![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 27, 2021, 3:02 PM IST
ಜಗಳೂರು: ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಟ್ರಾಕ್ಟರ್ ಪರೇಡ್‌ಗೆ ಬೆಂಬಲಿಸಿ ಕರ್ನಾಟಕ ರಾಜ್ಯರೈತ ಸಂಘ ಮತ್ತು ಹಸಿರುಸೇನೆ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಬೈಕ್ ಹಾಗೂ ಕಾಲ್ನಡಿಗೆ ಜಾಥಾ ಪ್ರಮುಖ ಬೀದಿಗಳ ಮೂಲಕ ಮಹಾತ್ಮಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಡಾ| ನಾಗವೇಣಿ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಚಿರಂಜೀವಿ ಸಿ.ಎಂ. ಹೊಳೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂರು ಸುಗ್ರೀವಾಜ್ಞೆಗಳನ್ನು ರದ್ದುಪಡಿಸಬೇಕು. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಜಾರಿಗೊಳಿಸಬೇಕು.
ಶೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಧಾನ್ಯ ಖರೀದಿಸುವವರ ಪರವಾನಗಿ ರದ್ದುಪಡಿಸಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಅಲ್ಲದೆ ಖಾಸಗೀಕರಣ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿದರು.
ಎಐಟಿಯುಸಿ ತಾಲೂಕು ಕಾರ್ಯದರ್ಶಿ ಮಹಮ್ಮದ್ ಭಾಷಾ, ಭಿಮ್ ಆರ್ಮಿ ಸಂಘಟನೆ ತಾಲೂಕು ಅಧ್ಯಕ್ಷ ಹನುಮಂತಪ್ಪ, ಡಿಎಸ್‌ಎಸ್ ತಾಲೂಕು ಅಧ್ಯಕ್ಷ ಸತೀಶ್ ಮಲೆಮಾಚಿಕೆರೆ, ಪ್ರಗತಿಪರ ಒಕ್ಕೂಟದ ಧನ್ಯಕುಮಾರ್, ಎಚ್.ಎಂ ಹೊಳೆ, ರಾಜಪ್ಪ ವ್ಯಾಸಗೊಂಡನಹಳ್ಳಿ, ಮಂಜುನಾಥ್ ಇತರರಿದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.