ಲೋಕ ಕಲ್ಯಾಣಾರ್ಥ ಮೃತ್ಯುಂಜಯ-ಧನ್ವಂತರಿ ಹೋಮ
Team Udayavani, Jul 20, 2021, 6:03 PM IST
ಹೊನ್ನಾಳಿ: ಲೋಕ ಕಲ್ಯಾಣಾರ್ಥ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಆರೋಗ್ಯ ವೃದ್ಧಿಗೆ ಪ್ರಾರ್ಥಿಸಿ ರೇಣುಕಾಚಾರ್ಯ ಜನಸೇವಾ ಟ್ರಸ್ಟ್ ವತಿಯಿಂದ ಇಲ್ಲಿನ ಹಿರೇಕಲ್ಮಠದಲ್ಲಿ ಸೋಮವಾರ ಮೃತ್ಯುಂಜಯ ಹಾಗೂ ಧನ್ವಂತರಿ ಹೋಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ಜನರ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿ ಹೋಮ ಮಾಡಲಾಗಿದೆ.
ಈಗಾಗಲೇ ಕೊರೊನಾ ಎರಡನೇ ಅಲೆ ಕಡಿಮೆಯಾಗಿ¨ದ್ದು, ಮೂರನೇ ಅಲೆ ಬರುತ್ತದೆಂದು ತಜ್ಞರು ಹೇಳುತ್ತಿದ್ದಾರೆ. ಮೂರನೇ ಅಲೆ ಬರಬಾರದೆಂದು ದೇವರಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದರು. ಧನ್ವಂತರಿ ಹೋಮ ಮಾಡುವುದರಿಂದ ಪರಿಸರ ಶುದ್ಧಿಯಾಗಿ ವೈರಸ್ ನಿವಾರಣೆಯಾಗುತ್ತದೆ ಎಂಬ ಪ್ರತೀತಿ ಇದೆ. ಅದರ ಜೊತೆಗೆ ಮೃತ್ಯುಂಜಯ ಹೋಮ ಮಾಡುವುದರಿಂದ ಅಪಮೃತ್ಯುವನ್ನು ತಡೆಯಲು ಈ ಎರಡು ಹೋಮ ಮಾಡಿದ್ದೇವೆ.
ಕೋವಿಡ್ ಕೇರ್ ಸೆಂಟರ್‌ನಲ್ಲಿ ಲೋಕಕ್ಕೆ ಒಳಿತಾಗಲಿ ಎಂದು ಹೋಮ ಮಾಡಿದ್ದಕ್ಕೆ ವಿಪಕ್ಷದವರು ಅಪಪ್ರಚಾರ ಮಾಡಿದ್ದರು. ಎಲ್ಲರೂ ಗುಣಮುಖರಾದ ಮೇಲೆ ಮಠದಲ್ಲಿ ಹೋಮ ಮಾಡುವಂತೆ ಸಲಹೆ ನೀಡಿದ್ದೆ ಎಂದರು.
ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜನಸೇವಾ ಟ್ರಸ್ಟ್ ಗೌರವಾಧ್ಯಕ್ಷ ಚೀಲೂರು ಲೋಕೇಶ್, ಅಧ್ಯಕ್ಷ ಕೋಟೆಮಲ್ಲೂರು ಮನೋಜ್, ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಬೀರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.