು ಸಮಯ ನಿಗದಿಪಡಿಸಿಕೊಂಡು ಆ ನಿರ್ದಿಷ್ಟ ಸಮಯದಲ್ಲಿ ಸ್ಥಳದಲ್ಲಿ ಹಾಜರಿದ್ದು, ಅರ್ಜಿದಾರರಿಗೆ ಉದ್ಯೋಗ ಪ್ರಮಾಣಪತ್ರ ನೀಡಬೇಕು. ಜನರನ್ನು ವಿನಾಕಾರಣ ಸುಮ್ಮನೆ ಕಾಯಿಸುವುದಾಗಲೀ, ಅನಗತ್ಯವಾಗಿ ಕಚೇರಿಗೆ ಅಲೆದಾಡುವ ರೀತಿ ಮಾಡಬಾರದು. ವಿಶೇಷ ಅಭಿಯಾನದ ರೀತಿಯಲ್ಲಿ ಈ ಕೆಲಸ ಆಗ ಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಟ್ಟಡ ಕಾರ್ಮಿಕರಿಗೆ ಈ ಯೋಜನೆಯಡಿ ಅವಕಾಶ ಇರುವುದಿಲ್ಲ. ಅವರಿಗಾಗಿ ಪ್ರತ್ಯೇಕ ಯೋಜನೆ ಇದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ವೃತ್ತಿಯಲ್ಲಿ ತೊಡಗಿದಲ್ಲಿ ಒಬ್ಬರು ಮಾತ್ರ ಪರಿಹಾರ ಪಡೆಯಲು ಅರ್ಹರಿರುತ್ತಾರೆ. ಒಬ್ಬ ವ್ಯಕ್ತಿ ಅಗಸರು ಎಂದು ಅರ್ಜಿ ಸಲ್ಲಿಸಿ ಆನಂತರ ಅಕ್ಕಸಾಲಿಗ, ಹಮಾಲಿ ಎಂದೋ ಅರ್ಜಿ ಸಲ್ಲಿಸಲು ಬರುವುದಿಲ್ಲ. ಒಂದು ಬಿಪಿಎಲ್‌ ಕಾರ್ಡ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಎಂದರು.

ಅರ್ಜಿ ಸಲ್ಲಿಕೆಗೆ ಷರತ್ತುಗಳು: ಪರವಾನಗಿ ಪಡೆದಿರುವ ಸಂಸ್ಥೆಯಲ್ಲಿ 4ಕ್ಕಿಂತ ಹೆಚ್ಚು ಕಾರ್ಮಿಕರು, ಪರವಾನಗಿ ಪಡೆಯದೇ ಇರುವ ಸಂಸ್ಥೆಯಲ್ಲಿ ಎರಡಕ್ಕಿಂತ ಹೆಚ್ಚು ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಲ್ಲಿ ತಪಾಸಣೆ ಕಡ್ಡಾಯವಾಗಿರುತ್ತದೆ. ಬೇರೆ ರಾಜ್ಯದ ಕಾರ್ಮಿಕರು ಸಹ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಆದರೆ ಅಂತಹ ಫಲಾನುಭವಿ ಕಾರ್ಮಿಕರು ಕರ್ನಾಟಕ ಸರ್ಕಾರ ನೀಡುವ ಬಿಪಿಎಲ್‌ ಕಾರ್ಡ್‌ ಹೊಂದಿರಬೇಕು. ಕುಟುಂಬದ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಫೋರ್ಟಲ್‌ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ವಯೋಮಿತಿಯನ್ನು 18-65 ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಈ ಯೋಜನೆಯ ಸೌಲಭ್ಯವನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಅರ್ಜಿ ಸಲ್ಲಿಸುವ ಕಾರ್ಮಿಕರು ವೃತ್ತಿ ನಿರ್ವಹಿಸುತ್ತಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಉದ್ಯೋಗ ಪ್ರಮಾಣ ಪತ್ರ ಪಡೆದಿರಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಸೀಲ್ದಾರರು, ಉಪ ತಹಶೀಲ್ದಾರರು, ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಹಮಾಲಿ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರು ಮೇಲ್ಕಂಡ ಅಧಿಕಾರಿಗಳು ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ, ಮಂಡಳಿ, ನಿಗಮದ ಅಧಿಕೃತ ಅಧಿಕಾರಿಗಳು, ಯಾವುದೇ ಇಲಾಖೆಯ ಪತ್ರಾಂಕಿತ ಅಧಿಕಾರಿಗಳಿಂದ ಉದ್ಯೋಗ ಪತ್ರ ಪಡೆಯಬಹುದು ಎಂದರು.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಫಲಾನುಭವಿ ಕಾರ್ಮಿಕರು ಸೇವಾಸಿಂಧು ಫೋರ್ಟಲ್‌ನಲ್ಲಿ ಮಾತ್ರ ಅಗತ್ಯ ಮಾಹಿತಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡುವುದು. ಆಧಾರ್‌ ಕಾರ್ಡ್‌, ವಿಳಾಸ ದೃಢೀಕರಣ, ಮೊಬೆ„ಲ್‌ ಸಂಖ್ಯೆ, ಜನ್ಮ ದಿನಾಂಕ, ಬಿಪಿಎಲ್‌ ಕಾರ್ಡ್‌, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಬ್ಯಾಂಕ್‌ ಖಾತೆಯ ವಿವರ, ಸ್ವಯಂ ಘೋಷಣೆ, ಅರ್ಜಿದಾರರ ವೃತ್ತಿಯ ಕುರಿತು ಉದ್ಯೋಗ ಪ್ರಮಾಣ ಪತ್ರಗಳನ್ನು ಸೇವಾ ಸಿಂಧು ಫೋರ್ಟಲ್‌ನಲ್ಲಿ ಸ್ಕಾನ್‌ ಮಾಡಿ ಅಪ್ಲೋಡ್‌ ಮಾಡಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಡಾ| ವಿಜಯಮಹಾಂತೇಶ ದಾನಮ್ಮನವರ್‌, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ನಜ್ಮಾ ಜಿ., ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್‌ ಜಿ., ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಎಸ್‌., ಎಪಿಎಂಸಿ ಕಾರ್ಯದರ್ಶಿ ಕೆ.ಸಿ. ದೊರೆಸ್ವಾಮಿ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಜೆ. ಪ್ರಭು ಸೇರಿದಂತೆ ವಿವಿಧ ವಲಯದ ಅಸಂಘಟಿತ ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!

Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!

It was not the Wright brothers who invented the airplane, but Rishi Bharadwaj: Governor

Anandiben Patel: ವಿಮಾನ ಅನ್ವೇಷಿಸಿದ್ದು ರೈಟ್‌ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ

A “bomb cyclone” explosion in an American prison soon!

bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್‌ ಸೈಕ್ಲೋನ್‌’ ಸ್ಫೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.