ಮಳೆ ಹಾನಿ ಪ್ರದೇಶಕ್ಕೆ ರೇಣುಕಾಚಾರ್ಯ ಭೇಟಿ

Team Udayavani, Jul 26, 2021, 6:19 PM IST

25-8

ಹೊನ್ನಾಳಿ: ಕಳೆದ ಕೆಲ ದಿನಗಳಿಂದ ನ್ಯಾಮತಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಅಪಾರ ನಷ್ಟವನ್ನುಂಟು ಮಾಡಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನ್ಯಾಮತಿ ತಾಲೂಕಿನ ಕೊಡತಾಳು, ಮಾದಾಪುರ, ಹೊಸಜೋಗ, ಹಳೇಜೋಗ, ಸೂರಗೊಂಡನಕೊಪ್ಪ, ಚಿನ್ನಿಕಟ್ಟೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು, ಮಳೆಯಿಂದ ಹಾನಿಯಾದ ಬಗ್ಗೆ ಅ ಧಿಕಾರಿಗಳ ಬಳಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಮಳೆಯಿಂದಾಗಿ 107 ಮನೆಗಳಿಗೆ ಹಾನಿಯಾಗಿದೆ.

ಕೆರೆ ಕಟ್ಟೆಗಳು ತುಂಬಿದ ಪರಿಣಾಮ ಕೆಲ ಕೆರೆಗಳಿಗೆ ಹಾನಿಯಾಗಿ ಕೆರೆಯ ನೀರು ರೈತರ ಜಮೀನಿಗೆ ನುಗ್ಗಿದ ಪರಿಣಾಮ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮತ್ತೆ ಕೆಲವು ಬೆಳೆಗಳು ಜಲಾವೃತವಾಗಿವೆ ಎಂದರು. ಮೆಕ್ಕೆಜೋಳ ಬಿತ್ತಿದಾಗ ರೈತರ ಮಳೆ ಬಾರದೆ ಕಂಗಾಲಾಗಿ ಮೆಕ್ಕೆಜೋಳ ತೆಗೆದು ಹಾಕಲು ಮುಂದಾಗಿದ್ದರು. ಆದರೆ ಈಗ ವಿಪರೀತ ಮಳೆಯಾಗಿ ನೂರಾರು ಎಕರೆ ಬೆಳೆ ನೀರಿನಲ್ಲಿ ಮುಳುಗಿದ್ದು ನೋವುಂಟು ಮಾಡಿದೆ. ಅವಳಿ ತಾಲೂಕಿನಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ದೆಹಲಿಯಿಂದ ನೇರವಾಗಿ ಹೊನ್ನಾಳಿಗೆ ಬಂದು ಹಾನಿಗೊಳಗಾದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ.

ನನಗೆ ರಾಜಕಾರಣಕ್ಕಿಂತ ಕ್ಷೇತ್ರದ ಜನರೇ ಮುಖ್ಯ. ಕ್ಷೇತ್ರದ ರೈತರ ಬದುಕು ಹಸನಾಗಬೇಕೆಂದು ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು. ಹಾನಿ ಬಗ್ಗೆ ಸಮೀಕ್ಷೆ ನಡೆಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

460 ಕೋಟಿ ರೂ. ವೆಚ್ಚದಲ್ಲಿ ಅವಳಿ ತಾಲೂಕಿನ ಕೆರೆ ತುಂಬಿಸುವ ಯೋಜನೆಗೆ ಈಗಾಗಲೆ ಟೆಂಡರ್‌ ಆಗಿದೆ. ಮಳೆಗಾಲ ಮುಗಿದ ನಂತರ ಕಾಮಗಾರಿ ಆರಂಭವಾಗಲಿದೆ ಎಂದ ರೇಣುಕಾಚಾರ್ಯ, ಕೆರೆಯಲ್ಲಿನ ಬಂಡುಗಳು ಸೇರಿದಂತೆ ಹೂಳೆತ್ತಲು ಹಣ ಮೀಡಲಿಡಲಾಗಿದೆ. ಮುಂದಿನ ದಿನಗಳಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯ ವೇಗ ಪಡೆದುಕೊಳ್ಳಲಿದೆ ಎಂದರು. ನ್ಯಾಮತಿ ತಾಲೂಕು ತಹಶೀಲ್ದಾರ್‌ ತನುಜಾ ಟಿ. ಸವದತ್ತಿ, ಉಪ ತಹಶೀಲ್ದಾರ್‌ ನಾಗರಾಜ್‌ ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.