ಕೃಷಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನ
ಅನ್ನದಾತರು ಬೀದಿಗೆ ಬರುವ ಸ್ಥಿತಿ ನಿರ್ಮಾಣ
Team Udayavani, Jan 27, 2021, 2:57 PM IST
ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ರದ್ಧತಿಗೆ ಒತ್ತಾಯಿಸಿ ಮಂಗಳವಾರ ರೈತ-ಕಾರ್ಮಿಕ, ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಸಂಸ, ಎಐಕೆಎಸ್ ಸಂಘಟನೆಗಳ ನೇತೃತ್ವದಲ್ಲಿ ಟ್ರಾಕ್ಟರ್ ಪರೇಡ್, ಬಹಿರಂಗ ಸಭೆ ನಡೆಸುವ ಮೂಲಕ ದೆಹಲಿಯಲ್ಲಿ ನಡೆದ ಜನಗಣರಾಜ್ಯೋತ್ಸವಕ್ಕೆ ಭಾರೀ ಬೆಂಬಲ ಸೂಚಿಸಲಾಯಿತು.
ಹುಚ್ಚವನಹಳ್ಳಿ ಮಂಜುನಾಥ್ ಬಣದ ಮುಖಂಡರು 25ಕ್ಕೂ ಹೆಚ್ಚು ಟ್ರಾಕ್ಟರ್‌ಗಳಲ್ಲಿ ಪರೇಡ್ ನಡೆಸಲಾಯಿತು. ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದಂತೆ ಜಾರಿ ಮಾಡಿರುವ ಮೂರು ಕಾಯ್ದೆಗಳು ರೈತರ ಪಾಲಿಗೆ ಅಕ್ಷರಶಃ ಮರಣ ಶಾಸನ. ಕಾಯ್ದೆಗಳ ಪರಿಣಾಮ ಅನ್ನದಾತರು ಬೀದಿಗೆ ಬರುವಂತಹ ದಾರುಣ ಸ್ಥಿತಿ ನಿರ್ಮಾಣವಾಗಿಯೇ ತೀರುತ್ತದೆ. ರೈತರ ಜಮೀನು, ಗದ್ದೆ ಎಲ್ಲವು ಬಂಡವಾಳಗಾರರ ಪಾಲಾಗಲಿವೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಕರಾಳ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಾಯ್ದೆಗಳಿಂದ ಎಪಿಎಂಸಿ ಮುಚ್ಚುವುದಿಲ್ಲ. ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ ನೀಡಲಾಗಿದೆ
ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪ್ರಾರಂಭಿಕ ಹಂತದಲ್ಲಿ ಹೆಚ್ಚಿನ ಧಾರಣೆಯಲ್ಲಿ ಖರೀದಿ ಮಾಡಬಹುದು. ಎಪಿಎಂಸಿಗಳಲ್ಲಿನ ಮಂಡಿಗಳು ಮುಚ್ಚಿದ ನಂತರ ಕಾರ್ಪೋರೇಟ್ ಕಂಪನಿಗಳು ಕೇಳುವ ಬೆಲೆಗೆ ಮಾರಾಟ ಮಾಡಬೇಕಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಉತ್ಪನ್ನಗಳನ್ನು ಖರೀದಿಸದಂತೆ ಕಾಯ್ದೆ ಜಾರಿ ಮಾಡಬೇಕು. ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಉತ್ಪನ್ನಗಳನ್ನು ಖರೀದಿ ಮಾಡಿದರೆ ಲೈಸೆನ್ಸ್ ರದ್ದು ಮಾಡಬೇಕು. ಕ್ರಿಮಿನಲ್ ಪ್ರಕರಣ ದಾಖಲಿಸುವ ವ್ಯವಸ್ಥೆ ಆಗಬೇಕು. ಕನಿಷ್ಠ
ಬೆಂಬಲ ಬೆಲೆಗೆ ಕಾಯ್ದೆ ರೂಪ ನೀಡುವಂತೆ ಒತ್ತಾಯಿಸಿದರು.
ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ 142 ರೈತರು ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರ ರೈತರು ಹಾಗೂ ಕಾರ್ಮಿಕರ ಬೆನ್ನೆಲುಬು ಮುರಿದಿದೆ.
ಹೋರಾಟಗಾರರನ್ನು ಭಯೋತ್ಪಾದಕರಂತೆ ಎಂಬುದಾಗಿ ಕೇಂದ್ರ ಸರ್ಕಾರ ಬಿಂಬಿಸಿತು. ಹೀಗಿದ್ದರೆ 11 ಬಾರಿ ಸಭೆ ಏಕೆ ಮಾಡಬೇಕಿತ್ತು ಎಂದು ಪ್ರಶ್ನಿಸಿದರು. ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ, ಹುಚ್ಚವ್ವನಹಳ್ಳಿ ಮಂಜುನಾಥ್, ಆವರಗೆರೆ ವಾಸು, ಆವರಗೆರೆ ಚಂದ್ರು, ಆವರಗೆರೆ ಉಮೇಶ್, ಜಬೀನಾಖಾನಂ, ದಾಕ್ಷಾಯಣಮ್ಮ, ಕೊಂಡಜ್ಜಿ ಮಲ್ಲಿಕಾರ್ಜುನ, ಮಹಾಂತೇಶ್, ಗೀತಾ ಚಂದ್ರಶೇಖರ್, ಯಶೋಧಮ್ಮ, ರಾಜೇಶ್ವರಿ, ಇಂದ್ರಮ್ಮ, ಹೆಗ್ಗರೆ ರಂಗಪ್ಪ, ಪೂಜಾರ್ ಅಂಜಿನಪ್ಪ, ಗುಮ್ಮನೂರು ಬಸವರಾಜ್, ದೇವನಹಳ್ಳಿ ರವಿ, ಹೂವಿನಮಡು ಅಂಜಿನಪ್ಪ, ಆನಂದರಾಜ್, ಐರಣಿಚಂದ್ರು, ಕರಿಬಸಪ್ಪ, ಶ್ರೀನಿವಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.