ರಾಜ್ಯದಲ್ಲಿ ಕಾನೂನುಬದ್ಧ ಡಕಾಯಿತಿ


Team Udayavani, Jul 6, 2021, 9:48 PM IST

6-14

ದಾವಣಗೆರೆ: ರಾಜ್ಯದಲ್ಲಿ ಚಂಬಲ್‌ ಕಣಿವೆಯನ್ನೂ ನಾಚಿಸುವಂತೆ ಕಾನೂನುಬದ್ಧ ಡಕಾಯಿತಿ ನಡೆಯುತ್ತಿದೆ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂಬಲ್‌ ಕಣಿವೆಯಲ್ಲಿ ಕಾನೂನಿಗೆ ವಿರುದ್ಧ ಡಕಾಯತಿ ನಡೆಯತ್ತಿದ್ದರೆ, ರಾಜ್ಯದಲ್ಲಿ ಕಾನೂನುಬದ್ಧವಾಗಿಯೇ ಡಕಾಯತಿ ನಡೆಯುತ್ತಿದೆ ಎಂದು ದೂರಿದರು.

ಬಿಜೆಪಿಯ ನಾಯಕರೇ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 20 ಸಾವಿರ ಕೋಟಿ ರೂ. ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ. ವಿಜಯಪುರ ನಗರ ಶಾಸಕ ಬಸವನಗೌಡ ಯತ್ನಾಳ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ, ಸ್ವತಃ ಮುಖ್ಯಮಂತ್ರಿಗಳ ಪುತ್ರ ಸಚಿವರೊಬ್ಬರ ಪಿಎ ಮೇಲೆ ದೂರು ನೀಡಿದ್ದಾರೆ. ಆಪ್ತ ಸಹಾಯಕನ ಮೇಲೆ ದೂರು ನೀಡಿದರೆ ಸಚಿವರ ಮೇಲೆಯೇ ದೂರು ನೀಡಿದಂತಾಗುತ್ತದೆ ಎಂದರು. ಬಿಜೆಪಿ ಆಡಳಿತದಿಂದ ರೋಸಿಹೋಗಿರುವ ಜನರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100ಕ್ಕೆ 100 ರಷ್ಟು ತಕ್ಕ ಪಾಠ ಕಲಿಸಲಿದ್ದಾರೆ.

ಬಿಜೆಪಿ ಧೂಳಿಪಟವಾಗಲಿದೆ. ಕಾಂಗ್ರೆಸ್‌ಗೆ ಉಜ್ವಲ ಭವಿಷ್ಯ ಇದ್ದು, ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಪಕ್ಷಗಳು ಸರ್ಕಾರದೊಂದಿಗೆ ಒಂದಾಗಿವೆ ಎಂಬ ಯತ್ನಾಳ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಪಾಟೀಲ್‌, ಕಾಂಗ್ರೆಸ್‌ ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷ. ಕೊರೊನಾ ನಿರ್ಮೂಲನೆಗಾಗಿ ಸರ್ಕಾರದೊಂದಿಗೆ ಕೈ ಜೋಡಿಸಿದೆ ಅಷ್ಟೇ. ಅವರು ಮಾಡುವ ತಪ್ಪು, ಲೋಪಗಳ ಬಗ್ಗೆ ಹೇಳಿ ಹೋರಾಟ ಮಾಡುತ್ತೇವೆ. ಭ್ರಷ್ಟಾಚಾರದ ವಿರುದ್ಧ ಕಟಕಟೆಯಲ್ಲಿ ನಿಲ್ಲಿಸಿ, ತಕ್ಕ ಶಿಕ್ಷೆ ಆಗುವಂತೆ ನೋಡಿಕೊಳ್ಳುತ್ತೇವೆ.

ಸರ್ಕಾರದೊಂದಿಗೆ ಮಿಲಾಪಿ ಏನಿದೆ ಎಂದು ಪ್ರಶ್ನಿಸಿದರು. ನಾವು ಬಿಜೆಪಿಯವರಂತೆ ಕೋವಿಡ್‌ ನಿಯಮ ಉಲ್ಲಂಘನೆ ಮಾಡುವುದಿಲ್ಲ. ಕೋವಿಡ್‌ ನಿಯಮ ಪಾಲನೆ ಮಾಡಬೇಕಾಗಿರುವುದರಿಂದ ಜನರನ್ನು ಸೇರಿಸಿಕೊಂಡು ಹೋರಾಟ ಮಾಡಲಿಕ್ಕಾಗುವುದಿಲ್ಲ. ಬಿಜೆಪಿಯವರು ಮನೆಯಿಂದ ಹೊರಗೆ ಬರುವಾಗ ಕಾಂಗ್ರೆಸ್‌ನವರು ಇದ್ದಾರಾ ಎಂದು ನೋಡಿಕೊಂಡು ಬರುವಂತೆ ಪ್ರಖರವಾದ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌, ಸದಸ್ಯರಾದ ಕೆ. ಚಮನ್‌ ಸಾಬ್‌, ಜಿ.ಎಸ್‌. ಮಂಜುನಾಥ್‌, ವಕ್ತಾರ ಎಂ. ನಾಗೇಂದ್ರಪ್ಪ, ಎಲ್‌.ಎಂ.ಎಚ್‌. ಸಾಗರ್‌, ಅಲಿ ರಹಮತ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.