ಹಂದಿ ಹಾವಳಿ ನಿಯಂತ್ರಣಕ್ಕೆ ಸಚಿವರ ಸೂಚನೆ
Team Udayavani, Jun 30, 2021, 10:01 PM IST
ದಾವಣಗೆರೆ: ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಂದಿಗಳ ನಿಯಂತ್ರಣಕ್ಕೆ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಅಧಿ ಕಾರಿಗಳಿಗೆ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ನಗರ ಮಟ್ಟದ ಎಂಟನೇ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ. ಎಲ್ಲೆಂದರಲ್ಲಿ ಹಂದಿ, ಬೀದಿನಾಯಿಗಳ ಓಡಾಟ ಸರ್ವೇಸಾಮಾನ್ಯವಾಗಿದೆ. ಅನೇಕರಿಗೆ ಹಂದಿ ಕಚ್ಚಿದ ಪ್ರಸಂಗಗಳೂ ನಡೆದಿವೆ. ಪ್ರತ್ಯೇಕ ಜಾಗ ಮೀಸಲಿರಿಸಿ ಹಂದಿಗಳ ನಿಯಂತ್ರಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮಾತನಾಡಿ, ಈಗಾಗಲೇ ಹೆಬ್ಟಾಳು ಬಳಿ 6-7 ಎಕರೆ ಪ್ರದೇಶದಲ್ಲಿ ಹಂದಿಗಳ ದೊಡ್ಡಿ ನಿರ್ಮಿಸುವ ಮೂಲಕ ಸಮಸ್ಯೆ ನಿವಾರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಬೀದಿನಾಯಿ ದಾಳಿಯಿಂದ ಜನರಿಗೆ ತೊಂದರೆಯಾಗದಂತೆ ನಾಯಿಗಳಿಗೆ ಸಂತಾನಹರಣ ಲಸಿಕೆ ನೀಡಲಾಗುತ್ತಿದೆ ಎಂದರು.
ರಸ್ತೆಯಲ್ಲಿರುವ ಎಲ್ಲ ಫುಟ್‌ಪಾತ್ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಸೂಕ್ತ ಜಾಗ ಒದಗಿಸಿಕೊಡಬೇಕು. ಸ್ಥಳಾವಕಾಶ ಲಭ್ಯ ಇರುವ ಕಡೆ ಅಗತ್ಯ ಮೂಲಸೌಲಭ್ಯದೊಂದಿಗೆ ಫುಡ್ ಕೋರ್ಟ್ ತೆರೆಯಲು ಮುಂದಾಗಬೇಕು ಎಂದು ಸಚಿವರು ಹೇಳಿದರು. ಬೀದಿಬದಿ ವ್ಯಾಪಾರಿಗಳಿಗೆ ಮೀಸಲಿಟ್ಟಿರುವ ಸ್ಥಳದಲ್ಲೇ ವ್ಯಾಪಾರ ಮಾಡುತ್ತಿದ್ದಾರೆ.
ಕೆಲವರು ಮುಖ್ಯ ರಸ್ತೆಗಳ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಸಂಚಾರ ಕಿರಿಕಿರಿ, ಸ್ವತ್ಛತೆಗೆ ತಡೆಯಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದರು. ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ಕುಂದವಾಡ ಕೆರೆಯ ಸುತ್ತ ಬಂಡ್ ಸುಧಾರಣೆಯೊಂದಿಗೆ ಸೈಕಲ್ ಪಥ ಕಾಮಗಾರಿ ಪೂರ್ಣಗೊಳಿಸಲು ಕೆರೆಯ ನೀರನ್ನು ಖಾಲಿ ಮಾಡಿ ಜ. 2 ರಿಂದ ಕಾಮಗಾರಿ ಪ್ರಾರಂಭಿಸಲಾಗಿದೆ. ಯುವ ಭಾರತ ಗ್ರೀನ್ ಬ್ರಿಗೇಡ್‌ನಿಂದ ಕಾಮಗಾರಿ ಸ್ಥಗಿತಗೊಳಿಸುವಂತೆ ಹೈಕೋಟ್ ನಲ್ಲಿ ರಿಟ್ ಸಲ್ಲಿಸಿದ್ದು, ಕಾಮಗಾರಿ ಪಕ್ಕದಲ್ಲಿ ನಿರ್ವಹಿಸುತ್ತಿರುವ ರಾಜಕಾಲುವೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದರು.
ರವೀಂದ್ರ ಮಲ್ಲಾಪುರ ಮಾತನಾಡಿ, ದಾವಣಗೆರೆ ನಗರಕ್ಕೆ ಬೇಸಿಗೆ ಸೇರಿದಂತೆ ನಿರಂತರವಾಗಿ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ 0.20 ಟಿ.ಎಂ.ಸಿ ನೀರು ನಿರಂತರವಾಗಿ ಇರುವಂತೆ ನೋಡಿಕೊಳ್ಳಲು 76.11 ಕೋಟಿ ರೂ. ವೆಚ್ಚದಲ್ಲಿ ರಾಜನಹಳ್ಳಿ-ಮಾಕನೂರು ಗ್ರಾಮಗಳ ಬಳಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದೆ.
ಬ್ಯಾರೇಜ್ ನಿರ್ಮಾಣಕ್ಕೆ ನದಿಯ ಎರಡು ಬದಿಯಲ್ಲಿನ ಖಾಸಗಿ ಜಮೀನಿನಲ್ಲಿ ನಿರ್ಮಾಣ ಕಾರ್ಯ ಕೈಗೊಳ್ಳಬೇಕಿದ್ದು, ಅವಶ್ಯವಿರುವ ಭೂಮಿಯನ್ನು ಗುರುತಿಸಿ ಸ್ಥಳ ಪರಿಶೀಲಿಸಿ ಮಾಕನೂರು ಗ್ರಾಮದಲ್ಲಿ ಸುಮಾರು 5 ಎಕರೆ, ರಾಜನಹಳ್ಳಿ ಗ್ರಾಮದ 2 ಎಕರೆ ಭೂಮಿ ಸ್ವಾ ಧೀನಪಡಿಸಿ ಕೊಳ್ಳಬೇಕಾಗಿದೆ. ಆದರೆ ಮಾಲೀಕರು ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ದಾವೆ ಹೂಡಿದ್ದಾರೆ. ಭೂಮಿ ಅಳತೆಗೆ ತಕರಾರು ಮಾಡುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.
ಒಂದು ತಿಂಗಳಲ್ಲಿ ಸಮಸ್ಯೆ ಪರಿಹರಿಸಿಕೊಡಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಬೇಕು. ಸ್ಮಾರ್ಟ್ ಸಿಟಿಯಡಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಸಭೆಯಲ್ಲಿ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್.ಎ. ರವೀಂದ್ರನಾಥ್, ಮಹಾಪೌರ ಎಸ್.ಟಿ. ವೀರೇಶ್ ಇತರರು ಭಾಗಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.