ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲ

Team Udayavani, Jul 8, 2021, 10:18 PM IST

8-16

ದಾವಣಗೆರೆ: ಕೊರೊನಾದಿಂದ ಮೃತಪಟ್ಟವರ ಬಗ್ಗೆ ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಆರೋಪಿಸಿದರು. ಪೆಟ್ರೋಲ್‌-ಡೀಸೆಲ್‌,ಅಡುಗೆ ಅನಿಲ ದರ ಹೆಚ್ಚಳ ಖಂಡಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಸೈಕಲ್‌ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ದೂರಿದರು. ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಮಾಹಿತಿ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಮಾಹಿತಿ ಪಡೆದಾಗ ಸತ್ತಿದ್ದು 36 ಜನ ಎಂಬುದು ಗೊತ್ತಾಯಿತು. ಸರ್ಕಾರ ಈ ರೀತಿ ಸಾವಿನ ಬಗ್ಗೆಯೂ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಅತಿ ಮುಖ್ಯವಾಗಿ ಬಳಸುವ ಟ್ರಾÂಕ್ಟರ್‌, ಪವರ್‌ ಟಿಲ್ಲರ್‌ಗಳಿಗೆ ಬೇಕಾದ ಡೀಸೆಲ್‌ ಬೆಲೆ ನೂರು ರೂಪಾಯಿ ದಾಟುತ್ತಿದೆ. ದಿನೇ ದಿನೇ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ಎಲ್ಲ ಅಂಶಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಪಕ್ಷ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಕಷ್ಟದಲ್ಲಿ ಇರುವಂತಹವರಿಗೆ ಅಗತ್ಯ ನೆರವು ನೀಡುವುದು ಕಾಂಗ್ರೆಸ್‌ನ ಸಿದ್ಧಾಂತ ಮತ್ತು ಬದ್ಧತೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರ ಅಭಿಲಾಷೆಯಂತೆ ನಾವು ಕೊರೊನಾದಿಂದ ಮೃತಪಟ್ಟವರ ಮನೆಗೆ ಹೋಗಿ ಸಾಂತ್ವನ ಹೇಳಿ ಕೈಲಾದಷ್ಟುನ ನೆರವು ನೀಡುವ ಕೆಲಸ ಮಾಡುತ್ತಿದ್ದೇವೆ. ನಾನು ಕೋಲಾರದಲ್ಲಿ ಈ ಕಾರ್ಯಕ್ರಮ ಪ್ರಾರಂಭಿಸಿದ್ದೇನೆ. ಮಾಜಿ ಸಚಿವ ಮಲ್ಲಿಕಾರ್ಜುನ್‌ ರವರು ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡುವ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.

ದೇಶದಲ್ಲಿ ಯಾವುದೇ ಜನಪ್ರತಿನಿಧಿ ಉಚಿತವಾಗಿ ಇಡೀ ಕ್ಷೇತ್ರದ ಜನರಿಗೆ ಕೊರೊನಾ ಲಸಿಕೆ ನೀಡಿದ ಉದಾಹರಣೆ ಇಲ್ಲ. ಅಂತಹ ಕೆಲಸವನ್ನು ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮಾತನಾಡಿ, ಪೆಟ್ರೋಲ್‌ ಡೀಸೆಲ್‌, ಅಡುಗೆ ಸಿಲಿಂಡರ್‌ ಬೆಲೆ ಹೆಚ್ಚಾಗಿದೆ. ಲೀಟರ್‌ ಪೆಟ್ರೋಲ್‌ ಬೆಲೆ 105-108 ರೂಪಾಯಿ ಆಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಬೆಲೆ ನಿಯಂತ್ರಣ ಮಾಡಬೇಕಾದ ಕಾಂಗ್ರೆಸ್‌ ಸರ್ಕಾರ ಬೇಕಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ಉಸ್ತುವಾರಿ ಗುರಪ್ಪ ನಾಯ್ಡು, ನಗರಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌, ಅನಿತಾಬಾಯಿ ಮಾಲತೇಶ್‌, ಡಿ. ಬಸವರಾಜ್‌, ಕೆ.ಎಸ್‌. ಬಸವಂತಪ್ಪ, ಅಬ್ದುಲ್‌ ಲತೀಫ್‌, ಜೆ.ಡಿ. ಪ್ರಕಾಶ್‌, ಕೆ. ಚಮನ್‌ ಸಾಬ್‌, ಜಿ.ಎಸ್‌. ಮಂಜುನಾಥ್‌, ವಿನಾಯಕ ಪೈಲ್ವಾನ್‌, ಸುಧಾ ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.