ಕೆಲಸ ಮಾಡಲಾಗದಿದ್ರೆ ಜಿಲ್ಲೆ ಬಿಟ್ಟು ಹೋಗಿ


Team Udayavani, Jul 9, 2021, 9:14 PM IST

9-11

ದಾವಣಗೆರೆ: “ಸರಿಯಾಗಿ ಕೆಲಸ ಮಾಡುವುದಾದರೆ ಮಾಡಿ. ಇಲ್ಲ ಅಂದರೆ ನಮ್ಮ ಜಿಲ್ಲೆ ಬಿಟ್ಟು ಹೋಗಿ. ನಮ್ಮ ಜಿಲ್ಲೆಗೆ ಬರಲೇಬೇಡಿ. ಅಧಿಕಾರಿಗಳು ಏನೇನೋ ಹೇಳುವುದನ್ನು ಕೇಳಲಿಕ್ಕೆ ಸಭೆ ನಡೆಸಬೇಕಾ?’ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಯೋಜನೆ ಪ್ರಗತಿ ಪರಿಶೀಲನೆ ಮತ್ತು ಮುಂದಿನ ಕ್ರಮಗಳ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿಯಿದು.

ಹತ್ತು ವರ್ಷವಾದರೂ ರಾಷ್ಟ್ರೀಯ ಹೆದ್ದಾರಿ ಸರಿಯಾಗಿ ಅಗಿಲ್ಲ. ಸೇವಾ ರಸ್ತೆಗಳೇ ಇಲ್ಲ. ಅಪಘಾತ ವಲಯ ಆದಂತಿದೆ. ಅಪಘಾತ ಸಂಭವಿಸಿ ಜನರು ಏನಾದರೂ ನೀವು ಪ್ರಾಧಿಕಾರದವರು ಜೀವ, ಪರಿಹಾರ ಕೊಡುತೀ¤ರಾ ಎಂದು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀನಿವಾಸುಲು ನಾಯ್ಡು ಅವರನ್ನು ಪ್ರಶ್ನಿಸಿದರು. ಕಳೆದ ಮಾ. 23 ರಂದು ನಡೆದ ಸಭೆಯಲ್ಲಿ ಪ್ರಾದೇಶಿಕ ಅಧಿಕಾರಿ ಅಕ್ಟೋಬರ್‌ ವೇಳೆಗೆ ಎಲ್ಲ ಕಾಮಗಾರಿ ಮುಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಆದರೆ ಈವರೆಗೆ ನಾನು ಹೇಳಿರುವ ಕಡೆಯಲ್ಲಿ ಸೇವಾ ರಸ್ತೆಯೇ ಆಗಿಲ್ಲ. ಶಾಮನೂರು ಬಳಿ ಹೈಟೆನÒನ್‌ ವಿದ್ಯುತ್‌ ಕಂಬ ತೆರವುಗೊಳಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗುತ್ತಿಗೆದಾರ ಓಡಿ ಹೋಗಿದ್ದಾನೆ ಎಂದು ಅಧಿಕಾರಿ ತಿಳಿಸಿದಾಗ, ನೀವು ಕೂಡ ಗುತ್ತಿಗೆದಾರನೊಂದಿಗೆ ಓಡಿ ಹೋಗಬೇಕಿತ್ತು ಎಂದರು.

ನಾಳೆಯೇ ಸ್ಥಳ ಪರಿಶೀಲನೆ ನಡೆಸಿ ವಿದ್ಯುತ್‌ ಕಂಬ ತೆರವಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ಗುತ್ತಿಗೆ ಪಡೆದವರು ನಿಗದಿತ ಅವಧಿಯಲ್ಲಿ ಕೆಲಸ ಮಾಡದೇ ಇರುವ ಕಾರಣಕ್ಕೆ ಈಗ ಹೊಸದಾಗಿ ಬಿಡ್ಡಿಂಗ್‌ ಮಾಡಲಾಗುವುದು. ಆದಷ್ಟು ಬೇಗ ಗುತ್ತಿಗೆದಾರರನ್ನು ನಿಗದಿಪಡಿಸಲಾಗುವುದು ಎಂದು ಪ್ರಾಧಿಕಾರದ ಜಂಟಿ ಸಲಹೆಗಾರ ಮಲ್ಲಿಕಾರ್ಜುನ್‌ ತಿಳಿಸಿದರು. ಆವರಗೆರೆ ಸಮೀಪದ ಚಿಂದೋಡಿ ಲೀಲಾ ಸಮಾಧಿ ಬಳಿ ದಾವಣಗೆರೆಗೆ ಮುಖ್ಯ ಪ್ರವೇಶ ದ್ವಾರ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೂ ಕೆಲಸ ಆಗಿಲ್ಲ ಎಂದು ಸಿದ್ದೇಶ್ವರ ಬೇಸರ ವ್ಯಕ್ತಪಡಿಸಿದರು.

ಪ್ರವೇಶ ದ್ವಾರದ ವಿನ್ಯಾಸ ಕೆಲಸ ನಡೆಯುತ್ತಿದ್ದು, ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಪ್ರಾಧಿಕಾರದ ಅಧಿಕಾರಿ ತಿಳಿಸಿದರು. ವಿನ್ಯಾಸ ಪೂರ್ತಿಗೊಳಿಸಿದ ನಂತರ ತಮಗೆ ಹಾಗೂ ಸಂಸದರಿಗೆ ತೋರಿಸಿದ ಬಳಿಕವೇ ಮುಂದಿನ ಹಂತಕ್ಕೆ ಹೋಗಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ, ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಭೂಸ್ವಾಧೀನಕ್ಕೆ ಅಡ್ಡಿಪಡಿಸುವಂತಹ ಕಡೆಗಳಲ್ಲಿ ಶುಕ್ರವಾರವೇ ಅಗತ್ಯ ಪೊಲೀಸ್‌ ಬಂದೋಬಸ್ತ್ನೊಂದಿಗೆ ಸ್ಥಳಕ್ಕೆ ತೆರಳಿ ಭೂಸ್ವಾಧೀನ ಮಾಡಿಕೊಳ್ಳ ಬೇಕು.

ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಿಳಿಸಿದರು. ಲಕ್ಕಮುತ್ತೇನಹಳ್ಳಿ ಬಳಿ ಮೇಲ್ಸೇತುವೆ ಆಗಲೇಬೇಕು. ಗುಂಡಿಗಳನ್ನು ಮುಚ್ಚಿಸಬೇಕು. ಕೆಳ ಸೇತುವೆಗಳಲ್ಲಿ ಮಳೆ ನೀರು ನಿಲ್ಲದಂತೆ ಸರಿಯಾಗಿ ಕೆಲಸ ಮಾಡಬೇಕು. ಬನಶಂಕರಿ ಬಡಾವಣೆ ಒಳಗೊಂಡಂತೆ ಅಗತ್ಯ ಇರುವ ಕಡೆ ಸೇವಾ ರಸ್ತೆ ನಿರ್ಮಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮಾಯಕೊಂಡ ಶಾಸಕ ಪ್ರೊ| ಎನ್‌. ಲಿಂಗಣ್ಣ, ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌, ನೀರಾವರಿ ನಿಗಮದ ಮುಖ್ಯ ಇಂಜಿನಿಯರ್‌ ಯತೀಶ್‌ಚಂದ್ರ ಮತ್ತಿತರ ಅಧಿಕಾರಿಗಳು ಭಾಗವಹಿದ್ದರು.

ಟಾಪ್ ನ್ಯೂಸ್

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.